ETV Bharat / entertainment

ಬ್ಯಾಚುಲರ್ ಪಾರ್ಟಿ ಜೊತೆಗೆ ಇಬ್ಬನಿ ತಬ್ಬಿದ ಇಳೆಯಲಿ ಚಿತ್ರ ನಿರ್ಮಿಸುತ್ತಿರುವ ರಕ್ಷಿತ್ ಶೆಟ್ಟಿ - ನಟ ದಿಗಂತ್

ಯುವಪ್ರತಿಭೆಗಳಿಂದ ನಿರ್ಮಾಣವಾಗುತ್ತಿರುವ ಬ್ಯಾಚುಲರ್ ಪಾರ್ಟಿ ಮತ್ತು ಇಬ್ಬನಿ ತಬ್ಬಿದ ಇಳೆಯಲಿ ಸಿನೆಮಾದ ಮುಹೂರ್ತ ಇತ್ತೀಚಿಗೆ ನಡೆಯಿತು.

bachelor-party-and-ibbani-tabbida-ileyali-movie-produced-by-rakshit-shetty
ಬ್ಯಾಚುಲರ್ ಪಾರ್ಟಿ ಜೊತೆಗೆ ಇಬ್ಬನಿ ತಬ್ಬಿದ ಇಳೆಯಲಿ ಚಿತ್ರ ನಿರ್ಮಿಸುತ್ತಿರುವ ರಕ್ಷಿತ್ ಶೆಟ್ಟಿ
author img

By

Published : Sep 3, 2022, 7:22 PM IST

ರಕ್ಷಿತ್ ಶೆಟ್ಟಿ ಈಗ ಕೇವಲ ನಾಯಕನಟರಾಗಷ್ಟೇ ಅಲ್ಲ. ನಿರ್ಮಾಪಕರಾಗಿಯೂ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ತಮ್ಮ ಪರಂವಃ ಸ್ಟುಡಿಯೋಸ್ ಮೂಲಕ ಯುವಪ್ರತಿಭೆಗಳಿಗೆ ಅವಕಾಶ ನೀಡುತ್ತಿದ್ದಾರೆ. ಸದ್ಯ ಪರಂವಃ ಸ್ಟುಡಿಯೋಸ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ "ಬ್ಯಾಚುಲರ್ ಪಾರ್ಟಿ" ಹಾಗೂ "ಇಬ್ಬನಿ ತಬ್ಬಿದ ಇಳೆಯಲಿ" ಚಿತ್ರಗಳ ಮುಹೂರ್ತ ಸಮಾರಂಭ ಇತ್ತೀಚೆಗೆ ಧರ್ಮಗಿರಿ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.

bachelor-party-and-ibbani-tabbida-ileyali-movie-produced-by-rakshit-shetty
ರಿಷಭ್ ಶೆಟ್ಟಿ,ರಕ್ಷಿತ್ ಶೆಟ್ಟಿ,ದಿಗಂತ್

ಬಳಿಕ ಮಾತನಾಡಿದ ರಕ್ಷಿತ್ ಶೆಟ್ಟಿ, ಚಿತ್ರರಂಗದಲ್ಲಿ ಹೊಸರೀತಿಯ ಕಥೆಗಳು ಬರಬೇಕು. ಹೊಸರೀತಿಯಲ್ಲಿ ಯೋಚಿಸುವ ಕಥೆಗಾರರನ್ನು ನಾವು ಬರಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ನಮ್ಮ ಪರಂವಃ ಸ್ಟುಡಿಯೋಸ್ ಸದಾ ಸಿದ್ದ. ನನ್ನ ಜೊತೆ "ಕಿರಿಕ್ ಪಾರ್ಟಿ" ಸಮಯದಿಂದ ಜೊತೆಗಿರುವ ಚಂದ್ರಜಿತ್ ಬೆಳ್ಳಿಯಪ್ಪ "ಇಬ್ಬನಿ ತಬ್ಬಿದ ಇಳೆಯಲಿ" ಚಿತ್ರವನ್ನು ಹಾಗೂ ಅಭಿಜಿತ್ ಮಹೇಶ್ "ಬ್ಯಾಚುಲರ್ ಪಾರ್ಟಿ" ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಎರಡು ಬೇರೆಯದೇ ತರಹದ ಕಥೆಗಳು ಎಂದು ಹೇಳಿದರು.

ಚಿತ್ರತಂಡದಿಂದ ಮುಹೂರ್ತ

ಬ್ಯಾಚುಲರ್ ಪಾರ್ಟಿ ಸಿನಿಮಾದ ನಿರ್ದೇಶಕ ಅಭಿಜಿತ್ ಮಹೇಶ್ ಮಾತನಾಡಿ, ನನಗೆ ಅವಕಾಶ ನೀಡಿದ ರಕ್ಷಿತ್ ಶೆಟ್ಟಿ ಅವರಿಗೆ ಧನ್ಯವಾದ. "ಬ್ಯಾಚುಲರ್ ಪಾರ್ಟಿ" ಹಾಸ್ಯ ಪ್ರಧಾನವಾದ ಉತ್ತಮ ಮನೋರಂಜನೆಯ ಚಿತ್ರ. ದಿಗಂತ್ ಮಂಚಾಲೆ, ರಿಷಭ್ ಶೆಟ್ಟಿ, ಅಚ್ಯುತಕುಮಾರ್, ಸಿರಿ ರವಿಕುಮಾರ್ ಮುಂತಾದವರು ಈ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತದೆ ಎಂದು ಹೇಳಿದರು.

ಬ್ಯಾಚುಲರ್ ಪಾರ್ಟಿ ಮತ್ತು ಇಬ್ಬನಿ ತಬ್ಬಿದ ಇಳೆಯಲಿ ಚಿತ್ರತಂಡ

ಬಳಿಕ ಮಾತನಾಡಿದ ರಿಷಭ್ ಶೆಟ್ಟಿ,ನಾನು, ಅಭಿಜಿತ್ ಹಾಗೂ ಚಂದ್ರಜಿತ್ ಒಟ್ಟಾಗಿ "ಕಿರಿಕ್ ಪಾರ್ಟಿ" ಯಲ್ಲಿ ಕೆಲಸ ಮಾಡಿದವರು. ಈಗ ಮತ್ತೊಮ್ಮೆ ಒಟ್ಟಾಗಿ ಸೇರಿದ್ದೇವೆ‌. ಅಭಿಜಿತ್ ಮಹೇಶ್ "ಬ್ಯಾಚುಲರ್ ಪಾರ್ಟಿ" ಯಲ್ಲಿ ಒಳ್ಳೆಯ ಪಾತ್ರ ನೀಡಿದ್ದಾರೆ. ಎರಡೂ ತಂಡಕ್ಕೂ ಒಳಿತಾಗಲಿ ಎಂದು ಹೇಳಿದರು.

ನಟ ದಿಗಂತ್ ಮಾತನಾಡಿ, ನನಗೆ ಪರಂವಃ ಸ್ಟುಡಿಯೋಸ್ ನಲ್ಲಿ ಇದು ಎರಡನೇ ಚಿತ್ರ. ಅಭಿಜಿತ್ ಮಹೇಶ್ ಮಾಡಿಕೊಂಡಿರುವ ಕಥೆ ಚೆನ್ನಾಗಿದೆ. ಎಲ್ಲರನ್ನು ನಕ್ಕು ನಗಿಸುವ ಉತ್ತಮ ಕಾಮಿಡಿ ಜಾನರ್ ನ ಚಿತ್ರ ಎಂದರು. ಈ ಸಂದರ್ಭದಲ್ಲಿ ಚಿತ್ರದಲ್ಲಿ ಅಭಿನಯಿಸುತ್ತಿರುವ ಸಿರಿ ರವಿಕುಮಾರ್ ಹಾಗೂ ಜಯಲಕ್ಷ್ಮಿ ಉಪಸ್ಥಿತರಿದ್ದರು.

bachelor-party-and-ibbani-tabbida-ileyali-movie-produced-by-rakshit-shetty
ಬ್ಯಾಚುಲರ್ ಪಾರ್ಟಿ ಜೊತೆಗೆ ಇಬ್ಬನಿ ತಬ್ಬಿದ ಇಳೆಯಲಿ ಚಿತ್ರ ನಿರ್ಮಿಸುತ್ತಿರುವ ರಕ್ಷಿತ್ ಶೆಟ್ಟಿ

ಇನ್ನು ಇಬ್ಬನಿ ತಬ್ಬಿದ ಇಳೆಯಲಿ ಸಿನೆಮಾದ ನಿರ್ದೇಶಕ ಚಂದ್ರಜಿತ್ ಬೆಳ್ಳಿಯಪ್ಪ ಮಾತನಾಡಿ, ಚಿತ್ರದ ಆರಂಭದ ದಿನಗಳಿಂದಲೂ ನನ್ನ ತಂಡಕ್ಕೆ ಒಳ್ಳೆಯ ಕನಸುಗಳನ್ನು ತುಂಬಿದ್ದೀನಿ. ಅವರ ಕನಸುಗಳನ್ನು ನನಸು ಮಾಡುವ ಜವಾಬ್ದಾರಿ ನನ್ನ ಮೇಲಿದೆ. ನನ್ನ ನಂಬಿ ಬಂಡವಾಳ ಹಾಕಿರುವ ನಿರ್ಮಾಪಕರಿಗೆ ಹಣ ವಾಪಸು ಬರಬೇಕು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದರು.‌

ನೋಡಿದ ಜನ ಕೆಲವು ವರ್ಷಗಳವರೆಗೂ ನೆನಪಿನಲ್ಲಿಟ್ಟಿಕೊಳ್ಳಬೇಕು ಅಂತಹ ಸಿನಿಮಾ ಮಾಡಲು ಪ್ರಯತ್ನ ಮಾಡುತ್ತೇನೆ. ರಾತ್ರಿ ಮಲಗಿದ್ದಾಗ ಒಂದು ಒಳ್ಳೆಯ ಕನಸು ಬೀಳುತ್ತದೆ. ಆ ಕನಸಿನಿಂದ ಬೆಳಗ್ಗೆ ಎದ್ದ ಕೂಡಲೇ ಒಂದು ತರಹ ಉತ್ಸಾಹವಿರುತ್ತದೆ. ಆ ರೀತಿ ನಮ್ಮ ಚಿತ್ರದ ಕಥೆ ಸಾಗುತ್ತದೆ. "ಇಬ್ಬನಿ ತಬ್ಬಿದ ಇಳೆಯಲಿ" ಒಂದೊಳ್ಳೆ ರೊಮ್ಯಾನ್ಸ್ ಡ್ರಾಮ ಎಂದು ಹೇಳಿದರು.

ಇಂತಹ ಒಳ್ಳೆಯ ತಂಡದೊಂದಿಗೆ ಭಾಗಿಯಾಗಿರುವುದಕ್ಕೆ ಸಂತೋಷವಾಗಿದೆ ಎಂದು ನಾಯಕ ವಿಹಾನ್ ತಿಳಿಸಿದರು. ಚಿತ್ರದ ನಾಯಕಿ ಅಂಕಿತಾ ಅಮರ್ ಮಾತನಾಡಿ, ಇಬ್ಬನಿ ತಬ್ಬಿದ ಇಳೆಯಲಿ" ಚಿತ್ರದಲ್ಲಿ ಅಭಿನಯಿಸುತ್ತಿರುವುದು ಖುಷಿ ತಂದಿದೆ. ಪಾತ್ರ ಕೂಡ ಚೆನ್ನಾಗಿದೆ.‌ ಇದು ನನ್ನ ಮೊದಲ ಚಿತ್ರ ಎಂದು ಹೇಳಿದರು.

ಇದನ್ನೂ ಓದಿ : ಯುವ ನಟ ಕಿರೀಟಿ ಸಿನಿಮಾ ಸೆಟ್​​​ಗೆ ಸರ್ಪ್ರೈಸ್ ವಿಸಿಟ್ ಕೊಟ್ಟ ಶಿವಣ್ಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.