ETV Bharat / entertainment

ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪ ಪ್ರಕರಣ: ನಟ ಚೇತನ್​ಗೆ ಜಾಮೀನು

14 ದಿನಗಳ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರಿ​ಗೆ ಜಾಮೀನು ಮಂಜೂರಾಗಿದೆ.

Bail for sandalwood actor Chetan
ನಟ ಚೇತನ್​ಗೆ ಜಾಮೀನು
author img

By

Published : Mar 23, 2023, 7:32 PM IST

Updated : Mar 23, 2023, 9:10 PM IST

ಸೋಶಿಯಲ್​ ಮೀಡಿಯಾ ಪ್ಲಾಟ್​ಫಾರ್ಮ್​​ಗಳಲ್ಲಿ ಹಿಂದೂ ವಿರೋಧಿ‌ ಪೋಸ್ಟ್ ಮಾಡಿರುವ ಆರೋಪ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ನಟ ಚೇತನ್ ಅವರಿ​ಗೆ ಜಾಮೀನು ಮಂಜೂರಾಗಿದೆ. 32ನೇ ಹೆಚ್ಚುವರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಜೆ ಲತಾ ಅವರಿಂದ ಆದೇಶ ಹೊರಡಿಸಲಾಗಿದೆ. 25 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ಬರೆಸಿ, ಒಬ್ಬರ ಭದ್ರತೆ ನೀಡಲು ಸೂಚನೆ ನೀಡಲಾಗಿದೆ.

ಜಾಮೀನು ಮಂಜೂರು: ಇದೇ 21ರಂದು ನಟ ಚೇತನ್ ಅಹಿಂಸಾ ಅವರನ್ನು ಶೇಷಾದ್ರಿಪುರಂ ಪೊಲೀಸರು ಅರೆಸ್ಟ್ ಮಾಡಿದ್ದರು. ಎಸಿಎಂಎಂ ಕೋರ್ಟ್‌ಗೆ ನಟ ಚೇತನ್​ ಅವರನ್ನು ಹಾಜರುಪಡಿಸಲಾಗಿದ್ದು, ಅಂದು ಕೋರ್ಟ್‌ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗ 32ನೇ ಎಸಿಎಂಎಂ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.

ಪ್ರಕರಣ: ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅವರು ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು ಎಂದು ಹಿಂದೂಪರ ಕಾರ್ಯಕರ್ತ ಶಿವಕುಮಾರ್ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಈ ದೂರಿನನ್ವಯ ಮಂಗಳವಾರ ಬೆಳಗ್ಗೆ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಅರೆಸ್ಟ್ ಮಾಡಿದ್ದರು. ಬಲಿಕ ನಗರದ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ್ದು. ಮಂಗಳವಾರ ನಟನಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.

FIR: ನಟ ಚೇತನ್ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ. ಜಾತಿಗಳ ನಡುವೆ ವೈಮನಸ್ಸು ಉಂಟು ಮಾಡಿ ಕೋಮುಗಲಭೆಗೆ ಪ್ರಚೋದನೆ ನೀಡಿದ್ದಾರೆ. ಸಮಾಜದ ಶಾಂತಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ್ದಾರೆ. ಇಂತಹ ಪ್ರಚೋದನಕಾರಿ ಹೇಳಿಕೆಯಿಂದ ವಿವಿಧ ಕೋಮುಗಳ ನಡುವೆ ಘರ್ಷಣೆಗೆ ಪ್ರೇರಣೆ ನೀಡಿರುವ ಚೇತನ್‌ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ಶಿವಕುಮಾರ್ ದೂರು ನೀಡಿದ್ದು, ಎಫ್‌ಐಆರ್‌ ದಾಖಲಾಗಿತ್ತು.

ಇದನ್ನೂ ಓದಿ: ಹಿಂದೂ ವಿರೋಧಿ‌ ಪೋಸ್ಟ್ ಆರೋಪ: ನಟ ಚೇತನ್ ಪರ ವಕೀಲರು ಹೇಳಿದ್ದೇನು?

ಅಂದು ಈ ಪ್ರಕರಣದ ಬಗ್ಗೆ ನಟ ಚೇತನ್ ಪರ ವಕೀಲ ಸುನೀಲ್‌‌ ಕುಮಾರ್ ಗುನ್ನಾಪುರ‌ ಪ್ರತಿಕ್ರಿಯೆ ನೀಡಿದ್ದರು. ಸಾಮಾಜಿಕ ಜಾಲತಾಣದಲ್ಲಿನ ಪೋಸ್ಟ್ ವಿಚಾರವಾಗಿ ಚೇತನ್ ಅವರನ್ನು ಅರೆಸ್ಟ್ ಮಾಡಿರುವುದು ಕಾನೂನು ಬಾಹಿರ‌‌. ಕೋಮುಭಾವನೆ‌ ಕೆರಳಿಸುವಂತಹ‌, ಜಾತಿ ಜಾತಿಗಳ ನಡುವೆ ವೈಮನಸ್ಸು ಸೃಷ್ಟಿಸುವಂತಹ ಪೋಸ್ಟ್ ಅನ್ನು ಚೇತನ್​ ಅವರು ಮಾಡಿಲ್ಲ.‌ ಅಲ್ಲದೇ ಆ ಪೋಸ್ಟ್ ಅನ್ನು ನಟ ಚೇತನ್ ಅವರೇ ಬರೆದಿದ್ದಾರೆ ಎಂಬುದಕ್ಕೆ ಯಾವ ಸಾಕ್ಷಿಯೂ ಇಲ್ಲ. ನ್ಯಾಯಾಲಯಕ್ಕೆ‌‌ ಸೂಕ್ತ ದಾಖಲಾತಿಯೊಂದಿಗೆ ಜಾಮೀನು ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದರು. ಈ ಸಂಬಂಧ ನ್ಯಾಯಾಲಯ ಇಂದು ವಿಚಾರಣೆ ನಡೆಸಿ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ: ಜೂಮೆ ಜೋ ಪಠಾಣ್​​ ಹಾಡಿಗೆ ಮೈ ಕುಣಿಸಿದ ಇರ್ಫಾನ್ ಪಠಾಣ್ ಪುತ್ರ.. ವಿಡಿಯೋ ಮೆಚ್ಚಿದ ಎಸ್​ಆರ್​ಕೆ

ಅಂದು ವಾದ ಮಂಡಿಸಿದ್ದ ವಕೀಲ ಸುನೀಲ್ ಕುಮಾರ್ ಗುನ್ನಾಪುರ‌, ಫೇಸ್ ಬುಕ್‌ನಲ್ಲಿ ಆ ಬರಹಗಳನ್ನು ನನ್ನ ಕಕ್ಷಿದಾರರೇ ಬರೆದಿದ್ದಾರೆ ಎಂಬುದಕ್ಕೆ ಸಾಕ್ಷಿ ಇಲ್ಲ. ‌ಪೊಲೀಸರು ಸುಳ್ಳು ಕೇಸ್ ಹಾಕಿದ್ದಾರೆ. ಹೀಗಾಗಿ ಜಾಮೀನು‌ ಮಂಜೂರು ಮಾಡಬೇಕು ಎಂದು ಮನವಿ‌ ಮಾಡಿದ್ರು.‌

Last Updated : Mar 23, 2023, 9:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.