ETV Bharat / entertainment

ಭಜರಂಗಿ 2 ಬಳಿಕ ಬೈರಾಗಿ ಮೂಲಕ ತೆರೆ ಮೇಲೆ ಅಬ್ಬರಿಸಲು ಹ್ಯಾಟ್ರಿಕ್ ಹೀರೋ ರೆಡಿ - shivarajkumar Bairagi

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 123ನೇ ಸಿನಿಮಾ ಬೈರಾಗಿ ಜುಲೈ 1ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲು ಸಜ್ಜಾಗಿದೆ.

Bairagi Cinema
ಬೈರಾಗಿ ಸಿನಿಮಾ
author img

By

Published : Jun 7, 2022, 1:49 PM IST

'ಬೈರಾಗಿ'.... ಶೀರ್ಷಿಕೆಯಿಂದಲೇ ಚಂದನವನದಲ್ಲಿ ಸಖತ್ ಸೌಂಡ್ ಮಾಡುತ್ತಿದೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 123ನೇ ಚಿತ್ರ. ಭಜರಂಗಿ 2 ಸಿನಿಮಾ ಆದಮೇಲೆ ಬಿಡುಗಡೆಯಾಗುತ್ತಿರುವ ಈ ಚಿತ್ರದ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಜುಲೈ 1ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲು ಸಜ್ಜಾಗಿರುವ ಬೈರಾಗಿ ಸಿನಿಮಾದ ಕೆಲ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಶಿವಣ್ಣನ ಹುಲಿ ಶೈಲಿಯ ಮುಖ ಹಾಗೂ ಡಿಫ್ರೆಂಟ್ ಹೇರ್ ಸ್ಟೈಲ್ ಎಲ್ಲರ ಗಮನ ಸೆಳೆಯುತ್ತಿದೆ.

Bairagi Cinema will be released on July 1st
ಜುಲೈ 1ಕ್ಕೆ ಬೈರಾಗಿ ಚಿತ್ರ ಬಿಡುಗಡೆ

ಟಗರು ಯಶಸ್ಸಿನ ಬಳಿಕ ಶಿವರಾಜ್ ಕುಮಾರ್ ಹಾಗೂ ಡಾಲಿ ಧನಂಜಯ್ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವ ಸಿನಿಮಾ ಇದಾಗಿರುವುದರಿಂದ ಪ್ರಾರಂಭದಿಂದಲೇ ನಿರೀಕ್ಷೆ ಗರಿಗೆದರಿದೆ. ಇಬ್ಬರೂ ಬೇರೆ ಬೇರೆ ಗೆಟಪ್ ಮೂಲಕ ಮೋಡಿ ಮಾಡಲಿದ್ದಾರೆ‌. ಈಗಾಗಲೇ ಅಧಿಕೃತವಾಗಿ ಬಿಡುಗಡೆಯಾಗಿರುವ ಶಿವಣ್ಣನ ಹುಲಿ ವೇಷದ ಗೆಟಪ್ ಎಲ್ಲೆಡೆ ವೈರಲ್ ಆಗಿದ್ದು, ಆಟೋ ಹಾಗೂ ಕಾರುಗಳ ಮೇಲೆ ಶಿವಣ್ಣನ ಪೋಸ್ಟರ್ ರಾರಾಜಿಸುತ್ತಿವೆ.

ಅಂಜಲಿ ಚಿತ್ರದ ನಾಯಕಿ. ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಚಿತ್ರದ ಪ್ರಮುಖ ಪಾತ್ರದಲ್ಲಿದ್ದಾರೆ. ಹಿರಿಯ ನಟ ಶಶಿಕುಮಾರ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಅನು ಪ್ರಭಾಕರ್, ಯಶ ಶಿವಕುಮಾರ್, ಚಿಕ್ಕಣ್ಣ ಹೀಗೆ ದೊಡ್ಡ ತಾರಾ ಬಳಗ ಈ‌ ಚಿತ್ರದಲ್ಲಿದೆ.

ಇತ್ತೀಚಿಗೆ ಶಿವರಾಜ್‌ಕುಮಾರ್ ಮತ್ತು ಶರಣ್ ಕಂಠಸಿರಿಯಲ್ಲಿ ರಚನೆಯಾದ ಸಂಡೆ ಮಂಡೆ ಎವೆರಿಡೇ, ಲವ್ವಿಗಿಲ್ಲ ಹಾಲಿಡೇ ಎಂಬ ಹಾಡನ್ನು ಬಿಡುಗಡೆ ಮಾಡಲಾಯಿತು. ವಜ್ರಕಾಯ‌ ಬಳಿಕ ಶಿವಣ್ಣನ ಸಿನಿಮಾಕ್ಕೆ ಶರಣ್ ಧ್ವನಿಗೂಡಿಸಿದ್ದಾರೆ. ಪ್ರಮೋದ್ ಮರವಂತೆ ಸಾಹಿತ್ಯವಿರುವ ಸಂಡೆ ಮಂಡೆ ಎವೆರಿಡೇ, ಲವ್ವಿಗಿಲ್ಲ ಹಾಲಿಡೇ...ಎಂಬ ಹಾಡು ಸಿಂಗಲ್ ಶಾಟ್​ನಲ್ಲಿ ಶೂಟ್ ಮಾಡಿರುವುದು ಮತ್ತೊಂದು ವಿಶೇಷ. ಈ ಕ್ಯಾಚೀ ಹಾಡಿಗೆ ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಟ್ಯೂನ್ಸ್ ಹಾಕಿದರು. ಇಷ್ಟೆಲ್ಲ ವಿಶೇಷತೆ ಇರುವ ಬೈರಾಗಿ ಸಿನಿಮಾ ಜುಲೈ 1ಕ್ಕೆ ತೆರೆ ಕಾಣೋದಿಕ್ಕೆ ಸಜ್ಜಾಗಿದೆ.

ಇದನ್ನೂ ಓದಿ: ಜೂನಿಯರ್ ಅಪ್ಪು ಅಭಿನಯದ 'ಮಾರಕಾಸ್ತ್ರ' ಬಿಡುಗಡೆಗೆ ಸಜ್ಜು

ತಮಿಳು ನಿರ್ದೇಶಕ ವಿಜಯ್ ಮಿಲ್ಟನ್‌ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಕೃಷ್ಣ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕೃಷ್ಣ ಸಾರ್ಥಕ್ ಬೈರಾಗಿಗೆ ಬಂಡವಾಳ ಹೂಡಿದ್ದಾರೆ. ಸದ್ಯ ಟೀಸರ್ ಹಾಗು ಹಾಡುಗಳಿಂದ ಸದ್ದು ಮಾಡುತ್ತಿರುವ ಬೈರಾಗಿ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಹಾಗು ಧನಂಜಯ್ ಕಾಂಬೋ ಮತ್ತೆ ಪ್ರೇಕ್ಷಕರನ್ನು ಮೋಡಿ ಮಾಡುವ ಲಕ್ಷಣಗಳು ಕಾಣುತ್ತಿದ್ದು, ಬಿಡುಗಡೆಗೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.