ETV Bharat / entertainment

ಬನಾರಸ್ ಸಿನಿಮಾದ ಹಾಡಿನ ಗುಂಗಲ್ಲಿ ಜಮೀರ್​ ಪುತ್ರ ಝೈದ್ ಖಾನ್ - ಬನಾರಸ್ ಚಿತ್ರದ ಹಾಡು

ಭಾರತದ ಪುಣ್ಯಕ್ಷೇತ್ರಗಳಲ್ಲಿ ಕಾಶಿಗೆ ವಿಶೇಷ ಸ್ಥಾನ.‌ ಕಾಶಿಯನ್ನು ಬನಾರಸ್ ಅಂತಲೂ ಕರೆಯುವುದು ವಾಡಿಕೆ. ಪರಮ ಪಾವನೆಯಾದ ಗಂಗೆಯ ಬನಾರಸ್​ನಲ್ಲಿ ಹರಿದು ಎಷ್ಟೋ ಜನರ ಪಾಪ ಕಳೆಯುತ್ತಿದ್ದಾಳೆ. ಈ ಪವಿತ್ರ ನಗರದ ಬನಾರಸ್ ಹೆಸರು ಸಿನಿಮಾ ಆಗ್ತಾ ಇರೋದು ಮತ್ತು ಜಮೀರ್ ಅಹಮದ್ ಸುಪುತ್ರ ಈ ಬನಾರಸ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಾ ಇರೋದು ಗೊತ್ತಿರುವ ವಿಚಾರ. ನಿರ್ದೇಶಕ ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಬನಾರಸ್ ಸಿನಿಮಾ ಬಹುತೇಕ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ.

Banaras movie song Maya Gange release, Banaras movie songs, Banaras movie trailer, ಬನಾರಸ್ ಚಿತ್ರದ ಹಾಡು ಮಾಯಾ ಗಂಗೆ ಬಿಡುಗಡೆ, ಬನಾರಸ್ ಚಿತ್ರದ ಹಾಡು, ಬನಾರಸ್ ಚಿತ್ರದ ಟ್ರೈಲರ್,
ಬನಾರಸ್ ಸಿನಿಮಾದ ಮಾಯಾಗಂಗೆ ಹಾಡಿನ ಜಪದಲ್ಲಿ ಚಿತ್ರ ತಂಡ
author img

By

Published : Jun 29, 2022, 11:50 AM IST

ಝೈದ್ ಖಾನ್ ಹಾಗೂ ಸೋನಾಲ್ ಮೊಂತೆರೊ ಮುಖ್ಯಭೂಮಿಕೆಯಲ್ಲಿರೋ ಬನಾರಸ್ ಚಿತ್ರದ ಮೊದಲ ಹಾಡು ಮಾಯಾಗಂಗೆ ಇತ್ತೀಚೆಗೆ ಬಿಡುಗಡೆಯಾಗಿದೆ. ಕನ್ನಡ ಹಾಗೂ ಮಲೆಯಾಳಂ ಭಾಷೆಯ ಹಾಡುಗಳನ್ನು ಏಕಕಾಲಕ್ಕೆ ಬಿಡುಗಡೆ ಮಾಡಲಾಗಿದೆ. ಡಾ. ವಿ.ನಾಗೇಂದ್ರಪ್ರಸಾದ್ ಬರೆದಿರುವ ಈ ಮಾಯಾಗಂಗೆ ಹಾಡಿಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಮಲಯಾಳಂನಲ್ಲಿ ಆದಿ ಈ ಹಾಡನ್ನು ಬರೆದಿದ್ದಾರೆ. ಈ ಹಾಡನ್ನ ಯುವ ನಟ ಅಭಿಷೇಕ್ ಅಂಬರೀಶ್, ವಿನೋದ್ ಪ್ರಭಾಕರ್ ಹಾಗೂ ಯಶಸ್ ಸೂರ್ಯ, ಲಹರಿ ವೇಲು, ಚಂದ್ರು ಮುಖ್ಯ ಅತಿಥಿಗಳಾಗಿ ಆಗಮಿಸಿ ಅನಾವರಣಗೊಳಿಸಿದರು.

Banaras movie song Maya Gange release, Banaras movie songs, Banaras movie trailer, ಬನಾರಸ್ ಚಿತ್ರದ ಹಾಡು ಮಾಯಾ ಗಂಗೆ ಬಿಡುಗಡೆ, ಬನಾರಸ್ ಚಿತ್ರದ ಹಾಡು, ಬನಾರಸ್ ಚಿತ್ರದ ಟ್ರೈಲರ್,
ಬನಾರಸ್ ಸಿನಿಮಾದ ಮಾಯಾಗಂಗೆ ಹಾಡಿನ ಜಪದಲ್ಲಿ ಚಿತ್ರ ತಂಡ

ಮೊದಲಿಗೆ ಮಾತನಾಡಿದ ಬನಾರಸ್ ಸಿನಿಮಾ ನಿರ್ದೇಶಕ ಜಯತೀರ್ಥ, ನಾನು ನಾಗೇಂದ್ರಪ್ರಸಾದ್ ಅವರಿಗೆ ಈ ಹಾಡಿನ ಸನ್ನಿವೇಶ ವಿವರಿಸಿದೆ. ನನಗೆ ಮಾಮೂಲಿ ತರಹದ ಪ್ರೇಮಗೀತೆ ಬೇಕಿರಲಿಲ್ಲ. ಇದು ಕೊರಿಯೋಗ್ರಾಫರ್ ಸಾಂಗ್ ಕೂಡ ಅಲ್ಲ. ನಾವೊಂದಿಷ್ಟು ಜನ ಸೇರಿ ಈ ಹಾಡು ಹೀಗೆ ಬರಬೇಕು ಅಂದುಕೊಂಡೆವು. ಅದೇ ರೀತಿ ನಾಗೇಂದ್ರಪ್ರಸಾದ್ ಅದ್ಭುತವಾಗಿ ಹಾಡು ಬರೆದುಕೊಟ್ಟಿದ್ದಾರೆ. ಅಜನೀಶ್ ಅಷ್ಟೇ ಸೊಗಸಾಗಿ ಸಂಗೀತ ನೀಡಿದ್ದಾರೆ. ಅದ್ವೈತ ಸುಂದರವಾಗಿ ಛಾಯಾಗ್ರಹಣ ಮಾಡಿದ್ದಾರೆ. ಕನ್ನಡ ಹಾಗೂ ಮಲಯಾಳಂ ಎರಡು ಭಾಷೆಗಳಲ್ಲಿ ಈ ಹಾಡು ಬಿಡುಗಡೆಯಾಗಿದೆ.

ಮಲಯಾಳಂನಲ್ಲಿ ಹಾಡು ಬರೆಸಲು ಆದಿ ಅವರನ್ನು ಪರಿಚಯಿಸಿದ್ದು ನನ್ನ ಗೆಳೆಯ ಚಾರ್ಲಿ ಚಿತ್ರದ ನಿರ್ದೇಶಕ ಕಿರಣ್ ರಾಜ್. ಕಾಶಿಯಲ್ಲಿ ಚಿತ್ರೀಕರಣ ಮಾಡುವುದು ಅಷ್ಟು ಸುಲಭವಲ್ಲ. ಅದನ್ನೆಲ್ಲಾ ಸಾಧ್ಯ ಮಾಡಿದ್ದ ನಿರ್ಮಾಪಕ ತಿಲಕ್ ರಾಜ್ ಬಲ್ಲಾಳ್ ಅವರಿಗೆ ಧನ್ಯವಾದ. ಅಲ್ಲಿನ 84 ಘಾಟ್​ಗಳಲ್ಲೂ ನಮ್ಮ ಚಿತ್ರದ ಚಿತ್ರೀಕರಣ ನಡೆದಿದೆ. ನಾಯಕ - ನಾಯಕಿ ನನ್ನ ಮಕ್ಕಳಿದ್ದಂತೆ.

ಝೈದ್ ಖಾನ್ ನನ್ನ ಬಳಿ ಬಂದು ನಿರ್ದೇಶನ ಮಾಡಬೇಕು ಎಂದರು. ನಾನು ಅವರಿಗೆ ನೀವು ಹೆಸರಾಂತ ರಾಜಕಾರಣಿ ಮಗ. ನಿಮಗೆ ನಾನು ನಟನೆ ಕಲಿಸಬೇಕಾದರೆ ಸ್ವಲ್ಪ ಕಷ್ಟವಾಗಬಹುದು ಅಂದೆ. ಅದಕ್ಕೆ ಅವರು ಚಪ್ಪಲಿ ಬಿಟ್ಟು ಕೆಳಗೆ ಕುಳಿತು, ನೀವು ಹೇಳಿಕೊಟ್ಟಿದ್ದನ್ನು ಮಾಡುತ್ತೇನೆ ಎಂದರು.

ಅವರು ಈ ಚಿತ್ರದಲ್ಲಿ ಹಾಗೆ ಮಾಡಿದರು. ಅವರು ಈ ಕಥೆಯನ್ನು ಆಯ್ಕೆ ಮಾಡಿಕೊಂಡಾಗಲೇ ಗೆದ್ದರು. ಅದರ ಫಲಿತಾಂಶ ಈಗ ಗೊತ್ತಾಗುತ್ತಿದೆ. ಸೋನಾಲ್ ಅವರ ಅಭಿನಯ ಕೂಡ ಚೆನ್ನಾಗಿದೆ. ಸೆನ್ಸಾರ್ ಕೂಡ ಮುಗಿದಿದೆ. ಸದ್ಯದಲ್ಲೇ "ಬನಾರಸ್" ನಿಮ್ಮ ಮುಂದೆ ಬರಲಿದೆ ಎಂದರು ನಿರ್ದೇಶಕ ಜಯತೀರ್ಥ.

ಓದಿ: ನನಗೆ ಇಬ್ಬರು ಗಂಡು ಮಕ್ಕಳೇ ಬೇಕು ಎಂದಿದ್ದ ಆಲಿಯಾ ಭಟ್​​!

ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಾ ಇರೋ ಝೈದ್ ಖಾನ್ ಮಾತನಾಡಿ, ಇದು ನನ್ನ ಡ್ರೀಮ್ ಪ್ರಾಜೆಕ್ಟ್. ಈ ಕನಸನ್ನು ನನಸು ಮಾಡಿಕೊಳ್ಳಲು ತುಂಬಾ ಕಷ್ಟಪಟ್ಟಿದ್ದೇನೆ. ಈ ನನ್ನ ಕನಸಿಗೆ ಆಸರೆಯಾಗಿದ್ದು ನಿರ್ಮಾಪಕ ತಿಲಕ್ ರಾಜ್ ಬಲ್ಲಾಳ್ ಅವರು. ತಿಲಕ್ ಸರ್ ನನ್ನ ಗಾಡ್ ಫಾದರ್‌. ಬಾಂಬೆಗೆ ನನ್ನ ಕರೆದುಕೊಂಡು ಹೋಗಿ, ಆ್ಯಕ್ಟಿಂಗ್ ಸ್ಕೂಲ್​ಗೆ ಸೇರಿಸಿ, ನಂತರ ಈ ಚಿತ್ರವನ್ನು ನಿರ್ಮಾಣ ಮಾಡಿದರು.

ನಮ್ಮ ಬನಾರಸ್​ನ್ನು ಪ್ಯಾನ್ ಇಂಡಿಯಾ ಚಿತ್ರವನ್ನಾಗಿಸಿ ಎಲ್ಲ ಕಡೆ ಬಿಡುಗಡೆ ಮಾಡುತ್ತಿದ್ದಾರೆ.‌ ನಿರ್ದೇಶಕ ಜಯತೀರ್ಥ ಅವರ ಬಗ್ಗೆ ಎಷ್ಟು ಹೇಳಿದರೂ ಕಡಿಮೆ. ಸೋನಾಲ್ ಅವರು ಅದ್ಭುತ ನಟಿ. ಇಡೀ ಚಿತ್ರತಂಡದ ಪರಿಶ್ರಮದಿಂದ ಬನಾರಸ್ ಚೆನ್ನಾಗಿ ಬಂದಿದೆ ಎಂದ ಸಂತಸ ವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ನಟಿ‌ ಸೋನಾಲ್ ಮೊಂತೆರೊ, ನನಗೆ ಇದು ವಿಶೇಷ ಸಿನಿಮಾ. ಧನಿ ಎಂಬ ಪಾತ್ರ ನೀಡಿದ್ದ ಜಯತೀರ್ಥ ಅವರಿಗೆ ಧನ್ಯವಾದ. ಮೋಷನ್ ಪೋಸ್ಟರ್ ರಿಲೀಸ್ ಆದ ಮೇಲೆ ಎಲ್ಲೇ ಹೋದರೂ ಈ ಚಿತ್ರದ ಬಗ್ಗೆ ಕೇಳುತ್ತಿದ್ದಾರೆ. ಝೈದ್ ಅವರ ಅಭಿನಯ ಚೆನ್ನಾಗಿದೆ ಅಂತಾ ಹೇಳಿದರು.
ಈ ಗೀತೆಯನ್ನ ಬರೆದಿರುವ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಮಾತನಾಡಿ, ಕಾಶಿ ವೈರಾಗ್ಯದ ಸಂಕೇತ ಅಲ್ಲಿ ಪ್ರೀತಿಯ ಕಥೆ ಬರೆಯಲು ನನ್ನ ಗೆಳೆಯ ಜಯತೀರ್ಥನಿಗೆ ಮಾತ್ರ ಸಾಧ್ಯ. ಪಕ್ಕದಲ್ಲೇ ಚಿತೆ ಉರಿಯುತ್ತಿರುತ್ತದೆ. ಅಲ್ಲಿ ನಾಯಕ - ನಾಯಕಿ ಪ್ರೇಮ ಆರಂಭವಾಗುತ್ತದೆ. ಈ ಸನ್ನಿವೇಶಕ್ಕೆ ತಕ್ಕ ಹಾಡು ಬರೆಯಬೇಕು. ಇದು ಮಾಮೂಲಿ ಪ್ರೇಮಗೀತೆಯ ತರಹ ಬೇಡ ಎಂದು ಜಯತೀರ್ಥ ವಿವರಿಸಿದಾಗ, ಈ "ಮಾಯಾಗಂಗೆ" ಹಾಡು ಬರೆದೆ. ಅಜನೀಶ್ ಲೋಕನಾಥ್ ಸಂಗೀತ ಹಾಗೂ ಅದ್ವೈತ ಛಾಯಾಗ್ರಹಣ ಹಾಡಿನ ಶ್ರೀಮಂತಿಕೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು.
ಬನಾರಸ್ ಚಿತ್ರಕ್ಕೆ ಸಂಗೀತ ನೀಡಿರುವ ಅಜನೀಶ್ ಲೋಕನಾಥ್ ಮಾತನಾಡಿ, ನನ್ನ ಮನಸ್ಸಿಗೆ ಹತ್ತಿರವಾದ ಸಿನಿಮಾ. ಇಂತಹ ಅದ್ಭುತ ಹಾಡನ್ನು ಬರೆದಿರುವ ನಾಗೇಂದ್ರಪ್ರಸಾದ್ ಅವರಿಗೆ ಧನ್ಯವಾದ. ಝೈದ್ ಖಾನ್ ಈ ಹಾಡಿನಲ್ಲಿ ತುಂಬಾ ಚೆನ್ನಾಗಿ ಕಾಣುತ್ತಾರೆ. ಜಯತೀರ್ಥ ಅವರ ನಿರ್ದೇಶನ ಉತ್ತಮವಾಗಿದೆ. ಮುಂದೆ ಇನ್ನೂ ಮೂರು ಹಾಡುಗಳು ಬಿಡುಗಡೆಯಾಗಲಿವೆ.

ಈ ಸಿನಿಮಾವನ್ನ‌ ಈಗ ಬಾಂಬೆ ನಿವಾಸಿ ನಿರ್ಮಾಪಕ ತಿಲಕ್ ರಾಜ್ ಬಲ್ಲಾಳ್ ನಿರ್ಮಾಣ ಮಾಡಿದ್ದು, ಅದ್ವೈತ ಛಾಯಾಗ್ರಾಹಣ ಈ‌ ಚಿತ್ರಕ್ಕಿದೆ. ಝೈದ್ ಖಾನ್ ಅಭಿನಯದ ಬನಾರಸ್ ಸಿನಿಮಾ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣ ಆಗಿದ್ದು, ಸದ್ಯದಲ್ಲೇ ತೆರೆಗೆ ಬರಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.