ETV Bharat / entertainment

'ಗೂಢಚಾರಿ 2' ಸಿನಿಮಾಗೆ ಇಂಗ್ಲೆಂಡ್ ಚೆಲುವೆ: ಅಡಿವಿ ಶೇಷ್ ಜೊತೆ ಬನಿತಾ ಸಂಧು ನಟನೆ

author img

By ETV Bharat Karnataka Team

Published : Nov 21, 2023, 4:15 PM IST

ಅಡಿವಿ ಶೇಷ್ ಮುಖ್ಯಭೂಮಿಕೆಯ 'ಗೂಢಚಾರಿ 2' ಸಿನಿಮಾಗೆ ಬನಿತಾ ಸಂಧು ನಾಯಕಿಯಾಗಿ ಆಯ್ಕೆಗೊಂಡಿದ್ದಾರೆ.

Banita Sandhu
ಬನಿತಾ ಸಂಧು

ತೆಲುಗು ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ''ಗೂಢಚಾರಿ'. ನಟ ಅಡಿವಿ ಶೇಷ್ ಮುಖ್ಯಭೂಮಿಕೆಯಲ್ಲಿ ಮೂಡಿ ಬಂದ ಆ್ಯಕ್ಷನ್ - ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಖತ್​ ಸದ್ದು ಮಾಡಿತ್ತು. ಈ ಸೂಪರ್ ಹಿಟ್ ಚಿತ್ರದ ಸೀಕ್ವೆಲ್ ಬರಲಿರುವ ವಿಷಯ ನಿಮಗೆ ತಿಳಿದೇ ಇದೆ. ಈಗಾಗಲೇ ರಿಲೀಸ್ ಆಗಿರುವ 'ಗೂಢಚಾರಿ 2' ಫಸ್ಟ್ ಲುಕ್ ಸಿನಿಪ್ರಿಯರ ಕುತೂಹಲ ಹೆಚ್ಚಿಸಿತ್ತು. ಇದೀಗ ಚಿತ್ರತಂಡ ನಾಯಕಿಯನ್ನು ಪರಿಚಯಿಸಿದೆ.

ಹೌದು, ಗೂಢಚಾರಿ 2 ಸಿನಿಮಾಗೆ ನಾಯಕಿ ಫೈನಲ್​ ಆಗಿದ್ದಾರೆ. ಇಂಗ್ಲೆಂಡ್ ಮ‌ೂಲದ ಪ್ರತಿಭಾನ್ವಿತ ನಟಿ ಬನಿತಾ ಸಂಧು ಅವರು ಅಡಿವಿ ಶೇಷ್​ಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಅಕ್ಟೋಬರ್, ಸರ್ದಾರ್ ಉದಾಮ್, ಆದಿತ್ಯ ವರ್ಮಾ ಸೇರಿದಂತೆ ಹಲವು ಹಿಂದಿ ಹಾಗೂ ತಮಿಳು ಚಿತ್ರಗಳಲ್ಲಿ ನಟಿಸಿದ್ದು, ಇದೇ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

Banita Sandhu
ನಟಿ ಬನಿತಾ ಸಂಧು

ಈ ಬಗ್ಗೆ ಸಂತಸ ಹಂಚಿಕೊಂಡಿರುವ ನಟಿ ಬನಿತಾ ಸಂಧು, ಇದು ನನ್ನ ಮೊದಲ ಪ್ಯಾನ್ ಇಂಡಿಯಾ ಸಿನಿಮಾ. ವಿಷನರಿ ತಂಡದ ಜೊತೆ ಕೈ ಜೋಡಿಸಿದ್ದು, ಬಹಳ ಉತ್ಸುಕಳಾಗಿದ್ದೇನೆ. ನಾನು ಹಿಂದೆಂದೂ ಮಾಡದಿರುವ ವಿಭಿನ್ನ ಪಾತ್ರವೊಂದರಲ್ಲಿ ನಟಿಸುತ್ತಿದ್ದೇನೆ. ಪ್ರೇಕ್ಷಕರು ನನ್ನನ್ನು ಸಂಪೂರ್ಣವಾಗಿ ಹೊಸ ಅವತಾರದಲ್ಲಿ ನೋಡಲಿದ್ದಾರೆ. ಈ ಚಿತ್ರದಲ್ಲಿ ಕೆಲಸ ಮಾಡಲು ನಾನು ಎಕ್ಸೈಟ್ ಆಗಿದ್ದೇನೆ ಎಂದು ತಿಳಿಸಿದ್ದಾರೆ. ನಟ ಅಡಿವಿ ಶೇಷ್ ಮಾತನಾಡಿ, ಗೂಢಚಾರಿ ಪ್ರಪಂಚಕ್ಕೆ ಬನಿತಾ ಸಂಧು ಅವರಿಗೆ ಸ್ವಾಗತ. ಅವರ ಜೊತೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮನ್ಸೂರ್ ಅಲಿ ಖಾನ್ ಹೇಳಿಕೆಗೆ ಖಂಡನೆ: ನಟಿ ತ್ರಿಶಾ ಪರ ನಿಂತ ಮೆಗಾಸ್ಟಾರ್ ಚಿರಂಜೀವಿ

'ಗೂಢಚಾರಿ 2' ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಬಿಗ್ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿದೆ. ಅಡಿವಿ ಶೇಷ್ ನಟನೆಯ ಮೇಜರ್ ಚಿತ್ರದ ಎಡಿಟರ್ ವಿನಯ್ ಕುಮಾರ್ ಸಿರಿಗಿನೀದಿ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಚಿತ್ರಕ್ಕೆ ಅಡಿವಿ ಶೇಷ್ ಕಥೆ ಬರೆದಿದ್ದು, ಕಾರ್ತೀಕೇಯ 2, ಮೇಜರ್ ಹಾಗೂ ಕಾಶ್ಮೀರಿ ಫೈಲ್ಸ್​​ನಂತ ಸೂಪರ್ ಹಿಟ್ ಸಿನಿಮಾ ನಿರ್ಮಾಣ ಮಾಡಿರೋ ದೊಡ್ಡ ನಿರ್ಮಾಣ ಸಂಸ್ಥೆಗಳು 'ಗೂಢಚಾರಿ 2'ಗೆ ಬಂಡವಾಳ ಹೂಡುತ್ತಿವೆ. ಪೀಪಲ್ ಮೀಡಿಯಾ ಫ್ಯಾಕ್ಟರಿ, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಮತ್ತು ಎಕೆ ಎಂಟರ್​​ಟೈನ್ಮೆಂಟ್ ಇಂಡಿಯಾ ಪ್ರೈವೇಟ್​ ಲಿಮಿಟೆಡ್ ಬ್ಯಾನರ್ ಅಡಿ ಟಿ.ಜಿ ವಿಶ್ವಪ್ರಸಾದ್ ಮತ್ತು ಅಭಿಷೇಕ್ ಅಗರ್ ವಾಲ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: 'ಸಂಜು ವೆಡ್ಸ್ ಗೀತಾ 2' ಚಿತ್ರೀಕರಣ: ಮೊದಲ ಭಾಗ ಬಿಡುಗಡೆಯಾಗಿದ್ದ ದಿನವೇ ಸೀಕ್ವೆಲ್ ರಿಲೀಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.