ETV Bharat / entertainment

ವೈಭವ್​ ಕಂಡ 'ಬಸ್ರಿಕಟ್ಟೆ' ಭಯಾನಕ ಜಗತ್ತು.. ನಿಮ್ಮ ಕಣ್ಣ ಮುಂದೆ ಯಾವಾಗ? - ಈಟಿವಿ ಭಾರತ ಕನ್ನಡ

ಯುವ ನಿರ್ದೇಶಕ ವೈಭವ್​.ಎಂ ಆ್ಯಕ್ಷನ್​​ ಕಟ್​ ಹೇಳಿರುವ 'ಬಸ್ರಿಕಟ್ಟೆ' ಹಾರರ್​ ಸಿನಿಮಾ ನವೆಂಬರ್ 3ರಂದು ತೆರೆಗೆ ಅಪ್ಪಳಿಸಲಿದೆ.

Basrikatte movie directed by Vaibhav M
ವೈಭವ್​ ಕಂಡ 'ಬಸ್ರಿಕಟ್ಟೆ' ಭಯಾನಕ ಜಗತ್ತು ನಿಮ್ಮ ಕಣ್ಣ ಮುಂದೆ ಯಾವಾಗ?
author img

By ETV Bharat Karnataka Team

Published : Oct 16, 2023, 6:34 PM IST

ಹಾರರ್​ ಸಿನಿಮಾ ಅಂದಾಕ್ಷಣ ಕಾಡು, ಕತ್ತಲೆ, ದೆವ್ವ.. ಹೀಗೆ ಅನೇಕ ಅಂಶಗಳು ಕಣ್ಣಮುಂದೆ ಬರುತ್ತದೆ. ಆದರೆ, ಇಂತಹದ್ದೇ ಭಯಾನಕ ಕಥೆಯುಳ್ಳ 'ಬಸ್ರಿಕಟ್ಟೆ' ಸಿನಿಮಾ ಕೊಂಚ ವಿಭಿನ್ನವಾಗಿ ಪ್ರೇಕ್ಷಕರ ಮುಂದೆ ಬರೋದಕ್ಕೆ ಸಜ್ಜಾಗಿದೆ. ಚಿತ್ರಕ್ಕೆ ಯುವ ನಿರ್ದೇಶಕ ವೈಭವ್​.ಎಂ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಇದು ಸಸ್ಪೆನ್ಸ್​- ಹಾರರ್​ ಸಿನಿಮಾವಾದರೂ ರಿಯಲಿಸ್ಟಿಕ್​ ಆಗಿ ಚಿತ್ರೀಕರಣ ಮಾಡಿರುವುದು ವಿಶೇಷ.

ಕನ್ನಡದ ಕಿರಗೂರಿನ ಗಯ್ಯಾಳಿಗಳು, ಕಾಫಿ ತೋಟ ಸೇರಿದಂತೆ ಮಲಯಾಳಂನ ಅನೇಕ ಸಿನಿಮಾಗಳಲ್ಲಿ ನಟಿಸಿರುವ ರಾಹುಲ್​ ಮಾದೇವ್​ ಹಾಗೂ ಮುಂದಿನ ನಿಲ್ದಾಣ ಸಿನಿಮಾ ಖ್ಯಾತಿಯ ಅನನ್ಯಾ ಕಶ್ಯಪ್​ 'ಬಸ್ರಿಕಟ್ಟೆ' ಮುಖ್ಯಭೂಮಿಕೆಯಲ್ಲಿದ್ದಾರೆ. ಈ ಸಿನಿಮಾ ಬಗ್ಗೆ ಮಾತನಾಡಿರುವ ನಿರ್ದೇಶಕ ವೈಭವ್​, ಕರ್ನಾಟಕದಲ್ಲಿರುವ ಖ್ಯಾತ ಸ್ಥಳ ಬಸ್ರಿಕಟ್ಟೆಗೂ ಈ ಚಿತ್ರಕ್ಕೂ ಸಂಬಂಧವಿಲ್ಲ ಎಂಬುದನ್ನು ಮೊದಲೇ ಸ್ಪಷ್ಟಪಡಿಸಿದ್ದಾರೆ.

"ಈ ಚಿತ್ರದಲ್ಲಿ ಸಿನಿಮ್ಯಾಟಿಕ್​ ಫೀಲ್​ಗಿಂತ ನ್ಯಾಚುರಲ್​ ಆಗಿ ಮೂಡಿಬರಲಿ ಎಂಬ ಕಾರಣಕ್ಕೆ ರಿಯಲಿಸ್ಟಿಕ್​ ಆಗಿಯೇ ಶೂಟಿಂಗ್​ ಮಾಡಿದ್ದೇವೆ. ಮಂಗಳೂರು, ಚಿಕ್ಕಮಗಳೂರು, ಮೂಡುಬಿದಿರೆ ಮೊದಲಾದ ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ನಮ್ಮ ಸಿನಿಮಾದ ಟ್ರೇಲರ್​ ನೋಡಿದವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಟೆಕ್ನಿಕಲ್​ ಆಗಿಯೂ ಚಿತ್ರ ತುಂಬಾ ಸ್ಟ್ರಾಂಗ್​ ಇದೆ" - ವೈಭವ್​.ಎಂ ನಿರ್ದೇಶಕ

ಕಳೆದ ಹತ್ತು ವರ್ಷಗಳಿಂದ ಹಲವು ನಿರ್ದೇಶಕರ ಬಳಿ ನಿರ್ದೇಶನದ ಪಟ್ಟುಗಳನ್ನು ಕಲಿತಿರುವ ವೈಭವ್​, ಕೆಲವು ನಿರ್ಮಾಣ ಸಂಸ್ಥೆಗಳಲ್ಲಿ ಸಾಕಷ್ಟು ವಿಭಾಗಗಳಲ್ಲಿ ಕಾರ್ಯ ನಿರ್ವಹಿಸಿರುವ ಅನುಭವವಿದೆ. ನಂತರ ಕೆಲವು ಕಿರುಚಿತ್ರಗಳನ್ನೂ ತಯಾರಿಸಿದ್ದಾರೆ. ಇಷ್ಟೆಲ್ಲ ಅನುಭವಗಳನ್ನು ಬೆನ್ನಿಗೆ ಕಟ್ಟಿಕೊಂಡು ಇದೀಗ ಬಸ್ರಿಕಟ್ಟೆ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ದೇವರಾಜ್ 40ನೇ ಸಿನಿಮಾಗೆ ಗುರುದತ್ ಗಾಣಿಗ ಆ್ಯಕ್ಷನ್ ಕಟ್..

ವಿದ್ಯಾರ್ಥಿಯಾಗಿದ್ದಾಗಲೇ ಕಥೆ, ನಾಟಕ ಮತ್ತು ಬರವಣಿಗೆಯ ಗೀಳು ಹಚ್ಚಿಕೊಂಡಿದ್ದ ವೈಭವ್​, ಆಗಲೇ ನಿರ್ದೇಶಕನಾಗುವ ಕನಸು ಕಟ್ಟಿಕೊಂಡಿದ್ದರು. ಆ ಕನಸು ಈಗ ನೆರವೇರಿದೆ. ತನ್ನದೇ ಯುವ ಪ್ರತಿಭೆಗಳ ತಂಡ ಕಟ್ಟಿಕೊಂಡು, ಕಂಟೆಂಟ್​ ಸಿನಿಮಾಗಳನ್ನು ಮಾಡುವ ಯೋಜನೆ ವೈಭವ್​ ಅವರಿಗಿದೆ. ಅನಾವಶ್ಯಕವಾಗಿ ಖರ್ಚು ಮಾಡದೇ, ಕಡಿಮೆ ಸಮಯದಲ್ಲಿ ಸಿನಿಮಾ ಮಾಡುವ ಕಲೆಗಾರಿಕೆ ಅವರಿಗೆ ಸಿದ್ಧಿಸಿರುವುದರಿಂದ ಮುಂದೆಯೂ ಅದೇ ರೀತಿಯಲ್ಲಿ ಮುಂದುವರೆಯುವ ಆಲೋಚನೆಯಲ್ಲಿದ್ದಾರೆ ವೈಭವ್​.

ಚಿತ್ರತಂಡ: ನಾಯಕನಾಗಿ ರಾಹುಲ್​ ಮಾದೇವ್​, ನಾಯಕಿಯಾಗಿ ಅನನ್ಯಾ ಕಶ್ಯಪ್​ ಅಲ್ಲದೇ, ಬಲರಾಜವಾಡಿ, ಕಿರಣ್ ನಾಯ್ಕ್, ಸಿದ್ಲಿಂಗು ಶ್ರೀಧರ್ ಮುಂತಾದವರು ತಾರಾಗಣದಲ್ಲಿದ್ದಾರೆ. ಅಶ್ವಿನ್ ಕೆನಡಿ ಛಾಯಾಗ್ರಹಣ, ಕದ್ರಿ ಮಣಿಕಾಂತ್ ಸಂಗೀತ ಹಾಗೂ ಉಮೇಶ್ ಸಂಕಲನ ಚಿತ್ರಕ್ಕಿದೆ. ಗೀತಾಂಜಲಿ ಫಿಲಂಸ್ ಬ್ಯಾನರ್ ಅಡಿ ಪ್ರಶಾಂತ್.ಎನ್.ಪೈ ನಿರ್ಮಿಸಿದ್ದಾರೆ. ಐಟಿ ಕ್ಷೇತ್ರದ ಮಂದಿ, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನಾನಾ ವರ್ಗದ ಜನರಿಗೆ ಟ್ರೇಲರ್ ಸಾಕಷ್ಟು ಇಷ್ಟವಾಗಿದ್ದು, ನವೆಂಬರ್ 3ರಂದು ಸಿನಿಮಾ ತೆರೆ ಕಾಣಲಿದೆ.

ಇದನ್ನೂ ಓದಿ: 'ಚಿಕ್ಕಿಯ ಮೂಗುತಿ‌' ಚಿತ್ರಕ್ಕೆ ಸಿಕ್ತು ಅಶ್ವಿನಿ ಪುನೀತ್ ರಾಜ್‍ಕುಮಾರ್ ಸಾಥ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.