ಮುಂಬೈ (ಮಹಾರಾಷ್ಟ್ರ) : ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಲ್ಲಿರುವ ನಟಿ, ಹಿಂದಿ ಬಿಗ್ ಬಾಸ್ ಮಾಜಿ ಸ್ಪರ್ಧಿ ರಾಖಿ ಸಾವಂತ್ ಅವರನ್ನು ಬಲವಂತವಾಗಿ ಚುಂಬಿಸಿದ್ದ ಆರೋಪದ ಮೇಲೆ ಗಾಯಕ ಮಿಕಾ ಸಿಂಗ್ ವಿರುದ್ಧ 2006 ರಲ್ಲಿ ದಾಖಲಾಗಿದ್ದ ಎಫ್‌ಐಆರ್ ಮತ್ತು ಚಾರ್ಜ್‌ಶೀಟ್ ಅನ್ನು ಬಾಂಬೆ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.
ನ್ಯಾಯಮೂರ್ತಿಗಳಾದ ಎ ಎಸ್ ಗಡ್ಕರಿ ಮತ್ತು ಎಸ್ ಜಿ ದಿಗ್ ಅವರಿದ್ದ ವಿಭಾಗೀಯ ಪೀಠವು ನಟಿ ರಾಖಿ ಸಾವಂತ್ ಅವರು ಸಲ್ಲಿಸಿದ್ದ ಅಫಿಡವಿಟ್ ಅನ್ನು ಗಣನೆಗೆ ತೆಗೆದುಕೊಂಡ ನಂತರ ಪ್ರಕರಣದಲ್ಲಿ ಸಲ್ಲಿಸಲಾದ ಎಫ್‌ಐಆರ್ ಮತ್ತು ಆರೋಪ ಪಟ್ಟಿಯನ್ನು ರದ್ದುಗೊಳಿಸಿತು. ರಾಖಿ ಮತ್ತು ಮಿಕಾ ಅವರು ಸೌಹಾರ್ದಯುತವಾಗಿ ಸಮಸ್ಯೆ ಪರಿಹರಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ಒಪ್ಪಿಗೆ ನೀಡಿದರು. ರಾಖಿ ಅವರ ವಕೀಲರು ಯಾವುದೇ ವಿರೋಧ ವ್ಯಕ್ತಪಡಿಸದೇ ಇರುವುದು, ಬಾಂಬೆ ಹೈಕೋರ್ಟ್ ಎಫ್‌ಐಆರ್ ರದ್ದುಪಡಿಸಲು ಆದೇಶಿಸಿದೆ.
ಪ್ರಕರಣದ ಹಿನ್ನೆಲೆ: 2006ರ ಜೂನ್ 10ರಂದು ಮುಂಬೈನ ರೆಸ್ಟೋರೆಂಟ್ ಒಂದರಲ್ಲಿ ಬರ್ತ್ ಡೇ ಪಾರ್ಟಿ ಆಯೋಜನೆಗೊಂಡಿತ್ತು. ಗಾಯಕ ಮಿಕಾ ಸಿಂಗ್ ಅವರು ಸ್ನೇಹಿತರು ಸೇರಿದಂತೆ ನಟ ನಟಿಯರನ್ನು ಈ ಭರ್ಜರಿ ಪಾರ್ಟಿಗೆ ಆಹ್ವಾನಿಸಿದ್ದರು. ರಾಖಿ ಕೂಡ ಈ ಕಾರ್ಯಕ್ರಮದಲ್ಲಿದ್ದರು. ಈ ಕಾರ್ಯಕ್ರಮದಲ್ಲಿ ನಟಿ, ಹಿಂದಿ ಬಿಗ್ ಬಾಸ್ ಮಾಜಿ ಸ್ಪರ್ಧಿಯೂ ಆಗಿರುವ ರಾಖಿ ಸಾವಂತ್ ಅವರು ತಮಗೆ ಮಿಕಾ ಸಿಂಗ್ ಬಲವಂತವಾಗಿ ಚುಂಬಿಸಿದ್ದಾರೆ ಎಂದು ಆರೋಪಿಸಿದ್ದರು.
ರಾಖಿ ಸಾವಂತ್ ಅಂದು ಪೊಲೀಸ್ ಠಾಣೆಗೆ ತೆರಳಿ ಮಿಕಾ ಸಿಂಗ್ ವಿರುದ್ಧ ಕಿರುಕುಳ ಆರೋಪದಡಿ ದೂರು ಸಲ್ಲಿಸಿದ್ದರು. ಗಾಯಕ ಮಿಕಾ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 354 ಮತ್ತು 323 (ಹಲ್ಲೆ) ಅಡಿ ಆರೋಪ ಹೊರಿಸಲಾಗಿತ್ತು. ಮಿಕಾ ಸಿಂಗ್ ಅವರು 17 ವರ್ಷಗಳ ಹಿಂದೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಮಾಡುವಂತೆ ಕೋರಿ ವಿಶೇಷ ಮನವಿಯೊಂದಿಗೆ ಮುಂಬೈ ಹೈಕೋರ್ಟ್‌ಗೆ ಅರ್ಜಿ (2023ರ ಏಪ್ರಿಲ್‌ನಲ್ಲಿ) ಸಲ್ಲಿಸಿದ್ದರು.
ಇದನ್ನೂ ಓದಿ : ಕರ್ನಾಟದಲ್ಲೂ ರಿಲೀಸ್ ಆಗಲಿದೆ ಧೋನಿ ನಿರ್ಮಾಣದ ಚೊಚ್ಚಲ ಸಿನಿಮಾ 'LGM'
ಹೌದು, ಈ ವರ್ಷದ ಏಪ್ರಿಲ್‌ನಲ್ಲಿ ತಮ್ಮ ವಿರುದ್ಧದ ಎಫ್‌ಐಆರ್ ಮತ್ತು ಆರೋಪಪಟ್ಟಿಯನ್ನು ರದ್ದುಗೊಳಿಸುವಂತೆ ಬಾಂಬೆ ಹೈಕೋರ್ಟ್‌ಗೆ ಗಾಯಕ ಅರ್ಜಿ ಸಲ್ಲಿಸಿದ್ದರು. ಬಾಂಬೆ ಹೈಕೋರ್ಟ್ ಗುರುವಾರ ರಾಖಿ ಸಾವಂತ್ ಸಲ್ಲಿಸಿದ್ದ ಅಫಿಡವಿಟ್ ಅನ್ನು ಪರಿಶೀಲನೆ ನಡೆಸಿತು. ಅಫಿಡವಿಟ್ನಲ್ಲಿ ''ತಾನು (ರಾಖಿ ಸಾವಂತ್) ಮತ್ತು ಗಾಯಕ ಮಿಕಾ ಸಿಂಗ್ ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಂಡಿದ್ದೇವೆ ಮತ್ತು ನಮ್ಮ ಕಡೆಯಿಂದ ತಪ್ಪು ತಿಳಿವಳಿಕೆ ಮತ್ತು ತಪ್ಪುಗ್ರಹಿಕೆಯಿಂದ ಇಡೀ ವಿವಾದ ಉದ್ಭವಿಸಿದೆ ಎಂಬುದನ್ನು ಅರಿತುಕೊಂಡಿದ್ದೇವೆ" ಎಂದು ಹೇಳಿಕೊಂಡಿದ್ದಾರೆ..
ಇದನ್ನೂ ಓದಿ : Adipurush: ರಾಮಾಯಣ ಆಧಾರಿತ ಪೌರಾಣಿಕ ಚಿತ್ರದ ಟ್ವಿಟರ್ ವಿಮರ್ಶೆ.. ಹೇಗಿದೆಯಂತಾ ಗೊತ್ತಾ?