'ದಾರಿ ಯಾವುದಯ್ಯ ವೈಕುಂಠಕೆ' ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಹುಟ್ಟಿಸಿರೋ ನಿರ್ದೇಶಕ ಸಿದ್ದು ಪೂರ್ಣಚಂದ್ರ. ಈ ಚಿತ್ರಕ್ಕೆ ಸಾಕಷ್ಟು ಪ್ರಶಸ್ತಿಗಳ ಜೊತೆಗೆ ಹಲವಾರು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳುವ ಮುಖಾಂತರ ಸಿನಿ ಪ್ರೇಕ್ಷಕರರ ಮೆಚ್ಚುಗೆ ಪಾತ್ರವಾಗಿತ್ತು. ಈ ಸಿನಿಮಾದ ಬಳಿಕ ಸಿದ್ದು ಪೂರ್ಣಚಂದ್ರ 'ಬ್ರಹ್ಮ ಕಮಲ' ಚಿತ್ರ ಮಾಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.
ಅವರೇ ಕಥೆ, ಚಿತ್ರಕಥೆ ಬರೆದು ಬ್ರಹ್ಮ ಕಮಲ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಜೊತೆಗೆ ಸಿದ್ದು ಪೂರ್ಣಚಂದ್ರ ಅವರೇ ಈ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ. ಸದ್ಯ ಪೋಸ್ಟರ್ ಮೂಲಕ ಕುತೂಹಲ ಹುಟ್ಟಿಸಿರೋ ಈ ಸಿನಿಮಾ ಕೂಡ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಆಯ್ಕೆಯಾಗಿ ಜನ ಮನ ಮುಟ್ಟುತ್ತಿದೆ.
'ಬ್ರಹ್ಮ ಕಮಲ' ಮಹಿಳಾ ಪ್ರಧಾನ ಚಿತ್ರವಾಗಿದ್ದು ಅದ್ವಿತಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಲೋಕೇಂದ್ರ ಸೂರ್ಯ, ಋತು ಚೈತ್ರ, ಮಮತಾ ರಾಹುತ್, ಪ್ರಮಿಳಾ ಸುಬ್ರಹ್ಮಣ್ಯ, ಬಲ ರಾಜ್ವಾಡಿ, ಸಿದ್ದು ಪೂರ್ಣಚಂದ್ರ, ಆಟೋ ನಾಗರಾಜ್, ಗಂಡಸಿ ಸದಾನಂದ ಸ್ವಾಮಿ, ಕವಿತಾ ಕಂಬಾರ್, ರಾಧಾ ರಾಮಚಂದ್ರ ಇನ್ನೂ ಮುಂತಾದವರು ತಾರಾ ಬಳಗದಲ್ಲಿದ್ದಾರೆ.
ಇದನ್ನೂ ಓದಿ: ಹೆಸರಿಡದ ಹೊಸ ಚಿತ್ರದಲ್ಲಿ ಲವ್ಲಿ ಸ್ಟಾರ್: ಶೂಟಿಂಗ್ ಕಂಪ್ಲೀಟ್ ಮಾಡಿದ ಪ್ರೇಮ್ ತಂಡ
ಈಗಾಗಲೇ ಬೆಂಗಳೂರು ಚಲನ ಚಿತ್ರೋತ್ಸವದಲ್ಲೂ ಈ ಸಿನಿಮಾ ಪ್ರದರ್ಶನ ಕಂಡಿದೆ. ಇದೀಗ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವಕ್ಕೆ 'ಬ್ರಹ್ಮ ಕಮಲ' ಆಯ್ಕೆಯಾಗಿದೆ. ಈ ವಿಷಯ ಇಡೀ ಚಿತ್ರತಂಡಕ್ಕೆ ಸಂತಸ ತಂದಿದೆ ಎನ್ನುತ್ತಾರೆ ನಿರ್ದೇಶಕ ಸಿದ್ದು ಪೂರ್ಣಚಂದ್ರ.
ಇನ್ನೂ ಈ ಸಿನಿಮಾಗೆ ಲೋಕೇಂದ್ರ ಸೂರ್ಯನಾರಾಯಣ ಕ್ಯಾಮರಾ ವರ್ಕ್ ಇದ್ದು, ದೀಪು ಸಿ ಎಸ್ ಸಂಕಲನ, ಅನಂತ್ ಆರ್ಯನ್ ಸಂಗೀತದ ಹೊಣೆ ಹೊತ್ತಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಎ ಕೆ ಪುಟ್ಟರಾಜು ಮತ್ತು ಪ್ರಮಿಳಾ ಸುಬ್ರಹ್ಮಣ್ಯಂ, ನಿರ್ಮಾಣ ನಿರ್ವಹಣೆ ನಾಗರತ್ನ ಕೆ ಹೆಚ್, ವಸ್ತ್ರ ವಿನ್ಯಾಸ ಋತು ಚೈತ್ರ, ಕಲೆ ಬಸವರಾಜ್ ಆಚಾರ್, ಕೆ ಆರ್ ಪೂರ್ಣಚಂದ್ರ ಫಿಲಂಸ್ ಮೂಲಕ ಈ ಚಿತ್ರ ನಿರ್ಮಾಣವಾಗಿದೆ.
ಇದನ್ನೂ ಓದಿ: ಹಿಂದಿ ಚಿತ್ರ ಬಾಲಿವುಡ್ ಎಂದು ಕರೆದುಕೊಳ್ಳುವುದನ್ನು ನಿಲ್ಲಿಸಲಿ: ಸಂಚಲನ ಮೂಡಿಸಿದ ಮಣಿ ರತ್ನಂ
ಸ್ಯಾಂಡಲ್ವುಡ್ ಬೆಡಗಿ ಅದ್ವಿತಿ ಶೆಟ್ಟಿ: ಆಕಸ್ಮಿಕವಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟು ಕಿರುತೆರೆಯ ಜೊತೆಗೆ ಹಿರಿತೆರೆಯಲ್ಲಿಯೂ ಮಿಂಚಿದ ಬೆಡಗಿ ಅದ್ವಿತಿ ಶೆಟ್ಟಿ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಎರಡು ಕನಸು ಧಾರಾವಾಹಿಯಲ್ಲಿ ನಾಯಕಿ ಸಹನಾ ಆಗಿ ನಟಿಸಿ ಕಿರುತೆರೆಯಲ್ಲಿ ಮನೆಮಾತಾದ ಕರಾವಳಿ ಕುವರಿ ಅದ್ವಿತಿ ಶೆಟ್ಟಿ ಸಿನಿಮಾದಲ್ಲಿ ನಟಿಸಿದ್ದೇ ಹೆಚ್ಚು. ಮಿಸ್ಟರ್ ಆ್ಯಂಡ್ ಮಿಸೆಸ್ ರಾಮಾಚಾರಿ ಸಿನಿಮಾದಲ್ಲಿ ಇವರ ಪಾತ್ರ ಮತ್ತಷ್ಟು ಮೋಡಿ ಮಾಡಿತ್ತು. ಬಳಿಕ ಸುಳಿ, ಗಿರಿಗಿಟ್ಲೆ, ಕಾರ್ಮೋಡ ಸರಿದು, ಫ್ಯಾನ್, ಓ ಪ್ರೇಮವೇ, ದೊಡ್ಮನಡ ಹುಡುಗ, ಐರಾವನ್ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.