ಕಳೆದ ನಾಲ್ಕೈದು ದಿನಗಳಿಂದ ದಕ್ಷಿಣ ಚಿತ್ರರಂಗದಲ್ಲಿ 'ಹೇಳಿಕೆ'ಯೊಂದು ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದೆ. ಸ್ಟಾರ್ ನಟಿ ತ್ರಿಶಾ ಕೃಷ್ಣನ್ ಬಗೆಗಿನ ನಟ ಮನ್ಸೂರ್ ಅಲಿ ಖಾನ್ ಅವರ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ನಟನ ಹೇಳಿಕೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನೆಟ್ಟಿಗರು, ಅಭಿಮಾನಿಗಳೂ ಸೇರಿದಂತೆ ಚಿತ್ರರಂಗದ ಖ್ಯಾತನಾಮರಿಂದ ಸಾಕಷ್ಟು ಟೀಕೆ ಸ್ವೀಕರಿಸಿದೆ.
ನಟಿ ತ್ರಿಶಾ ಕೃಷ್ಣನ್ ಜೊತೆ 'ಬೆಡ್ ರೂಮ್ ಸೀನ್' ಸಿಕ್ಕಿಲ್ಲ ಎಂದು ಸಂದರ್ಶನವೊಂದರಲ್ಲಿ ಮನ್ಸೂರ್ ಅಲಿ ಖಾನ್ ತಮ್ಮ ನಿರಾಶೆ ವ್ಯಕ್ತಪಡಿಸಿದ್ದರು. ಅಶ್ಲೀಲ ಕಾಮೆಂಟ್ ಮಾಡಿದ ನಟ ಸದ್ಯ ಕಾನೂನು ಕ್ರಮ ಎದುರಿಸುತ್ತಿದ್ದಾರೆ. ಸಂದರ್ಶನದ ವಿಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿ ಸಾಕಷ್ಟು ಟೀಕೆ ವ್ಯಕ್ತವಾದ ನಂತರ ಚೆನ್ನೈ ನಗರ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಲಿಯೋ ಚಿತ್ರದಲ್ಲಿ ನಟಿಯೊಂದಿಗೆ ರೊಮ್ಯಾಂಟಿಕ್ ಸೀನ್ಗಳನ್ನು ಚಿತ್ರೀಕರಿಸುವ ಅವಕಾಶ ಸಿಗಲಿಲ್ಲ ಎಂದು ತಮ್ಮ ಬೇಸರ ಹೊರ ಹಾಕಿದ್ದರು. ಅವರ ಈ ಒಂದು ಹೇಳಿಕೆ ದಕ್ಷಿಣ ಚಿತ್ರರಂಗದಲ್ಲಿ ಸಾಕಷ್ಟು ಸದ್ದು ಮಾಡಿದೆ.
-
A recent video has come to my notice where Mr.Mansoor Ali Khan has spoken about me in a vile and disgusting manner.I strongly condemn this and find it sexist,disrespectful,misogynistic,repulsive and in bad taste.He can keep wishing but I am grateful never to have shared screen…
— Trish (@trishtrashers) November 18, 2023 " class="align-text-top noRightClick twitterSection" data="
">A recent video has come to my notice where Mr.Mansoor Ali Khan has spoken about me in a vile and disgusting manner.I strongly condemn this and find it sexist,disrespectful,misogynistic,repulsive and in bad taste.He can keep wishing but I am grateful never to have shared screen…
— Trish (@trishtrashers) November 18, 2023A recent video has come to my notice where Mr.Mansoor Ali Khan has spoken about me in a vile and disgusting manner.I strongly condemn this and find it sexist,disrespectful,misogynistic,repulsive and in bad taste.He can keep wishing but I am grateful never to have shared screen…
— Trish (@trishtrashers) November 18, 2023
ಮನ್ಸೂರ್ ಅಲಿ ಖಾನ್ ಸಂದರ್ಶನದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸ್ವತಃ ನಟಿ ತ್ರಿಶಾ ಕೃಷ್ಣನ್ ಕಟುವಾಗಿ ಪ್ರತಿಕ್ರಿಯಿಸಿದ್ದರು. ನಟನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸಿದ್ದರು. ಅವರ ಹೇಳಿಕೆಗಳು ಲೈಂಗಿಕ, ಅಗೌರವ ಮತ್ತು ಸ್ತ್ರೀದ್ವೇಷವನ್ನು ನಿರೂಪಿಸಿದೆ ಎಂದು ಕಿಡಿಕಾರಿದ್ದರು. ಜೊತೆಗೆ ಭವಿಷ್ಯದಲ್ಲಿ ಅವರೊಂದಿಗೆ ತೆರೆ ಹಂಚಿಕೊಳ್ಳುವುದಿಲ್ಲ ಎಂದು ತ್ರಿಶಾ ದೃಢವಾಗಿ ಘೋಷಿಸಿದ್ದರು. ನಟಿಯ ಪ್ರತಿಕ್ರಿಯೆ ಸಖತ್ ಸದ್ದು ಮಾಡಿತು. ದಕ್ಷಿಣ ಚಿತ್ರರಂಗದ ಗಣ್ಯರು ಸಹ ಮನ್ಸೂರ್ ಅಲಿ ಖಾನ್ ಹೇಳಿಕೆಯನ್ನು ಖಂಡಿಸಿದರು. ಮೆಗಾಸ್ಟಾರ್ ಚಿರಂಜೀವಿ, ಲಿಯೋ ನಿರ್ದೇಶಕ ಲೋಕೇಶ್ ಕನಕರಾಜ್, ಹಿರಿಯ ನಟಿ ಖುಷ್ಬೂ ಸೇರಿದಂತೆ ಹಲವರು ನಟಿ ತ್ರಿಶಾ ಕೃಷ್ಣನ್ ಬೆಂಬಲಕ್ಕೆ ನಿಂತಿದ್ದಾರೆ.
-
The National Commission for Women is deeply concerned about the derogatory remarks made by actor Mansoor Ali Khan towards actress Trisha Krishna. We're taking suo motu in this matter directing the DGP to invoke IPC Section 509 B and other relevant laws.Such remarks normalize…
— NCW (@NCWIndia) November 20, 2023 " class="align-text-top noRightClick twitterSection" data="
">The National Commission for Women is deeply concerned about the derogatory remarks made by actor Mansoor Ali Khan towards actress Trisha Krishna. We're taking suo motu in this matter directing the DGP to invoke IPC Section 509 B and other relevant laws.Such remarks normalize…
— NCW (@NCWIndia) November 20, 2023The National Commission for Women is deeply concerned about the derogatory remarks made by actor Mansoor Ali Khan towards actress Trisha Krishna. We're taking suo motu in this matter directing the DGP to invoke IPC Section 509 B and other relevant laws.Such remarks normalize…
— NCW (@NCWIndia) November 20, 2023
ವೈರಲ್ ವಿಡಿಯೋ ವೀಕ್ಷಿಸಿದ ರಾಷ್ಟ್ರೀಯ ಮಹಿಳಾ ಆಯೋಗ ಕೂಡ ಈ ಘಟನೆಯಲ್ಲಿ ಮಧ್ಯಪ್ರವೇಶಿಸಿ, ತಮಿಳುನಾಡು ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿತ್ತು. ಮನ್ಸೂರ್ ಅಲಿ ಖಾನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ, ನಿರ್ದಿಷ್ಟವಾಗಿ ಸೆಕ್ಷನ್ 354ಎ (ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ) ಮತ್ತು 509 ಅಡಿ ಪ್ರಕರಣವನ್ನು ದಾಖಲಿಸುವಂತೆ ಅಧಿಕಾರಿಗಳಿಗೆ ಆಯೋಗ ಸೂಚಿಸಿತ್ತು.
ಇದನ್ನೂ ಓದಿ: ಮನ್ಸೂರ್ ಅಲಿ ಖಾನ್ ಹೇಳಿಕೆಗೆ ಖಂಡನೆ: ನಟಿ ತ್ರಿಶಾ ಪರ ನಿಂತ ಮೆಗಾಸ್ಟಾರ್ ಚಿರಂಜೀವಿ
ರಾಷ್ಟ್ರೀಯ ಮಹಿಳಾ ಆಯೋಗದ ನಿರ್ದೇಶನದ ನಂತರ ಚೆನ್ನೈನ ಥೌಸಂಡ್ ಲೈಟ್ಸ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 354ಎ ಮತ್ತು 509ರ ಅಡಿಯಲ್ಲಿ ಮನ್ಸೂರ್ ಅಲಿ ಖಾನ್ ವಿರುದ್ಧ ಔಪಚಾರಿಕ ಪ್ರಕರಣವನ್ನು (formal case) ದಾಖಲಿಸಲಾಗಿದೆ. ಸದ್ಯ ಪೊಲೀಸರು ತನಿಖಾ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ.
ಇದನ್ನೂ ಓದಿ: ತ್ರಿಶಾ ಬಗ್ಗೆ ಅವಹೇಳನಕಾರಿ ಹೇಳಿಕೆ: ಮನ್ಸೂರ್ ಅಲಿ ಖಾನ್ಗೆ ಚಿತ್ರರಂಗದಿಂದ ಛೀಮಾರಿ