ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಸಿನಿಮಾ 'ಸಲಾರ್'. 'ಕೆಜಿಎಫ್' ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರ ಇದೇ ಡಿಸೆಂಬರ್ 22ರಂದು ಬಿಡುಗಡೆಯಾಗಲಿದೆ. ಖ್ಯಾತ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿರುವ ಈ ಸಿನಿಮಾವನ್ನು ಕಣ್ತುಂಬಿಕೊಳ್ಳಲು ಸಿನಿ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಇದೀಗ ಚಿತ್ರತಂಡ 'ಸಲಾರ್' ಬಗ್ಗೆ ಹೊಸ ಅಪ್ಡೇಟ್ ಹಂಚಿಕೊಂಡಿದೆ. ಸಿನಿಮಾಗೆ ಸೆನ್ಸಾರ್ ಮಂಡಳಿ 'ಎ' ಸರ್ಟಿಫಿಕೇಟ್ ನೀಡಿದೆ.
ಇನ್ನೇನು ಕೆಲವೇ ದಿನಗಳಲ್ಲಿ 'ಸಲಾರ್' ಬಿಡುಗಡೆಯಾಗಲಿದೆ. ಇದೀಗ ಸಿನಿಮಾದ ಸೆನ್ಸಾರ್ ಪೂರ್ಣಗೊಂಡಿದ್ದು, ಸೆನ್ಸಾರ್ ಮಂಡಳಿಯು 2 ಗಂಟೆ 55 ನಿಮಿಷಗಳ ಈ ಆ್ಯಕ್ಷನ್ ಸಿನಿಮಾಗೆ 'ಎ' ಪ್ರಮಾಣಪತ್ರ ನೀಡಿದೆ. ಬಹುನಿರೀಕ್ಷಿತ ಈ ಆ್ಯಕ್ಷನ್ ಚಿತ್ರವನ್ನು ಸೆಂಟ್ರಲ್ ಬೋರ್ಡ್ ಆಫ್ ಸರ್ಟಿಫಿಕೇಶನ್ (CBFC)ಗೆ ಸಲ್ಲಿಸಲಾಯಿತು. ಸೆನ್ಸಾರ್ ಮಂಡಳಿ ಪರೀಕ್ಷೆಯ ನಂತರ ಚಿತ್ರಕ್ಕೆ 'A' ಸರ್ಟಿಫಿಕೇಟ್ ನೀಡಲಾಗಿದೆ. ಏಕೆಂದರೆ, ಅತ್ಯಂತ ತೀವ್ರವಾದ ಹೋರಾಟದ ದೃಶ್ಯಗಳು, ಭಯಾನಕ ಮತ್ತು ಹಿಂಸಾಚಾರದ ದೃಶ್ಯಗಳನ್ನು ಈ ಸಿನಿಮಾ ಒಳಗೊಂಡಿದೆ.
ಈಗಾಗಲೇ ಬಿಡುಗಡೆಯಾಗಿರುವ 'ಸಲಾರ್' ಟ್ರೇಲರ್ ಹೊಸ ಅದ್ಭುತ ಸಿನಿಮೀಯ ಅನುಭವ ನೀಡಲಿರುವ ಭರವಸೆ ಕೊಟ್ಟಿದೆ. ಡಿಸೆಂಬರ್ 2ರಂದು ಟ್ರೇಲರ್ ಅನಾವರಣಗೊಂಡಿದ್ದು, 24 ಗಂಟೆಗಳೊಳಗೆ ಯೂಟ್ಯೂಬ್ನಲ್ಲಿ 116 ಮಿಲಿಯನ್‌ಗೂ ಹೆಚ್ಚು ವೀಕ್ಷಣೆ ಪಡೆದುಕೊಂಡಿತ್ತು. ಈ ಮೂಲಕ 'ಸಲಾರ್' ಭಾರತೀಯ ಸಿನಿಮಾ ರಂಗದ ಬಹುನಿರೀಕ್ಷಿತ ಚಿತ್ರ ಎಂಬುದನ್ನು ಖಚಿತಪಡಿಸಿದೆ.
ಇದನ್ನೂ ಓದಿ: 114 ದಿನಗಳಲ್ಲೇ ಸಲಾರ್ ಚಿತ್ರೀಕರಣ ಮುಗಿಸಿದ್ದೇವೆ: ಆಸಕ್ತಿ ವಿಷಯಗಳನ್ನು ಹಂಚಿಕೊಂಡ ಪ್ರಶಾಂತ್ ನೀಲ್
ಭಾರತೀಯ ಸಿನಿ ಲೋಕದ ಬ್ಲಾಕ್ಬಸ್ಟರ್ ಸಿನಿಮಾ 'ಕೆಜಿಎಫ್'ನಿಂದಾಗಿ ಹೆಸರುವಾಸಿಯಾಗಿರುವ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳಿರುವುದರಿಂದ ಮತ್ತು ಬಾಹುಬಲಿ ಖ್ಯಾತಿಯ ಪ್ರಭಾಸ್ ತೆರೆ ಮೇಲೆ ಅಬ್ಬರಿಸಿರುವುದರಿಂದ ಈ ಪ್ರಾಜೆಕ್ಟ್ ಮೇಲಿನ ನಿರೀಕ್ಷೆ, ಉತ್ಸಾಹ, ಕುತೂಹಲ ಬೆಟ್ಟದಷ್ಟಿದೆ. ಅಲ್ಲದೇ ಚಿತ್ರದಲ್ಲಿ ಪ್ರಭಾಸ್ ಜೊತೆಗೆ ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್ ಮತ್ತು ಜಗಪತಿ ಬಾಬು ಅವರಂತಹ ಸ್ಟಾರ್ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕೆಲಸ ಮಾಡಿದ್ದಾರೆ.
- " class="align-text-top noRightClick twitterSection" data="">
ಈಗಾಗಲೇ ಪೃಥ್ವಿರಾಜ್ ಅವರು ತಮ್ಮ ಪಾತ್ರಕ್ಕೆ ಐದು ಭಾಷೆಗಳಲ್ಲೂ ಡಬ್ಬಿಂಗ್ ಮಾಡಿ ಮುಗಿಸಿದ್ದಾರೆ. ಈ ಬಗ್ಗೆ ಅವರೇ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಡಿ.22ರಂದು 'ಸಲಾರ್: ಪಾರ್ಟ್ 1' ವಿಶ್ವದಾದ್ಯಂತ ಏಕಕಾಲಕ್ಕೆ ಪಂಚಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ಅಂದೇ ನಟ ಶಾರುಖ್ ಖಾನ್ ಮುಖ್ಯಭೂಮಿಕೆಯ ಡಂಕಿ ಕೂಡ ಬಿಡುಗಡೆ ಆಗಲಿದೆ. ಎರಡೂ ಕೂಡ ಈ ಸಾಲಿನ ಬಹುನಿರಿಕ್ಷೀತ ಸಿನಿಮಾವಾದ ಹಿನ್ನೆಲೆಯಲ್ಲಿ ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಮಟ್ಟದ ಪೈಪೋಟಿ ನಡೆಯುವ ನಿರೀಕ್ಷೆ ಇದೆ.
ಇದನ್ನೂ ಓದಿ: 'ಸಲಾರ್' ಟ್ರೇಲರ್ ದಾಖಲೆ: 24 ಗಂಟೆಯೊಳಗೆ 116 ಮಿಲಿಯನ್‌ಗೂ ಹೆಚ್ಚು ವೀಕ್ಷಣೆ!