ETV Bharat / entertainment

ಪಾಸಿಟಿವ್​ ಹುಡ್ಗಿ ಪಾತ್ರದಲ್ಲಿ ಚೈತ್ರಾ ಆಚಾರ್​.. ನಾಯಕ ಎಂಟ್ರಿ ಆದಾಗ ‘ಅಕಟಕಟ’ - ಅಕಟಕಟ’ ಚಿತ್ರಕ್ಕೆ ಚೈತ್ರಾ ಆಚಾರ್ ನಾಯಕಿಯಾಗಿ ಆಯ್ಕೆ

ನಾಗರಾಜ್‌ ಸೋಮಯಾಜಿ ನಿರ್ದೇಶನ ಮಾಡುತ್ತಿರುವ 'ಅಕಟಕಟ' ಸಿನಿಮಾದಲ್ಲಿ ಚೈತ್ರಾ ಆಚಾರ್‌ ಜಾನಕಿ ಎಂಬ ಪಾತ್ರ ಮಾಡಲಿದ್ದಾರೆ. ಸದಾ ಖುಷಿ ಖುಷಿಯಿಂದ ಜೀವನವನ್ನು ಜೀವಿಸುವ, ನೆಗೆಟಿವ್ ಬಿಟ್ಟು ಪಾಸಿಟಿವ್ ಬಗ್ಗೆ ಯೋಚಿಸುವ, ಮಧ್ಯಮ ವರ್ಗದ ಹುಡುಗಿಯಾಗಿ ಚೈತ್ರಾ ಬಣ್ಣ ಹಚ್ಚಲಿದ್ದಾರೆ. ಇಂಥ ನಾಯಕಿಗೆ ನಾಯಕನೊಬ್ಬ ಬದುಕಿಗೆ ಎಂಟ್ರಿ ಕೊಟ್ಟಾಗ ಏನಾಗುತ್ತದೆ ಎನ್ನುವುದು ಚೈತ್ರಾ ಆಚಾರ್ ಪಾತ್ರ ಬಿಂಬಿಸುತ್ತದೆ ಎಂದು ಚಿತ್ರತಂಡ ತಿಳಿಸಿದೆ.

AKATAKATA
ಅಕಟಕಟ ಸಿನೆಮಾ
author img

By

Published : Apr 3, 2022, 4:54 PM IST

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ದಿನ ಕಳೆದಂತೆ ಹೊಸ ಹೊಸ ನಟಿಯರ ಆಗಮನವಾಗುತ್ತಿದೆ. ಆದರೆ, ಗ್ಲಾಮರ್ ಜೊತೆಗೆ ಪ್ರತಿಭೆ, ಅದೃಷ್ಟ ಇದ್ದವರು ಮಾತ್ರ ಇಲ್ಲಿ ಗಟ್ಟಿಯಾಗಿ ನೆಲೆಯೂರುತ್ತಾರೆ. ಈ ಪೈಕಿ ಪ್ರತಿಭಾನ್ವಿತ ನಾಯಕಿ ಚೈತ್ರಾ ಆಚಾರ್ ಕೂಡ ಒಬ್ಬರು. ಮಹಿರಾ, ಗಿಲ್ಕಿ, ತಲೆದಂಡ ಹೀಗೆ ಪ್ರತಿ ಸಿನಿಮಾಗಳಲ್ಲೂ ವಿಶೇಷ ಪಾತ್ರಗಳ ಮೂಲಕ ಗಮನ ಸೆಳೆದಿರುವ ಚೈತ್ರಾ ಈಗ ಅಕಟಕಟ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಪಾಸಿಟಿವ್ ಗರ್ಲ್: ನಾಗರಾಜ್‌ ಸೋಮಯಾಜಿ ನಿರ್ದೇಶನ ಮಾಡುತ್ತಿರುವ ಅಕಟಕಟ ಸಿನಿಮಾದಲ್ಲಿ ಚೈತ್ರಾ ಆಚಾರ್‌ ಜಾನಕಿ ಎಂಬ ಪಾತ್ರ ಮಾಡಲಿದ್ದಾರೆ. ಸದಾ ಖುಷಿ ಖುಷಿಯಿಂದ ಜೀವನವನ್ನು ಜೀವಿಸುವ, ನೆಗೆಟಿವ್ ಬಿಟ್ಟು ಪಾಸಿಟಿವ್ ಬಗ್ಗೆ ಯೋಚಿಸುವ, ಮಧ್ಯಮ ವರ್ಗದ ಹುಡುಗಿಯಾಗಿ ಚೈತ್ರಾ ಬಣ್ಣ ಹಚ್ಚಲಿದ್ದಾರೆ. ಇಂಥ ನಾಯಕಿಗೆ ನಾಯಕನೊಬ್ಬ ಬದುಕಿಗೆ ಎಂಟ್ರಿ ಕೊಟ್ಟಾಗ ಏನಾಗುತ್ತದೆ ಎನ್ನುವುದು ಚೈತ್ರಾ ಆಚಾರ್ ಪಾತ್ರ ಎಂದು ಚಿತ್ರತಂಡ ತಿಳಿಸಿದೆ.

ನಿರ್ದೇಶಕ ಸೋಮಯಾಜಿ ಮೂಲತಃ ಫೋಟೊಗ್ರಾಫರ್‌: ಸಂಚಾರಿ ವಿಜಯ್‌ ನಟಿಸಿದ್ದ ‘ಪುಕ್ಸಟ್ಟೆ ಲೈಫು’ ಸಿನಿಮಾ ನಿರ್ಮಾಣ ಮಾಡಿದ್ದ ನಿರ್ದೇಶಕ ನಾಗರಾಜ್‌ ಸೋಮಯಾಜಿ ಮೂಲತಃ ಫೋಟೊಗ್ರಾಫರ್‌. ರಂಗಭೂಮಿಯಲ್ಲಿಯೂ ಸಕ್ರಿಯರಾಗಿ ಕಿರುಚಿತ್ರವೊಂದನ್ನು ನಿರ್ದೇಶನ ಮಾಡಿದ್ದರು. ಈಗ ಅಕಟಕಟ ಸಿನಿಮಾಗೆ ಕಥೆಯನ್ನು ಬರೆದು ನಿರ್ದೇಶನ ಕೂಡ ಮಾಡಿದ್ದಾರೆ. ಶೀಘ್ರದಲ್ಲೇ ನಾಯಕ ನಟ ಯಾರು ಮತ್ತು ಉಳಿದ ವಿವರಗಳನ್ನು ಚಿತ್ರತಂಡ ರಿವೀಲ್ ಮಾಡಲಿದೆ.

ಓದಿ: ನಾನು ಬಿಜೆಪಿ ಸೇರುವುದು ಖಚಿತ, ಈಗಾಗಲೇ ವರಿಷ್ಠರ ಜೊತೆ ಮಾತುಕತೆಯಾಗಿದೆ: ಹೊರಟ್ಟಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.