ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ತಮ್ಮ ಅಭಿಮಾನಿ ಸಂಘವೊಂದು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸಾರ್ವಜನಿಕವಾಗಿ ಬೆಳ್ಳಿಯ ಲಾಂಗ್ ಹಿಡಿದು ಫೋಟೋಗೆ ಪೋಸ್ ನೀಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
'ಅಖಿಲ ಕರ್ನಾಟಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಳೆಯರ ಬಳಗ' ಎಂಬ ಹೆಸರಿನ ಸಂಘವೊಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿತ್ತು. ಭಾನುವಾರ ಬೆಂಗಳೂರಿನ ಜಯನಗರದ 4ನೇ ಬ್ಲಾಕ್ನಲ್ಲಿ ನಡೆದಿದ್ದ ಸಮಾರಂಭದಲ್ಲಿ ದರ್ಶನ್ ಮತ್ತು ಅಭಿಷೇಕ್ ಅಂಬರೀಶ್ ಭಾಗಿಯಾಗಿದ್ದರು. ಈ ವೇಳೆ ಅಭಿಮಾನಿಗಳು ನೀಡಿದ ಬೆಳ್ಳಿಯ ಲಾಂಗ್ ಹಿಡಿದು ದರ್ಶನ್ ಫೋಟೋಗೆ ಪೋಸ್ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, "ಕಾನೂನಾತ್ಮಕವಾಗಿ ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದ್ದಾರೆ.
- " class="align-text-top noRightClick twitterSection" data="">
'ರಿಯಲ್ ಲಾಂಗ್ ಅಲ್ಲ'; ಸೋಷಿಯಲ್ ಮೀಡಿಯಾದಲ್ಲಿ ನಟ ದರ್ಶನ್ ಅಭಿಮಾನಿ ಬಳಗವೊಂದು ಈ ಬಗ್ಗೆ ಪ್ರತಿಕ್ರಿಯಿಸಿದ್ದು, "ಮಾಧ್ಯಮದಲ್ಲಿ ಬರುತ್ತಿರುವ ಹಾಗೆ ಅದು ರಿಯಲ್ ಲಾಂಗ್ ಅಲ್ಲ. ಕಾಟೇರ ಚಿತ್ರದ ಪ್ರಚಾರಕ್ಕಾಗಿ ಚಿತ್ರದಲ್ಲಿ ಡಿ ಬಾಸ್ ಹಿಡಿದಿರುವ ಮಚ್ಚನ್ನು ಹೋಲುವ ರೀತಿ ಬೆಳ್ಳಿಯಲ್ಲಿ ಮಾಡಿಸಿ ಫ್ಯಾನ್ಸ್ ಕೊಟ್ಟ ಉಡುಗೊರೆಯನ್ನು ತಿರುಚಿ ಅಪಪ್ರಚಾರ ಮಾಡುವ ಕೆಲಸಕ್ಕೆ ಕೆಲ ಮಾಧ್ಯಮದವರು ಮುಂದಾಗಿದ್ದಾರೆ. ಮಾಧ್ಯಮಗಳ ಪ್ರಕಾರ ಬೆಳ್ಳಿ ಹಿಡಿಯುವುದು ತಪ್ಪು ಅಂದ್ರೆ, ರಾಜಕೀಯ ವ್ಯಕ್ತಿಗಳ ಕಾರ್ಯಕ್ರಮದಲ್ಲಿ ನೀಡುವ ಬೆಳ್ಳಿ ಕತ್ತಿ ಸುದ್ದಿ ಪ್ರಸಾರ ಮಾಡುವುದೇ ತಪ್ಪು" ಎಂದಿದ್ದಾರೆ.
ಇದನ್ನೂ ಓದಿ: ಸಾಕು ನಾಯಿ ಕಚ್ಚಿದ ಆರೋಪ: ನಟ ದರ್ಶನ್ಗೆ ನೋಟಿಸ್!