ETV Bharat / entertainment

ಚೇತನ್ ಗಡಿಪಾರು ಭೀತಿ: ಕೇಂದ್ರ ಸರ್ಕಾರದ ಆದೇಶದ ಮೇಲಿನ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ - Chethan Ahimsa visa cancelation

ಒಸಿಐ ಮಾನ್ಯತೆಯನ್ನು ರದ್ದುಗೊಳಿಸಿ ಹೊರಡಿಸಿದ್ದ ಕೇಂದ್ರ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ ಆಗಿದೆ.

Chethan Ahimsa
ಚೇತನ್ ಕುಮಾರ್
author img

By

Published : Jun 2, 2023, 6:28 PM IST

Updated : Jun 2, 2023, 7:51 PM IST

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಕೆಲ ಕಾಲ ನಟನಾಗಿ, ಸದ್ಯ ಸಾಮಾಜಿಕ ಹೋರಾಟಗಾರನಾಗಿ ಗುರುತಿಸಿಕೊಂಡಿರುವ ಚೇತನ್‌ ಅಹಿಂಸಾ ಅವರ ಸಾಗರೋತ್ತರ ಭಾರತೀಯ ನಾಗರಿಕ (ಒಸಿಐ) ವೀಸಾ ರದ್ದು ಮಾಡಿದ್ದ ಕ್ರಮಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್​ ವಿಸ್ತರಣೆ ಮಾಡಿ ಆದೇಶಿಸಿದೆ.

  • Karnataka High Court extended the interim stay on an order passed by the Union Government cancelling the Overseas Citizen of India card of Kannada actor and activist Chetan Ahimsa.

    (File Photo) pic.twitter.com/hxMTkQ4jET

    — ANI (@ANI) June 2, 2023 " class="align-text-top noRightClick twitterSection" data=" ">

ಜೂ. 20ರವರೆಗೂ ತಡೆಯಾಜ್ಞೆ ವಿಸ್ತರಣೆ: ಚೇತನ್‌ ಅಹಿಂಸಾ ಅವರ ವೀಸಾ ರದ್ದುಗೊಳಿಸಿದ್ದ ಕ್ರಮವನ್ನು ಪ್ರಶ್ನಿಸಿ ಚೇತನ್​ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ತಡೆಯಾಜ್ಞೆಯನ್ನು ಜೂನ್​ 20ರ ವರೆಗೂ ವಿಸ್ತರಣೆ ಮಾಡಿ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರ ಚೇತನ್​ ಪರ ವಕೀಲರು ಹಾಜರಾಗಿ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡಿದರು. ಮನವಿ ಆಲಿಸಿದ ನ್ಯಾಪೀಠ ತಡೆಯಾಜ್ಞೆ ವಿಸ್ತರಣೆ ಮಾಡಿ ಆದೇಶಿದೆ.

ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿ ಆರೋಪ: ಈ ಹಿಂದೆ ನಡೆದಿದ್ದ ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಹಾಜರಿದ್ದ ಡೆಪ್ಯುಟಿ ಸಾಲಿಸಿಟರ್ ಜನರಲ್ ಹೆಚ್. ಶಾಂತಿಭೂಷಣ್ ಹಾಗೂ ರಾಜ್ಯದ ಪರ ಹೆಚ್ಚುವರಿ ಅಡ್ವಕೇಟ್ ಜನರಲ್ ಎಂ. ಅರುಣ್ ಶ್ಯಾಮ್ ವಾದ ಮಂಡಿಸಿ, ಅರ್ಜಿದಾರರು ಅನೇಕ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪಗಳಿವೆ ಮತ್ತು ಪದೇ ಪದೇ ನ್ಯಾಯಾಂಗ ನಿಂದನೆಯಾಗುವಂತಹ ಹೇಳಿಕೆ ನೀಡುವುದು ಹಾಗೂ ಸಮುದಾಯಗಳ ಮಧ್ಯೆ ದ್ವೇಷದ ನುಡಿಗಳನ್ನು ಬಿತ್ತುವ ಕೆಲಸ ಮಾಡುತ್ತಿರುವ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ವಾದ ಮಂಡಿಸಿದ್ದರು.

ಇದನ್ನೂ ಓದಿ : ವಿಷ್ಣು ಅಭಿನಯದ 'ಹಲೋ ಡ್ಯಾಡಿ' ಸಿನಿಮಾ ನಟ ನಿಧನ: ಹೃದಯಾಘಾತದಿಂದ ನಿತಿನ್ ಗೋಪಿ ಕೊನೆಯುಸಿರು

ವಾದ ಆಲಿಸಿದ್ದ ನ್ಯಾಯಪೀಠ, ಅರ್ಜಿದಾರರು ನ್ಯಾಯಾಂಗ ನಿಂದನೆಯಾಗುವಂತಹ ಮತ್ತು ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ತಮ್ಮ ಟ್ವಿಟರ್ ಖಾತೆಯಲ್ಲಿ ಯಾವುದೇ ಟ್ವೀಟ್​ ಮಾಡುವಂತಿಲ್ಲ ಎಂದು ನಿರ್ಬಂಧ ವಿಧಿಸಿ ವಿಚಾರಣೆಯನ್ನು ಮುಂದೂಡಿತ್ತು.

ಪ್ರಕರಣದ ಹಿನ್ನೆಲೆ ಏನು ?: ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ ಆರೋಪಕ್ಕೆ ಸಂಬಂಧಿಸಿದಂತೆ ಚೇತನ್‌ ಎ. ಕುಮಾ‌ರ್​ ವಿರುದ್ಧ ಕ್ರಮ ಕೈಗೊಂಡಿದ್ದ ಕೇಂದ್ರ ಸರ್ಕಾರ, ಅವರ ಒಸಿಐ ಕಾರ್ಡ್ ಅನ್ನು 2023ರ ಮಾರ್ಚ್ 28ರಂದು ರದ್ದುಪಡಿಸಿತ್ತು. ಇದರಿಂದ ಗಡಿಪಾರು ಭೀತಿಗೆ ಒಳಗಾಗಿದ್ದ ಚೇತನ್‌ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಕೇಂದ್ರ ಸರ್ಕಾರ ಕೈಗೊಂಡಿರುವ ಈ ಕ್ರಮ ಸಂವಿಧಾನದ 14 ಮತ್ತು 21ನೇ ವಿಧಿಗಳಿಗೆ ವಿರುದ್ಧವಾಗಿದೆ. ಅಂತೆಯೇ ಏಕಪಕ್ಷೀಯ ಮತ್ತು ಕಾನೂನು ಬಾಹಿರವಾಗಿದೆ. ಆದ್ದರಿಂದ, ನಾಗರಿಕ ಕಾಯ್ದೆ 1955ರ ಕಲಂ 7 ಡಿ (ಬಿ) ಮತ್ತು (ಇ) ಅನುಸಾರ ನನ್ನ ವಿರುದ್ಧ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗದಂತೆ ನಿರ್ದೇಶಿಸಬೇಕು ಎಂದು ಕೋರಿದ್ದರು.

ಇದನ್ನೂ ಓದಿ : ZHZB: 'ಸರ್ಕಾರದಿಂದ ಸಿಗುವ ಮನೆ ಹೊಂದಲು ದಂಪತಿಯ ವಿಚ್ಛೇದನ ನಾಟಕ'

Last Updated : Jun 2, 2023, 7:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.