ಕನ್ನಡ ಚಿತ್ರರಂಗದಲ್ಲಿ ಯುವ ಸಾಮ್ರಾಟ್ ಆಗಿ ಕನ್ನಡಿಗರ ಮನಸ್ಸು ಕದ್ದಿದ್ದ ನಟ ಚಿರಂಜೀವಿ ಸರ್ಜಾ. ಚಿತ್ರರಂಗದಲ್ಲಿ ಮಾಸ್ ಇಮೇಜ್ ಕ್ರಿಯೇಟ್ ಮಾಡಿಕೊಂಡಿದ್ದ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನ ಕರುನಾಡ ಜನರಿಗೆ ಕಣ್ಣೀರು ತರಿಸಿತ್ತು.
ಚಿರು ತಮ್ಮ ನಿಧನಕ್ಕೂ ಮುಂಚೆ "ರಾಜಮಾರ್ತಾಂಡ" ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದರು. ಚಿತ್ರೀಕರಣ ಸಹ ಮುಕ್ತಾಯವಾಗಿತ್ತು. ಆದರೆ ಡಬ್ಬಿಂಗ್ ಮಾತ್ರ ಬಾಕಿಯಿತ್ತು. ಬಳಿಕ ಅಣ್ಣನ ಪಾತ್ರಕ್ಕೆ ತಮ್ಮ ಧ್ರುವ ಸರ್ಜಾ ಧ್ವನಿ (ಡಬ್ಬಿಂಗ್) ನೀಡಿದರು. ಇನ್ನು ಚಿತ್ರವನ್ನು ಪೂರ್ಣ ಮಾಡಲು ಚಿರು ಪತ್ನಿ ಮೇಘನಾ ರಾಜ್ ಸರ್ಜಾ ಅವರು ನೀಡಿದ ಸಹಕಾರ ಮರೆಯುವ ಹಾಗಿಲ್ಲ.
ಈ ಚಿತ್ರದಲ್ಲಿ ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ ಸಾತಿ, ಮೇಘಶ್ರೀ, ತ್ರಿವೇಣಿ (ಟಗರು) ಅಭಿನಯಿಸಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ (ಬಾಂಬೆ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಧರ್ಮವಿಶ್ ಹಿನ್ನೆಲೆ ಸಂಗೀತ, ಕೆ ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು ಡಿ ವಿ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಕನ್ನಡ ಚಿತ್ರರಂಗದಲ್ಲಿ ಹತ್ತಾರು ವರ್ಷಗಳಿಂದ ಸ್ಟಾರ್ ನಟರ ಸಿನಿಮಾಗಳಿಗೆ ಅದ್ದೂರಿ ಕಟೌಟ್ ಅದಕ್ಕೆ ಸಾವಿರಾರು ರೂಪಾಯಿ ಬೆಲೆ ಬಾಳುವ ಹೂವಿನ ಅಲಂಕಾರ ಮಾಡುತ್ತಿದ್ದ ಶಿವಕುಮಾರ್ ಅದ್ದೂರಿ ವೆಚ್ಚದಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಸ್ನೇಹಿತರು ಸಿನಿಮಾ ಖ್ಯಾತಿಯ ರಾಮನಾರಾಯಣ್ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ.
ಚಿರಂಜೀವಿ ಸರ್ಜಾ ನಾಯಕನಾಗಿ ನಟಿಸಿರುವ "ರಾಜ ಮಾರ್ತಾಂಡ" ಚಿತ್ರ ಸದ್ಯ ಬಿಡುಗಡೆಗೆ ಸಿದ್ಧವಾಗಿದೆ. ಅಣ್ಣ ಚಿರು ಎಂದರೆ ತಮ್ಮ ಧ್ರುವ ಸರ್ಜಾಗೆ ತುಂಬಾ ಪ್ರೀತಿ. ಹೀಗಾಗಿ "ರಾಜ ಮಾರ್ತಾಂಡ" ಚಿತ್ರವನ್ನು ಧ್ರುವ ಸರ್ಜಾ ಅವರ ಹುಟ್ಟುಹಬ್ಬದ ದಿನದಂದು ಬಿಡುಗಡೆ ಮಾಡಲು ನಿರ್ಮಾಪಕ ಹಾಗೂ ನಿರ್ದೇಶಕರು ನಿರ್ಧರಿಸಿದ್ದಾರೆ. ಇದು ಚಿರಂಜೀವಿ ಸರ್ಜಾ ಹಾಗು ಧ್ರುವ ಸರ್ಜಾ ಅಭಿಮಾನಿ ಬಳಗದಲ್ಲಿ ಕೌತುಕ ಮೂಡಿಸಿದೆ.
ಇದೇ 15ಕ್ಕೆ ತೆರೆ ಕಾಣಲಿದೆ ಮೇಘನಾ ರಾಜ್ ತತ್ಸಮ ತದ್ಭವ: ನಟಿ ಮೇಘನಾ ರಾಜ್ ಅಭಿನಯದ ಕ್ರೈಂ ಥ್ರಿಲ್ಲರ್ ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ತತ್ಸಮ ತದ್ಭವ ಒಂದು ಕ್ರೈಮ್ ಥ್ರಿಲ್ಲರ್ ಚಿತ್ರ. ಆದರೆ ಮಾಮೂಲಿ ಕ್ರೈಮ್ ಥ್ರಿಲ್ಲರ್‌ಗಳಿಗಿಂತ ಇದು ವಿಭಿನ್ನವಾಗಿರಲಿದೆ. ಈ ಚಿತ್ರದ ನಟಿ ಮೇಘನಾರಾಜ್ ಪತಿ ಚಿರಂಜೀವಿ ಸರ್ಜಾ ಅಗಲಿಕೆಯ ಬಳಿಕ ಅಭಿನಯಿಸುತ್ತಿರುವ ಮೊದಲ ಚಿತ್ರವಾಗಿದ್ದು, ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತವಿದ್ದರೆ, ಶ್ರೀನಿವಾಸ ರಾಮಯ್ಯ ಛಾಯಾಗ್ರಹಣವಿದೆ.
ಇದನ್ನೂ ಓದಿ: ಸುಚೇಂದ್ರ ಪ್ರಸಾದ್ ಅಭಿನಯದ 'ತಿಮ್ಮನ ಮೊಟ್ಟೆಗಳು' ಸಿನಿಮಾ ಬಿಡುಗಡೆ ಸಜ್ಜು