ETV Bharat / entertainment

ರಿವೀಲ್ ಆಯ್ತು ಚಿಯಾನ್​ ವಿಕ್ರಮ್ ಹೊಸ ಸಿನಿಮಾ‌ದ ಫಸ್ಟ್ ಲುಕ್ - ಟೈಟಲ್ ಅನಾವರಣ

ವಿಕ್ರಮ್​ ಪ. ರಂಜಿತ್​ ನಿರ್ದೇಶನದಲ್ಲಿ ಚಿತ್ರ ಮಾಡುತ್ತಿರುವುದು ಈಗ ಅಧಿಕೃತವಾಗಿರುವುದಷ್ಟೇ ಅಲ್ಲ, ದೀಪಾವಳಿ ಹಬ್ಬದ ಪ್ರಯುಕ್ತ ಚಿತ್ರದ ಟೈಟಲ್ ಟೀಸರ್ ಸಹ ಅನಾವರಣಗೊಂಡಿದೆ.

Chiyaan Vikram new movie first look
ಚಿಯಾ ವಿಕ್ರಮ್ ಹೊಸ ಸಿನಿಮಾ‌ದ ಫಸ್ಟ್ ಲುಕ್
author img

By

Published : Oct 25, 2022, 4:57 PM IST

ಚಿಯಾನ್ ವಿಕ್ರಮ್ ಅಭಿನಯದ, ಪ. ರಂಜಿತ್ ನಿರ್ದೇಶನದ ಹೊಸ ಚಿತ್ರಕ್ಕೆ ಕೊನೆಗೂ ಟೈಟಲ್ ಅನಾವರಣಗೊಂಡಿದೆ. ಈ ಚಿತ್ರಕ್ಕೆ ‘ತಂಗಲಾನ್’ ಎಂದು ನಾಮಕರಣ ಮಾಡಲಾಗಿದ್ದು, ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ.

ಈ ಹಿಂದೆ ರಜನಿಕಾಂತ್ ಅಭಿನಯದ ಕಬಾಲಿ, ಕಾಲ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದ ಪ. ರಂಜಿತ್, ವಿಕ್ರಮ್ ಅಭಿನಯದಲ್ಲಿ ಕೋಲಾರ ಗೋಲ್ಡ್ ಫೀಲ್ಡ್ ಹಿನ್ನೆಲೆಯಲ್ಲಿ ಒಂದು ಚಿತ್ರ ಮಾಡುತ್ತಾರೆ ಎಂಬ ಸುದ್ದಿ ಇತ್ತು. ಈ ಚಿತ್ರ ಈಗ ಅಧಿಕೃತವಾಗಿರುವುದಷ್ಟೇ ಅಲ್ಲ, ದೀಪಾವಳಿ ಹಬ್ಬದ ಪ್ರಯುಕ್ತ ಚಿತ್ರದ ಟೈಟಲ್ ಟೀಸರ್ ಸಹ ಅನಾವರಣಗೊಂಡಿದೆ.

ತಂಗಲಾನ್ ಚಿತ್ರದಲ್ಲಿ ವಿಕ್ರಮ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಹಬ್ಬದ ದಿನ ಅವರ ಚಿತ್ರವೊಂದರ ಟೀಸರ್ ಬಿಡುಗಡೆಯಾಗಿರುವುದು ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿದೆ. ಈ ಚಿತ್ರದಲ್ಲಿ ವಿಕ್ರಮ್ ಜೊತೆಗೆ ಪಾರ್ವತಿ, ಮಾಳವಿಕಾ ಮೋಹನನ್, ಪಶುಪತಿ, ಹರಿಕೃಷ್ಣನ್, ಅನ್ಬುದುರೈ ಮುಂತಾದ ಪ್ರತಿಭಾವಂತ ಕಲಾವಿದರ ದಂಡೇ ಇದೆ.

ಈ ಚಿತ್ರಕ್ಕೆ ಎ. ಕಿಶೋರ್ ಛಾಯಾಗ್ರಹಣ ಮಾಡುತ್ತಿದ್ದು, ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ಸಂಯೋಜಿಸುತ್ತಿದ್ದಾರೆ. ಪ. ರಂಜಿತ್ ಅವರೇ ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದಿದ್ದು, ಅವರಿಗೆ ಬರವಣಿಗೆಯಲ್ಲಿ ತಮಿಳ್ ಪ್ರಭಾ ಸಹಾಯ ಮಾಡಿದ್ದಾರೆ. ಎಸ್.ಎಸ್. ಮೂರ್ತಿ ಕಲಾನಿರ್ದೇಶನ ಮತ್ತು ಆರ್.ಕೆ. ಸೆಲ್ವಾ ಅವರ ಸಂಕಲನವಿದೆ.

ಕೆಜಿಎಫ್ ಹಿನ್ನೆಲೆಯಲ್ಲಿ ಸಾಗುವ ಈ ಆ್ಯಕ್ಷನ್ ಚಿತ್ರವನ್ನು ಸ್ಟುಡಿಯೋ ಗ್ರೀನ್ ಸಂಸ್ಥೆಯಡಿ ಕೆ.ಇ. ಜ್ಞಾನವೆಲ್ ರಾಜಾ ನಿರ್ಮಿಸುತ್ತಿದ್ದಾರೆ. ದೊಡ್ಡ ಬಜೆಟ್​ನಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ನಿರ್ಮಾಣ‌ ಆಗುತ್ತಿರುವ ಈ ಚಿತ್ರ‌ ಪ್ಯಾನ್ ಇಂಡಿಯಾ ಭಾಷೆಯಲ್ಲಿ ಮೂಡಿ‌ ಬರ್ತಾ‌ ಇದೆ.

ಇದನ್ನೂ ಓದಿ: ಫೈನಲ್ ಆಯ್ತು ಯಶ್ ಮುಂದಿನ ಚಿತ್ರ... ಅದೇ ನಿರ್ದೇಶಕ, ನಿರ್ಮಾಪಕರಿಂದ ಪ್ಯಾನ್ ಇಂಡಿಯಾ ಪ್ರಾಜೆಕ್ಟ್!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.