ಕಾಮಿಡಿಯನ್ ವೀರ್ ದಾಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಏರ್ಪಡಿಸಲಾಗಿದ್ದ ಕಾಮಿಡಿ ಶೋ ಅನ್ನು ಮುಂದೂಡಲಾಗಿದೆ. ಬೆಂಗಳೂರಲ್ಲಿ ನಡೆಯಬೇಕಿದ್ದ ವೀರ್ ದಾಸ್ ಕಾಮಿಡಿ ಶೋಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.
ಈ ಹಿಂದೆ ಅಮೆರಿಕದಲ್ಲಿ ಭಾರತದ ಬಗ್ಗೆ ಅತ್ಯಂತ ಕೆಟ್ಟದಾಗಿ ಕಾಮಿಡಿ ಮಾಡಿ ಅವಹೇಳನ ಮಾಡಿದ್ದರು. ಈ ಕಾರಣಕ್ಕಾಗಿ ಮುಂಬೈ ಪೊಲೀಸರು ಇವರ ಮೇಲೆ ಪ್ರಕರಣವನ್ನು ದಾಖಲಿಸಿದ್ದರು. ಈ ವಿಚಾರವಾಗಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ವೈಯಾಲಿಕವಲ್ ಪೊಲೀಸ್ ಠಾಣೆಯಲ್ಲಿ ಈ ಸಂಘಟನೆ ದೂರು ನೀಡಿತ್ತು. ಬೆಂಗಳೂರಿನಂತಹ ಕೋಮು ಸೂಕ್ಷ್ಮ ಪ್ರದೇಶದಲ್ಲಿ ಇಂತಹ ವಿವಾದಿತ ವ್ಯಕ್ತಿಗೆ ಕಾರ್ಯಕ್ರಮ ನಡೆಸಲು ಅವಕಾಶ ನೀಡಿರುವುದು ಸರಿಯಲ್ಲ ಎಂದು ಬಲಪಂಥೀಯ ಸಂಘಟಗಳು ದೂರು ನೀಡಿರುವ ಕಾರಣದಿಂದ, ಬೆಂಗಳೂರಿನಲ್ಲಿ ನಡೆಯಬೇಕಿದ್ದ ವೀರ್ ದಾಸ್ ಕಾಮಿಡಿ ಶೋ ರದ್ದು ಮಾಡಲಾಗಿದೆ.
ರಾಜ್ಯದಲ್ಲಿ ವೀರ್ ದಾಸ್ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು. ಧಾರ್ಮಿಕ ವಿಚಾರಗಳ ಕುರಿತು, ಮಹಿಳೆಯರ ವಿರುದ್ಧ ಅಪಹಾಸ್ಯ ಮಾಡುತ್ತಿರುವ ವ್ಯಕ್ತಿಗೆ ಇಲ್ಲಿ ಅವಕಾಶ ನೀಡಬಾರದೆಂದು ಆಗ್ರಹಿಸಿ ಇಂದು ಹಿಂದು ಸಂಘಟನೆಗಳಿಂದ ಪ್ರತಿಭಟನೆ ನಡೆದಿದೆ. ಇದೀಗ ಸ್ವತಃ ವೀರ್ ದಾಸ್ ಅವರೇ ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಶೋ ಮುಂದೂಡಿರುವುದಾಗಿ ತಿಳಿಸಿದ್ದಾರೆ.
ತಪ್ಪಿಸಲಾಗದಂತಹ ಪರಿಸ್ಥಿತಿ ಎದುರಾದ ಹಿನ್ನೆಲೆ ಬೆಂಗಳೂರು ಕಾಮಿಡಿ ಶೋ ಅನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರ ಘೋಷಿಸಲಾಗುವುದು, ದಯವಿಟ್ಟು ಕ್ಷಮಿಸಿ ಎಂದು ಬರೆದು ಇನ್ಸ್ಟಾಗ್ರಾಮ್ನಲ್ಲಿ ಫೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ರಾಖಿ ಸಾವಂತ್- ಶೆರ್ಲಿನ್ ಚೋಪ್ರಾ ಕೆಸರೆರಚಾಟ: ಇಬ್ಬರ ವಿರುದ್ಧವೂ ಕೇಸು ದಾಖಲು
ವೀರ್ ದಾಸ್ ಓರ್ವ ಹಾಸ್ಯನಟ. 2005ರಿಂದ ಕಾಮಿಡಿ ಶೋಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಆದರೆ, ಹಾಸ್ಯಕ್ಕಿಂತ ಇವರು ವಿವಾದಗಳಿಂದಲೇ ಹೆಚ್ಚು ಸುದ್ದಿಯಾಗಿದ್ದಾರೆ. ಕೆಲ ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ಇವರ ಮೇಲೆ ಹಲವಾರು ಪ್ರಕರಣಗಳು ದಾಖಲಾಗಿದ್ದವು.