ETV Bharat / entertainment

'ಉಪಾಧ್ಯಕ್ಷ' ಸಿನಿಮಾ ಮೂಲಕ ನಾಯಕ ನಟನಾದ ಹಾಸ್ಯ ಕಲಾವಿದ ಚಿಕ್ಕಣ್ಣ! - Comedy Actor Chikkanna

ಹಾಸ್ಯ ಕಲಾವಿದ ಚಿಕ್ಕಣ್ಣ ಇದೀಗ ಉಪಾಧ್ಯಕ್ಷ ಸಿನಿಮಾ ಮೂಲಕ ನಾಯಕ ನಟರಾಗಿ ಕಾಣಿಸಿಕೊಳ್ಳಲಿದ್ದಾರೆ.

Comedy Actor Chikkanna To Play The Lead In Upadhyaksha Movie
ಉಪಾಧ್ಯಕ್ಷ ಚಿತ್ರದ ಡಬ್ಬಿಂಗ್
author img

By

Published : Sep 20, 2022, 10:06 AM IST

ವಿಭಿನ್ನ ಬಾಡಿ ಲಾಂಗ್ವೇಜ್, ಸಖತ್​ ಕಾಮಿಡಿ ಟೈಮಿಂಗ್​​ನಿಂದ ಕನ್ನಡ ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿರುವ ನಟ ಚಿಕ್ಕಣ್ಣ 'ಉಪಾಧ್ಯಕ್ಷ' ಸಿನಿಮಾ ಮೂಲಕ ಪೂರ್ಣಪ್ರಮಾಣದ ನಾಯಕ ನಟರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

'ಅಧ್ಯಕ್ಷ' ಸಿನಿಮಾದಲ್ಲಿ ಶರಣ್ ಅಧ್ಯಕ್ಷನಾಗಿ ರಂಜಿಸಿದ್ದರೆ, ಚಿಕ್ಕಣ್ಣ ಉಪಾಧ್ಯಕ್ಷನಾಗಿ ನಗೆ ಬಾಂಬ್ ಸಿಡಿಸಿದ್ದರು. ಈಗ ಉಪಾಧ್ಯಕ್ಷ ಚಿತ್ರದಲ್ಲಿ ಹೀರೋ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಚಿತ್ರೀಕರಣ ಪೂರ್ಣಗೊಳಿಸಿರುವ ಈ ಸಿನಿಮಾದ ಡಬ್ಬಿಂಗ್ ಕಾರ್ಯ ಪ್ರಗತಿಯಲ್ಲಿದೆ.

Comedy Actor Chikkanna To Play The Lead In Upadhyaksha Movie
ಉಪಾಧ್ಯಕ್ಷ ಚಿತ್ರದ ಡಬ್ಬಿಂಗ್

ಚಿತ್ರಕ್ಕೆ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಅನಿಲ್ ಕುಮಾರ್ ನಿರ್ದೇಶಿಸುತ್ತಿದ್ದಾರೆ. ಚಿಕ್ಕಣ್ಣನಿಗೆ ನಾಯಕಿಯಾಗಿ ಮಲೈಕ ನಟಿಸುತ್ತಿದ್ದಾರೆ. ಸಾಧುಕೋಕಿಲ, ರವಿಶಂಕರ್, ವೀಣಾಸುಂದರ್ ಮುಂತಾದ ತಾರಾಬಳಗವಿದೆ.

ಈಗಾಗಲೇ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಮೈಸೂರು, ಚಿಕ್ಕಮಗಳೂರು, ಮೂಡಿಗೆರೆ ಮುಂತಾದ ಕಡೆ ಐವತ್ತಕ್ಕೂ ಅಧಿಕ ದಿನಗಳ ಚಿತ್ರೀಕರಣ ನಡೆದಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ ಚಿತ್ರಕ್ಕೆ ಶೇಖರ್ ಚಂದ್ರ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನವಿದೆ. ಉಮಾಪತಿ ಫಿಲಂಸ್ ಅರ್ಪಿಸುವ, ಡಿ.ಎನ್ ಸಿನಿಮಾಸ್ ಲಾಂಛನದಲ್ಲಿ ಸ್ಮಿತಾ ಉಮಾಪತಿ ಹಾಗೂ ನಿರ್ಮಲ ಶ್ರೀನಿವಾಸ್ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ವಿನೋದ್ ಪ್ರಭಾಕರ್ ಮುಂದೆ ತೊಡೆ ತಟ್ಟಲಿರುವ ಶ್ರೀನಗರ ಕಿಟ್ಟಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.