ಕನ್ನಡ ಚಿತ್ರರಂಗದಲ್ಲಿ ಮಾಜಿ ಭೂಗತ ದೊರೆ ಎಂ.ಪಿ.ಜಯರಾಜ್ ಜೀವನಾಧಾರಿತ ಚಿತ್ರ ಬರ್ತಾ ಇರೋದು ಗೊತ್ತಿರುವ ವಿಚಾರ. ಈ ಚಿತ್ರಕ್ಕೆ ಹೆಡ್ ಬುಷ್ ಅಂತಾ ಟೈಟಲ್ ಇಟ್ಟಿದ್ದು, ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಬೇಜಾನ್ ಟಾಕ್ ಆಗುತ್ತಿದೆ. ಡಾಲಿ ಧನಂಜಯ್ ಎಂ. ಪಿ.ಜಯರಾಜ್ ಪಾತ್ರದಲ್ಲಿ ಅಭಿನಯಿಸಿದ್ದು, ಸೈಲೆಂಟ್ ಆಗಿ ಹೆಡ್ ಬುಷ್ ಚಿತ್ರದ ಚಿತ್ರೀಕರಣ ಮುಗಿಸುವ ಮೂಲಕ ಚಿತ್ರತಂಡ ಕುಂಬಳಕಾಯಿ ಹೊಡೆದಿದೆ.
ಅಗ್ನಿ ಶ್ರೀಧರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರವನ್ನು ಶೂನ್ಯ ನಿರ್ದೇಶಿಸಿದ್ದಾರೆ. 1970ರ ಬೆಂಗಳೂರಿನ ಭೂಗತ ಜಗತ್ತನ್ನು ಶೂನ್ಯ ಈ ಚಿತ್ರದಲ್ಲಿ ತೋರಿಸಲು ಹೊರಟಿದ್ದಾರೆ. ಆ ಕಾಲಕ್ಕೆ ಸರಿ ಹೊಂದುವ ಅನೇಕ ಸೆಟ್ ಗಳನ್ನ ಹಾಕಿ ಬೆಂಗಳೂರಿನ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.
ಇದನ್ನೂ ಓದಿ: ರಾಜ್ಯಕ್ಕೆ ಕಾಲಿಟ್ಟಿದೆಯಾ ಒಮಿಕ್ರಾನ್ ಉಪತಳಿ?: ಇನ್ನೆರಡು ದಿನಗಳಲ್ಲಿ ಬರಲಿದೆ ನಿಖರ ವರದಿ !
ಹೆಡ್ ಬುಷ್ ಸಿನಿಮಾದ ಚಿತ್ರೀಕರಣ ಮುಗಿಸಿದ ಸಂತೋಷಕ್ಕೆ ನಟ ಧನಂಜಯ್, ನಿರ್ದೇಶಕ ಶೂನ್ಯ, ಕಥೆ ಚಿತ್ರಕಥೆ ಬರೆದಿರುವ ಅಗ್ನಿ ಶ್ರೀಧರ್ ಚಿತ್ರ ತಂಡದೊಂದಿಗೆ ಸಖತ್ ಡ್ಯಾನ್ಸ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಡಾಲಿ ಧನಂಜಯ, ಪಾಯಲ್ ರಜಪೂತ್, ಕ್ರೇಜಿಸ್ಟಾರ್ ರವಿಚಂದ್ರನ್, ಲೂಸ್ ಮಾದ ಯೋಗಿ, ವಸಿಷ್ಠ ಎನ್ ಸಿಂಹ, ಡೈನಾಮಿಕ್ ಸ್ಟಾರ್ ದೇವರಾಜ್, ಶೃತಿ ಹರಿಹರನ್, ರಘು ಮುಖರ್ಜಿ, ಬಾಲು ನಾಗೇಂದ್ರ ಮುಂತಾದ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.