ETV Bharat / entertainment

'ಡೇರ್ ಡೆವಿಲ್ ಮುಸ್ತಾಫಾ'ಗೆ ಡಾಲಿ ಸಾಥ್: ಮೇ. 19ಕ್ಕೆ ಚಿತ್ರ ತೆರೆಗೆ - daredevil mustafa latest news

ಹೊಸಬರ 'ಡೇರ್ ಡೆವಿಲ್ ಮುಸ್ತಾಫಾ' ಸಿನಿಮಾ ತೆರೆ ಕಾಣಲು ಸಜ್ಜಾಗಿದೆ.

daredevil mustafa movie
'ಡೇರ್ ಡೆವಿಲ್ ಮುಸ್ತಾಫಾ'
author img

By

Published : May 5, 2023, 1:22 PM IST

ಓದುಗರೇ ಹಣ ಹಾಕಿ ಪೂರ್ಣಚಂದ್ರ ತೇಜಸ್ವಿ ಅವರ ಕಥೆಗಳನ್ನಾಧರಿಸಿ ಸಿನಿಮಾ ಮಾಡುತ್ತಿರುವುದು ನಿಮಗೆ ಗೊತ್ತೇ‌ ಇದೆ. 'ಡೇರ್ ಡೆವಿಲ್ ಮುಸ್ತಾಫಾ' ಎಂಬ ಶೀರ್ಷಿಕೆಯಡಿ ಮೂಡಿ ಬರುತ್ತಿರುವ ಈ ಚಿತ್ರ ಬಿಡುಗಡೆಯ ಹೊಸ್ತಿಲಿನಲ್ಲಿದೆ. ಈ ಚಿತ್ರಕ್ಕೆ ಶಶಾಂಕ್ ಸೋಗಾಲ್ ಸಾರಥಿ. ಅವರೇ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಫಟಿಂಗ ಎಂಬ ಜನಪ್ರಿಯ ಕಿರುಚಿತ್ರ ನಿರ್ದೇಶಿಸಿದ್ದ ಶಶಾಂಕ್ ಸೋಗಾಲ್ ಈ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ.

daredevil mustafa movie
'ಡೇರ್ ಡೆವಿಲ್ ಮುಸ್ತಾಫಾ'

ನಾನಾ ಬಗೆಯಲ್ಲಿ ಸಿನಿರಸಿಕರ ಗಮನ ಸೆಳೆಯುತ್ತಿರುವ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾದ 'ನಿನ್ನಂಥೋರ್ ಯಾರೂ ಇಲ್ವಲ್ಲೋ' ಎಂಬ ಹಾಡು ಸೂಪರ್ ಹಿಟ್ ಆಗಿದೆ. ಅಣ್ಣಾವ್ರ ಅನಿಮೇಷನ್ ಮೂಲಕ ಗಮನ ಸೆಳೆದಿರುವ ಈ ಗಾನಲಹರಿಗೆ ವಾಸುಕಿ ವೈಭವ್ ಹಾಗೂ ಸಿದ್ದಾರ್ಥ್ ಬೆಳ್ಮಣ್ಣು ದನಿಯಾಗಿದ್ದಾರೆ. ವಿಭಿನ್ನವಾಗಿ ಮೂಡಿಬಂದಿರುವ 'ನಿನ್ನಂಥೋರ್ ಯಾರೂ ಇಲ್ವಲ್ಲೋ' ಹಾಡು ಸಿನಿಮಾದಲ್ಲಿ ಹೇಗಿರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.

  • " class="align-text-top noRightClick twitterSection" data="">

ಆನಿಮೇಷನ್‌ ಹಾಡಿನ ಮೂಲಕ ಗಮನ ಸೆಳೆದಿರುವ ಡೇರ್ ಡೆವಿಲ್ ಮುಸ್ತಫಾ ಟ್ರೇಲರ್ ಕೂಡ ನಿನ್ನೆ ಬಿಡುಗಡೆ ಆಗಿದೆ. ಯೂಟ್ಯೂಬ್ ಸೆನ್ಸೇಷನ್ ಸ್ಟಾರ್ ಡಾ. ಬ್ರೋ ವಾಯ್ಸ್​​ ಟ್ರೇಲರ್​ನಲ್ಲಿದೆ. ಬಾಲ್ಯದ ಆಟ ಪಾಠ ತುಂಟಾಟದ ಡೇರ್ ಡೆವಿಲ್ ಮುಸ್ತಾಫಾ ಟ್ರೇಲರ್​​ ನೋಡುಗರಿಗೆ ಇಂಪ್ರೆಸ್ ಮಾಡುತ್ತಿದೆ.

ಪೂರ್ಣಚಂದ್ರ ತೇಜಸ್ವಿ ಅವರ ಅಭಿಮಾನಿಗಳಿಂದಲೇ ತಯಾರಾಗಿರುವ ಸಿನಿಮಾಗೆ ನಟರಾಕ್ಷಸ ಡಾಲಿ ಧನಂಜಯ್ ಬೆಂಬಲವಾಗಿ ನಿಂತಿದ್ದಾರೆ. ಹೇಳಿಕೇಳಿ ಸಾಹಿತ್ಯ ಪ್ರೇಮಿಯಾಗಿರುವ ಧನಂಜಯ್ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದು, ಕೆ ಆರ್ ಜಿ ಸ್ಟುಡಿಯೋಸ್ ಮೂಲಕ ರಾಜ್ಯದೆಲ್ಲೆಡೆ ವಿತರಿಸುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

daredevil mustafa movie
'ಡೇರ್ ಡೆವಿಲ್ ಮುಸ್ತಾಫಾ'

ಇದನ್ನೂ ಓದಿ: ಮುಂಬೈನಲ್ಲಿ ಅಮೆರಿಕನ್​ ಬ್ಯಾಕ್‌ಸ್ಟ್ರೀಟ್ ಬಾಯ್ಸ್ ಶೋ: ಬಾಲಿವುಡ್​​ ಸಿನಿಗಣ್ಯರು ಭಾಗಿ

ರಾಹುಲ್‌ ರಾಯ್‌ ಛಾಯಾಗ್ರಹಣ, ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಸಾಹಿತ್ಯದ ಹಾಡುಗಳಿಗೆ ನವನೀತ್‌ ಶ್ಯಾಮ್‌ ಸಂಗೀತವಿದೆ. ಶಿಶಿರ್‌ ಬೈಕಾಡಿ, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್‌. ಉಮೇಶ್‌, ಮಂಡ್ಯ ರಮೇಶ್‌, ಮೈಸೂರ್‌ ಆನಂದ್‌, ಸುಂದರ್‌ ವೀಣಾ, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು ಸೇರಿ ಅನೇಕ ಕಲಾವಿದರು ಈ ಸಿನಿಮಾದ ಭಾಗವಾಗಿದ್ದಾರೆ. ಸಿನಿಮಾಮರ ಬ್ಯಾನರ್‌ನಲ್ಲಿ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ನಿರ್ಮಾಣ ಆಗಿದೆ.

  • " class="align-text-top noRightClick twitterSection" data="">

ಇದನ್ನೂ ಓದಿ: ರಂಗೇರಿದ ‌ಚುನಾವಣಾ ಕಣ: ಮಂಕಾದ ಕನ್ನಡ ಚಿತ್ರರಂಗ, ತೆರೆಕಾಣದ ಸಿನಿಮಾಗಳು

ಕನ್ನಡ ಚಿತ್ರರಸಿಕರನ್ನು ಪೂಚಂತೇ ಪ್ರಪಂಚಕ್ಕೆ ಕರೆದುಕೊಂಡು ಹೋಗಲು ಹೊಸಬರ ಚಿತ್ರತಂಡ ಸಜ್ಜಾಗಿದೆ. ಹೊಸ ಉತ್ಸಾಹಿ ಯುವಕರೇ ಕೂಡಿರುವ ಇಡೀ ಚಿತ್ರ ತಂಡ ಅತ್ಯಂತ ಫ್ಯಾಷನೆಟೇಡ್ ಆಗಿ ಕೆಲಸ ಮಾಡಿದೆ. ಇದು ದೊಡ್ಡ ಪರದೆಯಲ್ಲಿ ಅದ್ಭುತ ಅನುಭವ ಅಂತಾರೆ ನಿರ್ದೇಶಕ ಶಶಾಂಕ್ ಸೋಗಾಲ್. ಈಗಾಗಲೇ ವಿಭಿನ್ನವಾಗಿ ಪ್ರಚಾರ ನಡೆಸುತ್ತಿರುವ ಚಿತ್ರತಂಡ ಮೇ 19ಕ್ಕೆ ರಾಜ್ಯಾದ್ಯಂತ ಸಿನಿಮಾ ಬಿಡುಗಡೆ ಮಾಡಲು ಸಜ್ಜಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.