ETV Bharat / entertainment

ಕನ್ನಡಿಗರನ್ನು ಚಿತ್ರಮಂದಿರಕ್ಕೆ ಕರೆತರುವಲ್ಲಿ ಯಶ ಕಂಡ 'ಡೇರ್​ಡೆವಿಲ್ ಮುಸ್ತಾಫಾ' ಚಿತ್ರತಂಡ - Daredevil Mustafa

ಡೇರ್​ಡೆವಿಲ್ ಮುಸ್ತಾಫಾ ಚಿತ್ರ ಕನ್ನಡಿಗರನ್ನು ಚಿತ್ರಮಂದಿರಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದೆ. ಥಿಯೇಟರ್​ಗೆ ಬರುವುದಕ್ಕೂ ಹಿಂದೇಟು ಹಾಕುತ್ತಿರುವ ಈ ಕಾಲಘಟ್ಟದಲ್ಲಿ 'ಡೇರ್​ಡೆವಿಲ್ ಮುಸ್ತಾಫಾ' ಸಿನಿಮಾವನ್ನು ಕಣ್ತುಂಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ
ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ
author img

By

Published : May 27, 2023, 9:23 PM IST

ಸ್ಯಾಂಡಲ್​ವುಡ್​ನಲ್ಲಿ ಇದೀಗ 'ಡೇರ್​ಡೆವಿಲ್ ಮುಸ್ತಾಫಾ' ಚಿತ್ರದ್ದೇ ಹವಾ! ಸಿನಿ ಪ್ರಿಯರ ಬಾಯಲ್ಲಿ ಈ ಚಿತ್ರದ್ದೇ ಮಾತು. ಕಳೆದ ವಾರ ತೆರೆಗೆ ಬಂದ ಈ ಚಿತ್ರಕ್ಕೆ ಭರಪೂರ ಮೆಚ್ಚುಗೆ ಸಿಗುತ್ತಿದೆ. ಕನ್ನಡಿಗರು ಬಿಗಿದಪ್ಪಿ ಕೊಂಡಾಡುತ್ತಿದ್ದಾರೆ. ಬಿಡುಗಡೆಯಾಗಿ ಅಮೋಘ ಎರಡನೇ ವಾರ ಪ್ರದರ್ಶನ ಕಾಣುತ್ತಿರುವ 'ಡೇರ್​ಡೆವಿಲ್ ಮುಸ್ತಾಫಾ', ಸಿನಿ ಪ್ರಿಯರನ್ನು ಚಿತ್ರಮಂದಿರಕ್ಕೆ ಕರೆತರುವಲ್ಲಿ ಯಶ ಕಂಡಿದೆ. ನೋಡಿದವರೆಲ್ಲ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ನೀವು ಒಂದು ಸಾರಿ ನೋಡುವಂತೆ ಮನವಿ ಕೂಡ ಮಾಡಲಾರಂಭಿಸಿದ್ದಾರೆ.

ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ
ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ

ಕನ್ನಡದ ಚಿತ್ರರಂಗದ ಸದ್ಯದ ಪರಿಸ್ಥಿತಿಯಲ್ಲಿ ಅಷ್ಟಕಷ್ಟೇ! ಜನ ಥಿಯೇಟರ್​ಗೆ ಬರುವುದಕ್ಕೂ ಹಿಂದೇಟು ಹಾಕುತ್ತಿರುವ ಈ ಕಾಲಘಟ್ಟದಲ್ಲಿ 'ಡೇರ್​ಡೆವಿಲ್ ಮುಸ್ತಾಫಾ' ಸಿನಿಮಾವನ್ನು ಕಣ್ತುಂಬಿಕೊಂಡು ಮೆಚ್ಚುಗೆ ಮಾತುಗಳನ್ನಾಡುತ್ತಿದ್ದಾರೆ.‌ ಕಳೆದ ಆರೇಳು ತಿಂಗಳಿನಿಂದ ಥಿಯೇಟರ್​ನಲ್ಲಿ ಯಾವ ಸಿನಿಮಾಗೂ‌ ಸಿಗದ ರೆಸ್ಪಾನ್ಸ್ 'ಡೇರ್​ಡೆವಿಲ್ ಮುಸ್ತಾಫಾ' ಪಾಲಾಗಿದೆ. ಬೆಂಗಳೂರು, ಮಂಗಳೂರು, ಶಿವಮೊಗ್ಗ, ಮೈಸೂರು ಸೇರಿದಂತೆ 40 ಸೆಂಟರ್​ಗಳಲ್ಲಿ ಈ ಚಿತ್ರ ಹೌಸ್ ಫುಲ್ ಪ್ರದರ್ಶನ ಕಂಡಿದೆ.

ಇದನ್ನೂ ಓದಿ: ಟ್ವೀಟ್ ವಾರ್​: ದಿ ಕೇರಳ ಸ್ಟೋರಿ ನಿಷೇಧ ಕುರಿತ ನವಾಜುದ್ದೀನ್ ಹೇಳಿಕೆಗೆ ಅಗ್ನಿಹೋತ್ರಿ ಪ್ರತಿರೋಧ..

ಪೂಚಂತೇ ಪ್ರಪಂಚದಲ್ಲಿ ಪಯಣಿಸಿರುವ ಪ್ರೇಕ್ಷಕಪ್ರಭುಗಳ ಹೃದಯ ಬೆಸೆಯುವ ಕಥೆ ಇದು. ಪ್ರತಿಯೊಬ್ಬರು ಇಂತಹ ಚಿತ್ರವನ್ನು ಮಿಸ್ ಮಾಡದೇ ನೋಡಬೇಕು ಎನ್ನುತ್ತಿದ್ದಾರೆ ಸಿನಿ ರಸಿಕರು. ಚಿತ್ರಕ್ಕೆ ಈ ಮಟ್ಟಿಗಿನ ವಿಮರ್ಶೆ ಹಾಗೂ ಬೇಡಿಕೆ ಸಿಗುತ್ತಿರುವ ಬೆನ್ನಲ್ಲೆ 'ಡೇರ್​ಡೆವಿಲ್ ಮುಸ್ತಾಫಾ' ಚಿತ್ರವನ್ನು ವಿದೇಶದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ರೆಡಿ ಮಾಡಿಕೊಂಡಿದೆ.

ಈ ವಾರ ಅಮೆರಿಕ ಹಾಗೂ ಯುರೋಪ್​ನಲ್ಲಿ ಬಿಡುಗಡೆಯಾಗುತ್ತಿದ್ದು, ಮುಂದಿನ ವಾರ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ದುಬೈ ಸೇರಿದಂತೆ ವಿಶ್ವಾದ್ಯಂತ ಬಿಡುಗಡೆ ಮಾಡಲು ಚಿತ್ರ ತಂಡ ಸಿದ್ಧತೆ ಮಾಡಿಕೊಂಡಿದೆ. ಪೂರ್ಣಚಂದ್ರ ತೇಜಸ್ವಿಯವರ ಕಥೆಯಾಧಾರಿತ ಈ ಚಿತ್ರವನ್ನು ಶಶಾಂಕ್ ಸೋಗಾಲ್ ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಅಂದಹಾಗೇ 'ಡೇರ್​ಡೆವಿಲ್ ಮುಸ್ತಾಫಾ' ಸಿನಿಮಾವನ್ನು ಪೂರ್ಣಚಂದ್ರ ತೇಜಸ್ವಿ ಅಭಿಮಾನಿಗಳೇ ನಿರ್ಮಿಸಿದ್ದಾರೆ.

ನಟ ರಾಕ್ಷಸ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ಅಡಿ ಅರ್ಪಿಸಿದ್ದು, ಕೆಆರ್​ಜಿ ಸ್ಟುಡಿಯೊಸ್ ರಾಜ್ಯದೆಲ್ಲೆಡೆ ಚಿತ್ರವನ್ನು ವಿತರಿಸಿದೆ. ರಾಹುಲ್‌ ರಾಯ್‌ ಛಾಯಾಗ್ರಹಣ, ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಸಾಹಿತ್ಯದ ಹಾಡುಗಳಿಗೆ ನವನೀತ್‌ ಶ್ಯಾಮ್‌ ಸಂಗೀತವಿದೆ.

ಶಿಶಿರ್‌ ಬೈಕಾಡಿ, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್‌. ಉಮೇಶ್‌, ಮಂಡ್ಯ ರಮೇಶ್‌, ಮೈಸೂರ್‌ ಆನಂದ್‌, ಸುಂದರ್‌ ವೀಣಾ, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು ಸೇರಿ ಅನೇಕ ಕಲಾವಿದರು ಈ ಸಿನಿಮಾದ ಭಾಗವಾಗಿದ್ದಾರೆ. ಸಿನಿಮಾಮರ ಬ್ಯಾನರ್‌ನಲ್ಲಿ 'ಡೇರ್​ಡೆವಿಲ್ ಮುಸ್ತಾಫಾ' ನಿರ್ಮಾಣವಾಗಿದೆ. ಮೇ 19ಕ್ಕೆ ರಾಜ್ಯಾದ್ಯಂತ ಸಿನಿಮಾ ಬಿಡುಗಡೆಯಾಗಿದ್ದು ಹೊಸ ಉತ್ಸಾಹಿ ಯುವಕರೇ ಕೂಡಿರುವ ಇಡೀ ಚಿತ್ರ ತಂಡ ಅತ್ಯಂತ ಫ್ಯಾಷನೆಟೇಡ್ ಆಗಿ ಕೆಲಸ ಮಾಡಿದೆ.

ಇದನ್ನೂ ಓದಿ: ವಿವಾಹದ ಸ್ಥಳಾನ್ವೇಷಣೆ ಮಾಡುತ್ತಿರುವ ಪರಿಣಿತಿ: ಸೋದರಿಯಂತೆ ರಾಜಸ್ಥಾನದಲ್ಲಿ ಸಪ್ತಪದಿ ತುಳಿಯಲಿದ್ದಾರಾ ಚೋಪ್ರಾ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.