ETV Bharat / entertainment

ಮುಕ್ತಾಯ ಹಂತ ತಲುಪಿದ 'ಸ್ಪೂಕಿ ಕಾಲೇಜ್' ಚಿತ್ರೀಕರಣ - Spooky College shooting

"ಸ್ಪೂಕಿ ಕಾಲೇಜ್" ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಒಂದೇ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ.

devil story in 'Spooky College'
'ಸ್ಪೂಕಿ ಕಾಲೇಜ್' ಚಿತ್ರೀಕರಣ
author img

By

Published : Apr 21, 2022, 1:27 PM IST

ರಂಗಿತರಂಗ, ಅವನೇ ಶ್ರೀಮನ್ನಾರಾಯಣ ಚಿತ್ರದಂತಹ ಉತ್ತಮ ಚಿತ್ರಗಳ ನಿರ್ಮಾಪಕರಾದ ಹೆಚ್.ಕೆ. ಪ್ರಕಾಶ್ ಅವರು ಶ್ರೀದೇವಿ ಎಂಟರ್ ಟೈನರ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ "ಸ್ಪೂಕಿ ಕಾಲೇಜ್" ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಒಂದೇ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಆ ರೊಮ್ಯಾಂಟಿಕ್ ಹಾಡಿನ ಚಿತ್ರೀಕರಣವನ್ನು ಕಾಡಿನ ಸುಂದರ ಪರಿಸರದಲ್ಲಿ ನಡೆಸುವ ಯೋಚನೆಯಿದೆ. ಕನ್ನಡದ ಪ್ರಸಿದ್ಧ ನಟಿಯೊಬ್ಬರು ಈ ಹಾಡಿನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.

ಧಾರವಾಡದಲ್ಲಿರುವ 103 ವರ್ಷಗಳ ಹಿಂದಿನ ಬ್ರಿಟಿಷರ ಕಾಲದ ಕಾಲೇಜು ಈ ಚಿತ್ರದ ಕೇಂದ್ರ ಬಿಂದು. ಇಲ್ಲೇ ಬಹುತೇಕ ಚಿತ್ರೀಕರಣ ನಡೆದಿದೆ. ಕಾಳಿ ನದಿಯಿಂದ ಆವೃತವಾಗಿರುವ ದಟ್ಟವಾದ ವನಸಿರಿಯನ್ನು ಹೊಂದಿರುವ ದಾಂಡೇಲಿಯಲ್ಲೂ ಚಿತ್ರೀಕರಣ ನಡೆಸಿರುವುದಾಗಿ ಚಿತ್ರತಂಡ ತಿಳಿಸಿದೆ. ಚಿತ್ರದ ಪೋಸ್ಟರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ.

devil story in 'Spooky College'
'ಸ್ಪೂಕಿ ಕಾಲೇಜ್' ತಂಡ

ಹಾರರ್ ಚಿತ್ರಗಳು ಸಾಕಷ್ಟು ಬಂದಿದೆಯಾದರೂ ಇದು ವಿಭಿನ್ನ ಎನ್ನುವ ನಿರ್ದೇಶಕ ಭರತ್, ನಮ್ಮ ಚಿತ್ರ ತಾಂತ್ರಿಕವಾಗಿ ಬಹಳ ಶ್ರೀಮಂತವಾಗಿರುತ್ತದೆ. ಇದು ಒಂಥರ "ಸ್ಪೂಕಿ" ಎಂದು ತಿಳಿಸಿದ್ದಾರೆ. ಮನೋಹರ್ ಜೋಶಿ ಅವರ ಮನಮೋಹಕ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಅವರ ಇಂಪಾದ ಸಂಗೀತ ಹಾಗೂ ಕೆ.ಜಿ.ಎಫ್ ಖ್ಯಾತಿಯ ಶ್ರೀಕಾಂತ್ ಅವರ ಸಂಕಲನ ಸ್ಪೂಕಿ ಕಾಲೇಜ್ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ.

devil story in 'Spooky College'
'ಸ್ಪೂಕಿ ಕಾಲೇಜ್' ಕಲಾವಿದರು

ಕನ್ನಡ ಚಿತ್ರರಂಗದಲ್ಲಿ ಈವರೆಗೂ ಬಂದಿರುವ ನಾ ನಿನ್ನ ಬಿಡಲಾರೆ, ಶ್, ಆಪ್ತಮಿತ್ರ, ರಂಗಿತರಂಗದಂಥಹ ಅದ್ಭುತ ಚಿತಗಳಷ್ಟೇ ನಮ್ಮ ಚಿತ್ರವೂ ಸ್ಪೂಕಿಯಾಗಿರುತ್ತದೆ ಎನ್ನುತ್ತಾರೆ ನಿರ್ದೇಶಕರು. ಯಾರೂ ಊಹಿಸಲಾಗದ ರೀತಿಯ ವಿಭಿನ್ನ ಕ್ಲೈಮ್ಯಾಕ್ಸ್ ಸಹ ಇದೆ. ಸಾಮಾನ್ಯವಾಗಿ ಎಲ್ಲಾ ಕಾಲೇಜಿನಲ್ಲಿ ಲವ್ ಸ್ಟೋರಿ ನೋಡಬಹುದು. ಆದರೆ ದೆವ್ವದ ಸ್ಟೋರಿ ನೋಡಬೇಕಾದರೆ "ಸ್ಪೂಕಿ ಕಾಲೇಜ್"ಗೆ ಬರಬೇಕು.

ಇದನ್ನೂ ಓದಿ: ಶೋಕಿವಾಲನಿಗೆ ಸಾಥ್ ನೀಡಿದ ಸ್ಯಾಂಡಲ್ ವುಡ್ ನಿರ್ದೇಶಕರು

ಹಾರರ್, ಕಾಮಿಡಿ ಹಾಗೂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಭರತ್ ಜೆ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಭರತ್ ಅವರೇ ಬರೆದಿದ್ದಾರೆ. ರೆಡಿಯೋ ಹಾಗೂ ಪ್ರಚಾರ ವಿಭಾಗದಲ್ಲಿ ಕೆಲಸ ಮಾಡಿರುವ ಅನುಭವವಿರುವ ಭರತ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ಪ್ರೀಮಿಯರ್ ಪದ್ಮಿನಿ ಖ್ಯಾತಿಯ ವಿವೇಕ್ ಸಿಂಹ ಚಿತ್ರದ ನಾಯಕ. ದಿಯಾ ಮೂಲಕ ಹೆಸರಾಗಿರುವ ಖುಷಿ ರವಿ ನಾಯಕಿ. ಅಜಯ್ ಪೃಥ್ವಿ, ಹನುಮಂತೇ ಗೌಡ, ಕೆ.ಪಿ.ಶ್ರೀಧರ್, ವಿಜಯ್ ಚೆಂಡೂರ್, ಶರಣ್ಯ ಶೆಟ್ಟಿ, ರಘು ರಮಣಕೊಪ್ಪ ಹಾಗೂ ಕಾಮಿಡಿ ಕಿಲಾಡಿಗಳು ಶೋನ‌ ಜನಪ್ರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕರ್ನಾಟಕದಾದ್ಯಂತ ಆಡಿಷನ್ ನಡೆಸುವ ಮೂಲಕ ಕೂಡ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.