ETV Bharat / entertainment

'ಧಮಾಕ' ಸಿನಿಮಾದ ಮತ್ತೊಂದು ಹಾಡು ಬಿಡುಗಡೆ: ಸಿದ್ದು ಮೂಲಿಮನಿ, ಪ್ರಿಯಾ ಆಚಾರ್ ಭರ್ಜರಿ ಸ್ಟೆಪ್ಸ್ - Dhamaka movie

ಕನ್ನಡ ಚಿತ್ರರಂಗದಲ್ಲಿ ಜನಪ್ರಿಯ ಹಾಸ್ಯ ನಟ ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ.ಆರ್.ಪೇಟೆ ನಾಯಕರಾಗಿ ನಟಿಸುತ್ತಿರುವ ಧಮಾಕ ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ.

Dhamaka movie another song released
'ಧಮಾಕ' ಸಿನಿಮಾದ ಮತ್ತೊಂದು ಹಾಡು ಬಿಡುಗಡೆ
author img

By

Published : Aug 9, 2022, 9:18 AM IST

ಜನಪ್ರಿಯ ಹಾಸ್ಯ ನಟ ಶಿವರಾಜ್ ಕೆ.ಆರ್.ಪೇಟೆ ನಾನು ಮತ್ತು ಗುಂಡ ಸಿನಿಮಾದ ಬಳಿಕ ಮತ್ತೆ ನಾಯಕರಾಗಿ ನಟಿಸುತ್ತಿರುವ 'ಧಮಾಕ' ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಈ ಹಿಂದೆ ರಿಲೀಸ್ ಆಗಿದ್ದ 'ತುಕಾಲಿ ಸಿಂಗಿಂಗ್'​ ಗೆ ಬೇಜಾನ್ ರೆಸ್ಪಾನ್ಸ್ ಸಿಕ್ಕಿತ್ತು. ಇದೀಗ ಸಿದ್ದು ಮೂಲಿಮನಿ ಹಾಗೂ ಪ್ರಿಯಾ ಆಚಾರ್ ಭರ್ಜರಿ ಸ್ಟೆಪ್ಸ್ ಹಾಕಿರುವ 'ನಾನು ಹೋಗೋಕು ಮೊದ್ಲು' ಎಂಬ ಹಾಡು ಬಿಡುಗಡೆಯಾಗಿದೆ.

  • " class="align-text-top noRightClick twitterSection" data="">

ನಿರ್ದೇಶಕ ಲಕ್ಷ್ಮೀ ರಮೇಶ್ ಸಾಹಿತ್ಯದ ಮೆಲೋಡಿ ಹಾಡಿಗೆ ಗಾಯಕ ವಿಜಯ್ ಪ್ರಕಾಶ್ ಹಾಗೂ ಮಾನಸ ಹೊಳ್ಳ ಧ್ವನಿಯಾಗಿದ್ದು, ವಿಕಾಸ್ ವಸಿಷ್ಠ ಸಂಗೀತ ನಿರ್ದೇಶನ ಮಾಡಿದ್ದಾರೆ. ಅದ್ಭುತ ಸಾಹಿತ್ಯ, ಸಂಗೀತ, ಕೊರಿಯೋಗ್ರಾಫಿ ಇರುವ ಹಾಡಿಗೆ ಸಿನಿ ರಸಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಿಂದೆ ಸಿಂಪಲ್ ಸುನಿ ಬಳಗದಲ್ಲಿ ಗುರುತಿಸಿಕೊಂಡಿರುವ ಪ್ರತಿಭಾನ್ವಿತ ನಿರ್ದೇಶಕ ಲಕ್ಷ್ಮೀ ರಮೇಶ್ ಧಮಾಕಾ ಸಿಸಿಮಾಗೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ.

ಕಾಮಿಡಿ ಕಿಲಾಡಿ ಶೋ ಮೂಲಕ ಗುರುತಿಸಿಕೊಂಡಿರುವ ನಯನಾ ಶರತ್ 'ಧಮಾಕ' ಸಿನಿಮಾದಲ್ಲಿ ಶಿವರಾಜ್ ಕೆ.ಆರ್ ಪೇಟೆ ಜೊತೆ ನಟಿಸುತ್ತಿದ್ದಾರೆ. ಉಳಿದಂತೆ ಸಿದ್ದು ಮೂಲಿಮನಿ, ಪ್ರಿಯಾ ಆಚಾರ್, ಪ್ರಕಾಶ್‌ ತುಂಬಿನಾಡ್, ಮೋಹನ್ ಜುನೇಜಾ, ಕೋಟೆ ಪ್ರಭಾಕರ್, ಮೈಕೋ ನಾಗರಾಜ್, ಅರುಣಾ ಬಾಲರಾಜ್ ತಾರಾಗಣದಲ್ಲಿ ಕಾಣಿಸಿಕೊಂಡಿದ್ದಾರೆ. ಎಸ್‌ಆರ್ ಮೀಡಿಯಾ ಪ್ರೊಡಕ್ಷನ್ಸ್‌ ಮತ್ತು ನಂದಿ ಎಂಟರ್‌ಟೇನ್‌ಮೆಂಟ್ಸ್ ಬ್ಯಾನರ್‌ ಅಡಿ ಈ ಸಿನಿಮಾ ನಿರ್ಮಾಣಗೊಂಡಿದೆ. ಹಾಲೇಶ್ ಸಿನಿಮೆಟೊಗ್ರಫಿ, ವಿನಯ್ ಕೂರ್ಗ್ ಸಂಕಲನ ಧಮಾಕಾ ಸಿನಿಮಾದಲ್ಲಿದೆ.

ಇದನ್ನೂ ಓದಿ: ಓದು, ನಟನೆ ಎರಡನ್ನೂ ಬ್ಯಾಲೆನ್ಸ್ ಮಾಡುತ್ತಿರುವ 'ಗಟ್ಟಿಮೇಳ'ದ ಅದಿತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.