ETV Bharat / entertainment

ಧರಣಿ ಮಂಡಲ ಮಧ್ಯದೊಳಗೆ ಸಿನಿಮಾ ಟೀಸರ್ ರಿಲೀಸ್.. ಬೋಲ್ಡ್ ಲುಕ್​ನಲ್ಲಿ ಐಶಾನಿ ಶೆಟ್ಟಿ - Aishani Shetty films

ಗ್ಲ್ಯಾಮರ್ ಹಾಗೂ ಬಬ್ಲೀ ಪಾತ್ರಗಳಲ್ಲಿ ಮಿಂಚುತ್ತಿದ್ದ ಐಶಾನಿ ಶೆಟ್ಟಿ ಈಗ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾದಲ್ಲಿ ಬೋಲ್ಡ್ ಪಾತ್ರ ಮಾಡಿದ್ದಾರೆ. ಗುಳ್ಟು ಸಿನಿಮಾ ಖ್ಯಾತಿಯ ನವೀನ್ ಜೊತೆಯಾಗಿ ನಟಿಸಿರುವ ಈ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಸ್ಯಾಂಡಲ್ ವುಡ್​ನಲ್ಲಿ ಸಖತ್​ ಸುದ್ದಿಯಾಗಿದೆ.

Dharani Mandala Madhyadolage teaser released
ನಟಿ ಐಶಾನಿ ಶೆಟ್ಟಿ
author img

By

Published : Jun 17, 2022, 1:40 PM IST

ವಾಸ್ತು ಪ್ರಕಾರ, ರಾಕೆಟ್, ನಡುವೆ ಅಂತರವಿರಲಿ, ನಮ್ ಗಣಿ ಬಿಕಾಂ ಪಾಸ್ ಸಿನಿಮಾಗಳ ಮೂಲಕ ಸ್ಯಾಂಡಲ್​ವುಡ್​ನಲ್ಲಿ ತನ್ನದೇ ಐಡೆಂಟಿಟಿ ಹೊಂದಿರುವ ನಟಿ ಐಶಾನಿ ಶೆಟ್ಟಿ. ಗ್ಲ್ಯಾಮರ್ ಹಾಗೂ ಬಬ್ಲೀ ಪಾತ್ರಗಳಲ್ಲಿ ಮಿಂಚುತ್ತಿದ್ದ ಐಶಾನಿ ಶೆಟ್ಟಿ ಈಗ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾದಲ್ಲಿ ಬೋಲ್ಡ್ ಪಾತ್ರ ಮಾಡಿದ್ದಾರೆ.

ಹೌದು, ಕೈಯಲ್ಲಿ ಸಿಗರೇಟ್ ಹಿಡಿದು, ವಿಭಿನ್ನ ಶೈಲಿಯಲ್ಲಿ ಸಿಗರೇಟ್ ಸೇದುವ ಮೂಲಕ ಐಶಾನಿ ಶೆಟ್ಟಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಗುಳ್ಟು ಸಿನಿಮಾ ಖ್ಯಾತಿಯ ನವೀನ್ ಜೊತೆಯಾಗಿ ನಟಿಸಿರುವ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಸ್ಯಾಂಡಲ್ ವುಡ್​ನಲ್ಲಿ ಸಖತ್​ ಸುದ್ದಿಯಾಗಿದೆ.

ಧರಣಿ ಮಂಡಲ ಮಧ್ಯದೊಳಗೆ ಸಿನಿಮಾ ಟೀಸರ್ ರಿಲೀಸ್

ಡ್ರಗ್ಸ್, ಕೊಲೆ, ಪ್ರೀತಿ, ಪ್ರೇಮ, ಕುಟುಂಬದ ಸುತ್ತ ಹೆಣೆದಿರುವ ಟೀಸರ್ ನೋಡುಗರ ನಿರೀಕ್ಷೆ ಹೆಚ್ಚಿಸಿದೆ. ಇದೊಂದು ಡಿಫರೆಂಟ್ ಕಥೆ ಎಂಬುದನ್ನು ನಿರ್ದೇಶಕರು ಅಚ್ಚುಕಟ್ಟಾಗಿ ತೋರಿಸಿದ್ದಾರೆ. ಅತ್ಯಂತ ಪರಿಣಾಮಕಾರಿಯಾಗಿ ಮೂಡಿ ಬಂದಿರುವ ‘ಧರಣಿ ಮಂಡಲ ಮಧ್ಯದೊಳಗೆ’ ಟೀಸರ್ ಯೂಟ್ಯೂಬ್ ಲೋಕದಲ್ಲಿ ಸಂಚಲನ ಸೃಷ್ಟಿಸುತ್ತಿದೆ.

Dharani Mandala Madhyadolage teaser released
ನಟಿ ಐಶಾನಿ ಶೆಟ್ಟಿ

ಬೋಲ್ಡ್ ಲುಕ್​ನಲ್ಲಿ ಐಶಾನಿ ಶೆಟ್ಟಿ ಗಮನಸೆಳೆದರೆ, ನವೀನ್ ನಾಯಕನ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ. ಇವರೊಂದಿಗೆ ಯಶ್ ಶೆಟ್ಟಿ, ಸಿದ್ದು ಮೂಲಿಮನಿ, ಪ್ರಕಾಶ್ ತುಮ್ಮಿನಾಡ್ ಓಂಕಾರ್, ನಿತೇಶ್ ಮಹಾನ್, ಜಯಶ್ರೀ ಆರಾಧ್ಯ, ಶಾಂಭವಿ ತಮ್ಮ ಪಾತ್ರಗಳ ಮೂಲಕ ಜೀವಿಸಿದ್ದಾರೆ.

ಇದನ್ನೂ ಓದಿ: 'ಉಪಾಧ್ಯಕ್ಷ' ಸಿನಿಮಾ‌ ಮೂಲಕ ಹೀರೋ ಆಗಿ ಮಿಂಚಲಿರುವ ಹಾಸ್ಯ ನಟ ಚಿಕ್ಕಣ್ಣ

ಟಾಲಿವುಡ್ ಸ್ಟಾರ್ ನಿರ್ದೇಶಕ ಪುರಿ ಜಗನ್ನಾಥ್ ಅವರೊಂದಿಗೆ ಕೆಲಸ ಮಾಡಿರುವ ಅನುಭವ ಹೊಂದಿರುವ ಶ್ರೀಧರ್ ಶಿಕಾರಿಪುರ ‘ಧರಣಿ ಮಂಡಲ ಮಧ್ಯದೊಳಗೆ' ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರವನ್ನು ಓಂಕಾರ್‌ ನಿರ್ಮಿಸಿದ್ದಾರೆ. ವೀರೇಂದ್ರ ಕಾಂಚನ್‌, ಕೆ. ಗೌತಮಿ ರೆಡ್ಡಿ ನಿರ್ಮಾಣಕ್ಕೆ ಸಾಥ್‌ ನೀಡಿದ್ದಾರೆ. ಕೀರ್ತನ್‌ ಪೂಜಾರಿ ಕ್ಯಾಮೆರಾ, ರೋಣದ ಬಕ್ಕೇಶ್‌, ಕಾರ್ತಿಕ್‌ ಚೆನ್ನೋಜಿರಾವ್‌ ಅವರ ಸಂಗೀತ, ಉಜ್ವಲ್ ಚಂದ್ರ ಸಂಕಲನವಿದೆ. ಸದ್ಯದಲ್ಲೇ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.