ETV Bharat / entertainment

80ರ ದಶಕದ ಕಥಾನಕ ಹೇಳುವ 'ದೂರದರ್ಶನ'.. ದಿಯಾ ಖ್ಯಾತಿಯ ಪೃಥ್ವಿ ಅಂಬರ್​ ಹೀರೋ - 80ರ ದಶಕದ ಘಟನೆಗಳ ಕಥಾನಕ ದೂರದರ್ಶನ

ದಿಯಾ ಸಿನಿಮಾ ಖ್ಯಾತಿಯ ಮಂಗಳೂರಿನ ಪ್ರತಿಭೆ ಪೃಥ್ವಿ ಅಂಬರ್ ದೂರದರ್ಶನ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪೃಥ್ವಿಗೆ ಜೋಡಿಯಾಗಿ ಅಯಾನಾ ಹೆಜ್ಜೆ ಹಾಕಿದರೆ, ಪ್ರಮುಖ ಪಾತ್ರದಲ್ಲಿ ಉಗ್ರಂ ಮಂಜು ಕಾಣಿಸಿಕೊಂಡಿದ್ದಾರೆ.

dia-actor-pruthvi
ಪೃಥ್ವಿ ಅಂಬರ್​ ಹೀರೋ
author img

By

Published : May 13, 2022, 10:52 PM IST

ದೂರದರ್ಶನ, ಈ ಹೆಸರು ಕೇಳಿದ ತಕ್ಷಣ ದೃಶ್ಯಗಳನ್ನು ಹಾಗೂ ಧ್ವನಿಯನ್ನು ಜಂಟಿಯಾಗಿ ಪ್ರಸಾರ ಮಾಡುವ ಮಾಯಾಪೆಟ್ಟಿಗೆ ಎಲ್ಲರಿಗೂ ನೆನಪಾಗುತ್ತದೆ. ಕರಾವಳಿ ಮತ್ತು ಪಶ್ಚಿಮ ಘಟ್ಟಗಳ ನಡುವಿನ ಒಂದು ಚಿಕ್ಕ ಊರೊಳಗೆ ಟಿವಿ ಬಂದ ಮೇಲೆ ಹೇಗೆಲ್ಲಾ ಪ್ರಭಾವ ಬೀರುತ್ತದೆ. ಅಂದಿನ ಕಾಲ ಘಟ್ಟದಲ್ಲಿ ಇದ್ದಂತಹ ಹಲವಾರು ಪ್ರಚಲಿತ ವಿದ್ಯಮಾನಗಳನ್ನು ನೋಡುಗರು ಮೆಲುಕು ಹಾಕುವಂತೆ ಮಾಡುವ ಕಥಾ ಹಂದರ ಇರುವ ಸಿನಿಮಾವೇ ದೂರದರ್ಶನ. ಆಕರ್ಷಕ ಶೀರ್ಷಿಕೆಯಡಿ ತಯಾರಾಗಿರುವ ಈ ಸಿನಿಮಾ 80ರ ದಶಕಕ್ಕೆ ನೋಡುಗರನ್ನು ಕರೆದೊಯ್ಯುವಂತೆ ಈ ಸಿನಿಮಾ ಮಾಡುತ್ತದೆಯಂತೆ.

ದಿಯಾ ಸಿನಿಮಾ ಮೂಲಕ ಪ್ರೇಕ್ಷಕರ ಮನೆ ಮನ ಗೆದ್ದಿರುವ, ಮಂಗಳೂರಿನ ಪ್ರತಿಭೆ ಪೃಥ್ವಿ ಅಂಬರ್ ದೂರದರ್ಶನ ಸಿನಿಮಾದ ಹೀರೋ. ಪೃಥ್ವಿಗೆ ಜೋಡಿಯಾಗಿ ಅಯಾನಾ ನಟಿಸಿದ್ದಾರೆ. ಪ್ರಮುಖ ಪಾತ್ರದಲ್ಲಿ ಉಗ್ರಂ ಮಂಜು ಕಾಣಿಸಿಕೊಂಡಿದ್ದಾರೆ. ಉಳಿದಂತೆ ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಸೇರಿದಂತೆ ಮತ್ತಿತರ ತಾರಾಗಣ ಸಿನಿಮಾದಲ್ಲಿದೆ.

ನೈಜ ಘಟನೆ ಹಾಗೂ ಕಾಲ್ಪನಿಕತೆ ಬೆರೆತ ಸಿನಿಮಾವಾಗಿರುವ ದೂರದರ್ಶನ ಚಿತ್ರೀಕರಣ ಮಂಗಳೂರು ಪುತ್ತೂರು ಮಧ್ಯದ ಆರ್ಲಪದವಿನಲ್ಲಿ 38 ದಿನಗಳ ಕಾಲ ಮಾಡುವ ಮೂಲಕ ಕುಂಬಳಕಾಯಿ ಹೊಡೆದಿದೆ. ಟ್ರಂಕ್ ಸಿನಿಮಾದಲ್ಲಿ ಸಂಭಾಷಣೆ ಹಾಗೂ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ, ಹಲವು ಕಿರುಚಿತ್ರಗಳನ್ನು ನಿರ್ದೇಶನ ಮಾಡಿರುವ ಸುಕೇಶ್ ಶೆಟ್ಟಿ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದು, ಸಿನಿಮಾಗೆ ಕಥೆ, ಚಿತ್ರಕಥೆಯನ್ನೂ ಬರೆದಿದ್ದಾರೆ. ಇದು ಇವರ ಮೊದಲ ಸಿನಿಮಾವಾಗಿದೆ.

ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದು, ಅರುಣ್ ಸುರೇಶ್ ಕ್ಯಾಮೆರಾ ವರ್ಕ್ ಇದೆ. ನಂದೀಶ್ ಟಿಜಿ ಸಂಭಾಷಣೆ, ಪ್ರದೀಪ್ ಆರ್ ರಾವ್ ಸಂಕಲನ ಸಿನಿಮಾಕ್ಕಿದೆ. ದೂರದರ್ಶನ ಸಿನಿಮಾದಲ್ಲಿ ನಾಲ್ಕು ಹಾಡುಗಳು, ಎರಡು ಫೈಟ್ ಸೀನ್ಸ್​​ಗಳಿದ್ದು, ಹೊಡೆದಾಟದ ದೃಶ್ಯಗಳನ್ನು ನೈಜ ರೀತಿಯಲ್ಲಿ ಚಿತ್ರೀಕರಿಸಲಾಗಿದೆ. ವಿಎಸ್ ಮೀಡಿಯಾ ಎಂಟರ್ ಪ್ರೈಸಸ್ ಬ್ಯಾನರ್ ನಡಿ ರಾಜೇಶ್ ಭಟ್ ಸಿನಿಮಾಗೆ ಬಂಡವಾಳ ಹೂಡಿದ್ದು, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಜವಾಬ್ದಾರಿಯನ್ನು ಉಗ್ರಂ ಮಂಜು ಹೊತ್ತಿದ್ದಾರೆ.

ಓದಿ: ಮೇಘನಾ ಗಾಂವ್ಕರ್‌ ಅಭಿಯನದ 'ಶುಭಮಂಗಳ' ಟೀಸರ್ ರಿಲೀಸ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.