ಆಸ್ಕರ್ ಅವಾರ್ಡ್ 2022.. ನಿರ್ದೇಶಕ ಪವನ್ ಒಡೆಯರ್ಗೆ ಜ್ಯೂರಿ ಸ್ಥಾನ - Oscar Award 2022
ಕನ್ನಡದ ಪ್ರತಿಭಾವಂತ ನಿರ್ದೇಶಕ ಹಾಗೂ ನಿರ್ಮಾಪಕ ಪವನ್ ಒಡೆಯರ್ ಆಸ್ಕರ್ ಅವಾರ್ಡ್ ಸೆಲೆಕ್ಷನ್ ಕಮಿಟಿ ಸದಸ್ಯರಾಗಿ ಭಾಗಿಯಾಗಿದ್ದಾರೆ.
ಪ್ರತಿಷ್ಠಿತ ಆಸ್ಕರ್ ಅವಾರ್ಡ್ 2022 ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಬಾರಿ ಆಸ್ಕರ್ ಪ್ರಶಸ್ತಿಗಳು ಯಾರ ಯಾರ ಪಾಲಾಗುತ್ತವೆ ಎಂಬ ಲೆಕ್ಕಾಚಾರಗಳು ಜೋರಾಗಿದೆ. ಭಾರತದಿಂದ ಬೇರೆ ಬೇರೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಗೆ ಹಲವಾರು ಸಿನಿಮಾಗಳು ನಾಮ ನಿರ್ದೇಶನವಾಗಿ ಗಮನ ಸೆಳೆಯುತ್ತಿವೆ.
ಸದ್ಯ ಹೊಸ ಸಮಾಚಾರವೇನಪ್ಪ ಅಂದ್ರೆ.. ಆಸ್ಕರ್ ಅವಾರ್ಡ್ ಜ್ಯೂರಿ ಸದಸ್ಯರಾಗಿ ಕನ್ನಡದ ನಿರ್ದೇಶಕರು ಪಾಲ್ಗೊಂಡಿರೋದು. ಹೌದು, ಕನ್ನಡದ ಪ್ರತಿಭಾವಂತ ನಿರ್ದೇಶಕ ಹಾಗೂ ನಿರ್ಮಾಪಕ ಪವನ್ ಒಡೆಯರ್ ಆಸ್ಕರ್ ಅವಾರ್ಡ್ ಸೆಲೆಕ್ಷನ್ ಕಮಿಟಿ ಸದಸ್ಯರಾಗಿ ಭಾಗಿಯಾಗಿದ್ದಾರೆ. ಈ ಖುಷಿಯ ಕ್ಷಣವನ್ನು ಪವನ್ ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಪವನ್ ಒಡೆಯರ್, ಆಸ್ಕರ್ ಕಮಿಟಿಯಿಂದ ನನಗೆ ಕರೆ ಬರುತ್ತದೆ ಎಂದು ನಾನು ನಿರೀಕ್ಷೆ ಕೂಡ ಮಾಡಿರಲಿಲ್ಲ. ಆರಂಭದಲ್ಲಿ ನನಗೆ ನಂಬಲೂ ಸಾಧ್ಯವಾಗಲಿಲ್ಲ. ನನ್ನ ಸಿನಿಮಾ ಕೆಲಸಗಳನ್ನು ಗುರುತಿಸಿ ಜ್ಯೂರಿಯಾಗಿ ಭಾಗವಹಿಸಲು ಆಹ್ವಾನ ನೀಡಿದ್ದು, ಬಹಳ ಸಾರ್ಥಕತೆ ನೀಡಿದೆ. ನನ್ನ ನಿರ್ಮಾಣದ 'ಡೊಳ್ಳು' ಸಿನಿಮಾ ಇಂತಹದ್ದೊಂದು ಪ್ರತಿಷ್ಠಿತ ವೇದಿಕೆಯನ್ನು ನನಗೆ ಕಲ್ಪಿಸಿಕೊಟ್ಟಿದೆ. ಇದು ಬಹಳ ದೊಡ್ಡ ಗೌರವ ಎಂದೇ ನಾನು ಭಾವಿಸುತ್ತೇನೆ. 17 ಜನರ ತಂಡದಲ್ಲಿ ಕನ್ನಡ ಚಿತ್ರರಂಗದಿಂದ ನಾನೂ ಒಬ್ಬ ಜ್ಯೂರಿಯಾಗಿ ಭಾಗವಹಿಸಿದ್ದು ಬಹಳ ಸಂತಸ ತಂದಿದೆ ಎಂದು ಪವನ್ ಒಡೆಯರ್ ಹರ್ಷ ವ್ಯಕ್ತಪಡಿಸಿದ್ದಾರೆ.
-
It was an amazing experience of being Oscar jury under the veteran chairman @TSNagabharana sir
— Pavan Wadeyar (@PavanWadeyar) September 26, 2022 " class="align-text-top noRightClick twitterSection" data="
Thank you #FFI for this. pic.twitter.com/d425F3xAGK
">It was an amazing experience of being Oscar jury under the veteran chairman @TSNagabharana sir
— Pavan Wadeyar (@PavanWadeyar) September 26, 2022
Thank you #FFI for this. pic.twitter.com/d425F3xAGKIt was an amazing experience of being Oscar jury under the veteran chairman @TSNagabharana sir
— Pavan Wadeyar (@PavanWadeyar) September 26, 2022
Thank you #FFI for this. pic.twitter.com/d425F3xAGK
ಹಿಂದಿ, ಬೆಂಗಾಲಿ, ತೆಲುಗು, ತಮಿಳು, ಗುಜರಾತಿ, ಮಲಯಾಳಂ ಭಾಷೆಗಳಿಂದ ಸಿನಿಮಾಗಳು ಆಸ್ಕರ್ಗೆ ಆಯ್ಕೆಯಾಗಿವೆ. ನಮ್ಮ ಭಾಷೆಯಿಂದ ಯಾವ ಸಿನಿಮಾಗಳೂ ಆಸ್ಕರ್ಗೆ ಆಯ್ಕೆ ಆಗಿಲ್ಲದಿರುವುದು ಬೇಸರದ ಸಂಗತಿ. ಮುಂದಿನ ದಿನಗಳಲ್ಲಿ ಖಂಡಿತ ನಮ್ಮ ಸಿನಿಮಾಗಳು ಆಸ್ಕರ್ಗೆ ನಾಮ ನಿರ್ದೇಶನವಾಗಲಿವೆ ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ ಪವನ್ ಒಡೆಯರ್.
ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಹೊಸಬರು ಹಳಬರ ನಡುವೆ ಪಿರಮಿಡ್ ಆಟ.. ಗೆಲುವು ಯಾರಿಗೆ?
ಪವನ್ ಒಡೆಯರ್ ನಿರ್ಮಾಣದಲ್ಲಿ ಮೂಡಿ ಬಂದಿರುವ 'ಡೊಳ್ಳು' ಸಿನಿಮಾ ಜನ ಮೆಚ್ಚುಗೆ ಗಳಿಸಿದ್ದು, ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದೆ. ಅವರ ನಿರ್ದೇಶನದ 'ರೇಮೋ' ಸಿನಿಮಾ ಇನ್ನೇನು ಬಿಡುಗಡೆಯಾಗಬೇಕಿದೆ.