ರಾಜ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದೆ. ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ, ರೈತರು ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಹಲವು ದಿನಗಳಿಂದ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಯಾಂಡಲ್ವುಡ್ ನಟರು ಕೂಡ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ. ಅನ್ನದಾತರಿಗೆ ಬೆಂಬಲ ನೀಡಲು ಸೋಷಿಯಲ್ ಮೀಡಿಯಾವನ್ನು ವೇದಿಕೆಯನ್ನಾಗಿ ಬಳಸಿಕೊಂಡಿದ್ದಾರೆ.
ಈಗಾಗಲೇ ನಟರಾದ ಶಿವ ರಾಜ್ಕುಮಾರ್, ಕಿಚ್ಚ ಸುದೀಪ್, ಡಾಲಿ ಧನಂಜಯ್, ರಿಷಬ್ ಶೆಟ್ಟಿ, ದರ್ಶನ್, ವಿನೋದ್ ಪ್ರಭಾಕರ್, ಉಪೇಂದ್ರ ಸೇರಿದಂತೆ ಅನೇಕರು ಕಾವೇರಿ ನೀರನ್ನು ತಮಿಳುನಾಡಿಗೆ ಬಿಟ್ಟಿರುವ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ನಟರಾದ ದುನಿಯಾ ವಿಜಯ್ ಮತ್ತು ನಿಖಿಲ್ ಕುಮಾರಸ್ವಾಮಿ ಕೂಡ ರೈತರಿಗೆ ಬೆಂಬಲ ಸೂಚಿಸಿದ್ದಾರೆ.
ತಾಯಿ ಬಿಟ್ಟು ಹೋದರೂ ಕಾವೇರಿ ಹೋಗಲ್ಲ: ಕಾವೇರಿ ಹೋರಾಟಕ್ಕೆ ಬೆಂಬಲಿಸಿ ಮಾತನಾಡಿದ ದುನಿಯಾ ವಿಜಯ್, "ಕಾವೇರಿ ನಮ್ಮದು. ಈಗಾಗಲೇ ಶಿವಣ್ಣ, ಸುದೀಪ್ ಸೇರಿದಂತೆ ಸಾಕಷ್ಟು ನಟರು ಕಾವೇರಿ ಬಗ್ಗೆ ಮಾತನಾಡಿದ್ದಾರೆ. ನಮ್ಮ ತಾಯಿ ನಮ್ಮನ್ನು ಬಿಟ್ಟು ಹೋಗಬಹುದು. ಆದರೆ, ಕಾವೇರಿ ತಾಯಿ ನಮ್ಮನ್ನು ಬಿಟ್ಟು ಹೋಗುವುದಿಲ್ಲ. ಕರ್ನಾಟಕದವರಿಗೆ ನೀರು ಇಲ್ಲದೇ, ಬೇರೆಯವರಿಗೆ ಹೇಗೆ ಕೊಡೋದು?. ಸಾಮಾನ್ಯ ನಾಗರಿಕ ನೀರಿಗಾಗಿ ಪರದಾಡಬಾರದು. ನೀರಿನ ವಿಚಾರದಲ್ಲಿ ರಾಜಕೀಯ ಮಾಡದೇ ಕೇಂದ್ರ ಸರ್ಕಾರ ಪ್ರತಿ ಬಾರಿ ಸಮಸ್ಯೆಗಳಿಗೆ ಪರಿಹಾರ ಕೊಡ್ತಾ ಬರ್ತಿದೆ. ಈ ಬಾರಿಯೂ ಕಾವೇರಿ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಬೇಕಿದೆ. ಕಾವೇರಿ ವಿಚಾರ ಬಂದಾಗ ಚಿತ್ರರಂಗದವರಾದ ನಾವೆಲ್ಲ ಒಂದೇ. ಆ ಒಗ್ಗಟ್ಟು ನಮ್ಮಲ್ಲಿ ಇರುತ್ತೆ" ಎಂದರು.
-
ಕಾವೇರಿ ಈ ನಾಡಿಗೆ ಬರೀ ನೀರಲ್ಲ ಈ ಮಣ್ಣಿನ ಆಳಕ್ಕಿಳಿದ ಜಲರೂಪದ ಬೇರು , ಪ್ರತಿಯೊಬ್ಬ ಕನ್ನಡಿಗನೂ ತಲೆಮೇಲೆ ಹೊತ್ತು ತಿರುಗೋ ದೈವರೂಪದ ತೇರು . ಇಷ್ಟು ದಿನ ಆಕಾಶಕ್ಕೆ ಮುಖ ಮಾಡಿ ನಿಂತಿದ್ದ ಅನ್ನದಾತ ಇಂದು ನ್ಯಾಯಾಲಯದ ಕಡೆ ಮುಖ ಮಾಡಿ ನಿಂತಿದ್ದಾನೆ . ಕಣ್ಣ ಮುಂದೆ ನೀರು ಹರಿದಂತೆ ಅವನ ಕಣ್ಣಿನಿಂದ ನೀರು ಹರಿಯುತ್ತದೆ . (1/2)
— Duniya Vijay (@OfficialViji) September 20, 2023 " class="align-text-top noRightClick twitterSection" data="
">ಕಾವೇರಿ ಈ ನಾಡಿಗೆ ಬರೀ ನೀರಲ್ಲ ಈ ಮಣ್ಣಿನ ಆಳಕ್ಕಿಳಿದ ಜಲರೂಪದ ಬೇರು , ಪ್ರತಿಯೊಬ್ಬ ಕನ್ನಡಿಗನೂ ತಲೆಮೇಲೆ ಹೊತ್ತು ತಿರುಗೋ ದೈವರೂಪದ ತೇರು . ಇಷ್ಟು ದಿನ ಆಕಾಶಕ್ಕೆ ಮುಖ ಮಾಡಿ ನಿಂತಿದ್ದ ಅನ್ನದಾತ ಇಂದು ನ್ಯಾಯಾಲಯದ ಕಡೆ ಮುಖ ಮಾಡಿ ನಿಂತಿದ್ದಾನೆ . ಕಣ್ಣ ಮುಂದೆ ನೀರು ಹರಿದಂತೆ ಅವನ ಕಣ್ಣಿನಿಂದ ನೀರು ಹರಿಯುತ್ತದೆ . (1/2)
— Duniya Vijay (@OfficialViji) September 20, 2023ಕಾವೇರಿ ಈ ನಾಡಿಗೆ ಬರೀ ನೀರಲ್ಲ ಈ ಮಣ್ಣಿನ ಆಳಕ್ಕಿಳಿದ ಜಲರೂಪದ ಬೇರು , ಪ್ರತಿಯೊಬ್ಬ ಕನ್ನಡಿಗನೂ ತಲೆಮೇಲೆ ಹೊತ್ತು ತಿರುಗೋ ದೈವರೂಪದ ತೇರು . ಇಷ್ಟು ದಿನ ಆಕಾಶಕ್ಕೆ ಮುಖ ಮಾಡಿ ನಿಂತಿದ್ದ ಅನ್ನದಾತ ಇಂದು ನ್ಯಾಯಾಲಯದ ಕಡೆ ಮುಖ ಮಾಡಿ ನಿಂತಿದ್ದಾನೆ . ಕಣ್ಣ ಮುಂದೆ ನೀರು ಹರಿದಂತೆ ಅವನ ಕಣ್ಣಿನಿಂದ ನೀರು ಹರಿಯುತ್ತದೆ . (1/2)
— Duniya Vijay (@OfficialViji) September 20, 2023
ಈ ಬಗ್ಗೆ ಎಕ್ಸ್ನಲ್ಲೂ ಬರೆದುಕೊಂಡಿರುವ ವಿಜಯ್, "ಕಾವೇರಿ ಈ ನಾಡಿಗೆ ಬರೀ ನೀರಲ್ಲ ಈ ಮಣ್ಣಿನ ಆಳಕ್ಕಿಳಿದ ಜಲರೂಪದ ಬೇರು. ಪ್ರತಿಯೊಬ್ಬ ಕನ್ನಡಿಗನೂ ತಲೆಮೇಲೆ ಹೊತ್ತು ತಿರುಗೋ ದೈವರೂಪದ ತೇರು. ಇಷ್ಟು ದಿನ ಆಕಾಶಕ್ಕೆ ಮುಖ ಮಾಡಿ ನಿಂತಿದ್ದ ಅನ್ನದಾತ ಇಂದು ನ್ಯಾಯಾಲಯದ ಕಡೆ ಮುಖ ಮಾಡಿ ನಿಂತಿದ್ದಾನೆ. ಕಣ್ಣ ಮುಂದೆ ನೀರು ಹರಿದಂತೆ ಅವನ ಕಣ್ಣಿನಿಂದ ನೀರು ಹರಿಯುತ್ತದೆ. ನ್ಯಾಯಕ್ಕಾಗಿ ಕೈಚಾಚುತ್ತಿಲ್ಲ ಒಕ್ಕೊರಲಿನಿಂದ ಕೈಮುಗಿಯುತ್ತಿದ್ದೇವೆ. ದಯಮಾಡಿ ಅನ್ನದಾತನಿಗೆ ನ್ಯಾಯ ಒದಗಿಸಿ" ಎಂದು ಕೇಳಿಕೊಂಡಿದ್ದಾರೆ.
ಕಾಂಗ್ರೆಸ್ ಕಪಟ ನಾಟಕ ಸಾಕು: ಸೋಷಿಯಲ್ ಮೀಡಿಯಾದ ಮೂಲಕ ಕಾವೇರಿ ನೀರು ಹಂಚಿಕೆ ವಿಚಾರವಾಗಿ ನಟ ನಿಖಿಲ್ ಕುಮಾರಸ್ವಾಮಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. "ಕಾವೇರಿ ಕನ್ನಡಿಗರ ಹಕ್ಕು. ಕಾವೇರಿ ಕನ್ನಡಿಗರ ಜೀವನಾಡಿ. ಈ ವಿಷಯದಲ್ಲಿ ಅನ್ಯಾಯ ಸಹಿಸುವುದಿಲ್ಲ ಹಾಗೂ ರಾಜಿ ಪ್ರಶ್ನೆಯೇ ಇಲ್ಲ. ರಾಜ್ಯದ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಆಡುತ್ತಿರುವ ಕಪಟ ನಾಟಕ ಸಾಕು. ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸುವ ಯಾವುದೇ ಕೃತ್ಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ರಾಜ್ಯದಲ್ಲಿ ನೀರಿನ ಕೊರತೆ ಇದೆ. ಮಳೆ ಕೈಕೊಟ್ಟಿದೆ. ಜಲಾಶಯಗಳು ಬರಿದಾಗಿವೆ. ಆದರೂ ತಮಿಳುನಾಡಿಗೆ ರಾಜ್ಯ ಸರ್ಕಾರ ನೀರು ಹರಿಸಿದ್ದು ಅಕ್ಷಮ್ಯ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಬ್ರಿಟಿಷರ ಕಾಲದಲ್ಲಿಯೇ ಶುರುವಾದ ಅನ್ಯಾಯದ ಪರಂಪರೆಯನ್ನು ನಮ್ಮ ರಾಜ್ಯ ಸರ್ಕಾರವೇ ಮುಂದುವರೆಸಿದೆ. ಸ್ವಾತಂತ್ರ್ಯ ನಂತರವೂ ಮುಂದುವರೆದಿದೆ. ಕಾಂಗ್ರೆಸ್ ಪಕ್ಷಕ್ಕೆ ಕಾವೇರಿ ಎನ್ನುವುದು ರಾಜಕೀಯ ಲಾಭದ ವಸ್ತುವಂತೆ ಆಗಿರುವುದು ನೋವಿನ ಸಂಗತಿ. ಕಾವೇರಿ ವಿಷಯದಲ್ಲಿ ಕನ್ನಡಿಗರ ನಿಲುವೇ ನನ್ನ ನಿಲುವು. ಆರೂವರೆ ಕೋಟಿ ಕನ್ನಡಿಗರ ದನಿಯೇ ನನ್ನ ದನಿ. ತಾಯಿ ಕಾವೇರಿಗಾಗಿ ಯಾವುದೇ ಹೋರಾಟಕ್ಕೆ ನಾವು ಸಿದ್ಧ ಇದ್ದೇವೆ" ಎಂದಿದ್ದಾರೆ.
ಇದನ್ನೂ ಓದಿ: ಕಾವೇರಿ ಹೋರಾಟಕ್ಕೆ ಸ್ಯಾಂಡಲ್ವುಡ್ ಬೆಂಬಲ: ಸುದೀಪ್, ದರ್ಶನ್, ಶಿವಣ್ಣ ಹೇಳಿದ್ದೇನು?