ETV Bharat / entertainment

ಮಾಫಿಯಾ ಸುತ್ತ ಕಥೆ ಹೇಳಲಿರುವ ಹೊಸಬರ‌ ಚಿತ್ರ 'ಈ ಪಟ್ಟಣಕ್ಕೆ ಏನಾಗಿದೆ'

author img

By

Published : Jul 24, 2023, 12:27 PM IST

ಟೀಸರ್​ ಮೂಲಕ ಐದು ಗ್ಯಾರಂಟಿಗಳನ್ನು ನೀಡಲು ಚಿತ್ರತಂಡ ಪ್ಲ್ಯಾನ್​ ಮಾಡಿಕೊಂಡಿದೆ.

Ee Pattanakke Yenagide
ಈ ಪಟ್ಟಣಕ್ಕೆ ಏನಾಗಿದೆ

ಸ್ಯಾಂಡಲ್​ವುಡ್​ನಲ್ಲಿ ಸಿನಿಮಾ ಗೆಲ್ಲುತ್ತೋ ಬಿಡುತ್ತೋ ಗೊತ್ತಿಲ್ಲ. ವಿಭಿನ್ನ ಕಥೆಗಳ ಮೂಲಕ ಹೊಸ ಟ್ಯಾಲೆಂಟ್‌ ಇರುವ ನಿರ್ದೇಶಕರು ಹಾಗೂ ಯುವ ನಟರು ಚಿತ್ರರಂಗಕ್ಕೆ ಎಂಟ್ರಿ‌ ಆಗ್ತಾನೆ‌ ಇರುತ್ತಾರೆ. ಕ್ಯಾಚೀ ಶೀರ್ಷಿಕೆಯನ್ನು ಹೊತ್ತು ಹೊಸ‌ತಂಡ ಗಾಂಧಿನಗರದಲ್ಲಿ ಅದೃಷ್ಟ ಪರೀಕ್ಷೆಗಳಿದಿದೆ. ಹೌದು, ನೀವು ಯಾವುದೇ ಚಿತ್ರಮಂದಿರಕ್ಕೆ ಹೋದರೂ, ಚಿತ್ರ ಪ್ರಾರಂಭಕ್ಕೂ ಮೊದಲು ಬರುವ ಜಾಹೀರಾತಿನಲ್ಲಿ ಕೇಳುವ ಪದವೇ "ಈ ಪಟ್ಟಣಕ್ಕೆ ಏನಾಗಿದೆ?". ಈಗ ಇದನ್ನೇ ಚಿತ್ರದ ಶೀರ್ಷಿಕೆಯಾಗಿಸಿದೆ ಚಿತ್ರತಂಡ.

ಶೀರ್ಷಿಕೆಯ ಮೂಲಕವೇ ಸಾಕಷ್ಟು ಕತೂಹಲ ಮೂಡಿಸಿರುವ ಈ ಚಿತ್ರ ರವಿತೇಜೊ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಿದೆ. ಚಿತ್ರೀಕರಣ ಮುಗಿದಿದ್ದು, ಬಿಡುಗಡೆಗೂ ಸಿದ್ಧವಾಗಿದೆ. ಸದ್ಯದಲ್ಲೇ ಚಿತ್ರದ ಟೀಸರ್ ಬಿಡುಗಡೆಯಾಗಲಿದ್ದು, ಟೀಸರ್ ಮೂಲಕ ಚಿತ್ರದ ಕುರಿತು ಐದು ಗ್ಯಾರೆಂಟಿಗಳನ್ನು ಪ್ರೇಕ್ಷಕರಿಗೆ ನೀಡುವುದಾಗಿ ನಿರ್ದೇಶಕ ರವಿ ಸುಬ್ಬರಾವ್ ತಿಳಿಸಿದ್ದಾರೆ.

Five Guarantee poster
ಐದು ಗ್ಯಾರೆಂಟಿ ಪೋಸ್ಟರ್​

ಪ್ಯಾನ್ ಇಂಡಿಯಾ ಚಿತ್ರವಾಗುವ ಎಲ್ಲ ಸಾಧ್ಯತೆಗಳನ್ನೊಳಗೊಂಡ ಯೂನಿವರ್ಸಲ್ ಅಂಶಗಳಿರುವ ಈ ಚಿತ್ರಕ್ಕೆ ರವಿ ಸುಬ್ಬರಾವ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಹಾಗೂ ನಿರ್ದೇಶನ ಮಾಡಿರುವುದಲ್ಲದೆ, ನಾಯಕನಾಗಿಯೂ ಅಭಿನಯಿಸಿದ್ದಾರೆ. ರಾಧಿಕಾ ರಾಮ್ ಈ ಚಿತ್ರದ ನಾಯಕಿ. ರಿತೇಶ್ ಜೋಶಿ, ಶ್ರೀನಿಧಿ, ಸತೀಶ್ ಶೆಟ್ಟಿ, ಸೋನಾ, ದಿಶಾ, ಸಂಧ್ಯಾ ವೇಣು, ಬಲರಾಮ್, ಸುಕನ್ಯಾ, ಗೋಪಾಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಈಗ ಜನರಿಗೆ ಗ್ಯಾರೆಂಟಿ ಹಾಗೂ ಭಾಗ್ಯಗಳ ಬಗ್ಗೆ ಹೆಚ್ಚು ಆಸಕ್ತಿ. ಪ್ರಸ್ತುತ ತಮ್ಮ ಸಿನಿಮಾ ಟೀಸರ್ ಮೂಲಕ ಐದು ಗ್ಯಾರೆಂಟಿಗಳನ್ನು ನೀಡಲಿದೆ "ಈ ಪಟ್ಟಣಕ್ಕೆ ಏನಾಗಿದೆ ?" ಚಿತ್ರತಂಡ. ಜೂಜು ಮತ್ತು ಬೆಟ್ಟಿಂಗ್ ಮಾಫಿಯಾದ ಸುತ್ತ ಹೆಣೆಯಲಾಗಿರುವ ಈ ಚಿತ್ರದಲ್ಲಿ ನಾಯಕ ತನ್ನ ವಿಲಾಸಿ ಜೀವನಕ್ಕಾಗಿ ಹೇಗೆ ಅನೇಕರನ್ನು ತನ್ನ ಮೋಸದ ಜಾಲಕ್ಕೆ ಬೀಳಿಸಿಕೊಂಡು ಉನ್ನತ ಸ್ಥಾನಕ್ಕೆ ಏರುತ್ತಾನೆ ಎನ್ನುವುದರೊಂದಿಗೆ ಕ್ರಿಕೆಟ್ ಬೆಟ್ಟಿಂಗ್ ಜಾಲವನ್ನು ಕೂಡ ಕುತೂಹಲ ಭರಿತವಾಗಿ ತೋರಿಸಲಾಗಿದೆ.

ರಿತೇಶ್ ಜೋಶಿ ಮತ್ತು ರವಿ ಸುಬ್ಬರಾವ್ ನಿರ್ಮಿಸಿರುವ ಈ ಚಿತ್ರಕ್ಕೆ ಅನಿಲ್ ಸಿ ಜೆ ಸಂಗೀತ ನೀಡಿದ್ದಾರೆ. ನೆಲ್ಸನ್ ಮೆಂಡಿಸ್ ಸಂಕಲನ ಹಾಗೂ ವಿನೋದ್ ಮತ್ತು ಶ್ರೀ ಕ್ರೇಜಿಮೈಂಡ್ಸ್ ಛಾಯಾಗ್ರಹಣ ಚಿತ್ರಕ್ಕಿದೆ. 'ಈ ಪಟ್ಟಣಕ್ಕೆ ಏನಾಗಿದೆ?' ಚಿತ್ರ ಎರಡು ಭಾಗಗಳಲ್ಲಿ ಬರುತ್ತಿದ್ದು, ಮೊದಲನೇ ಭಾಗ ತೆರೆಗೆ ಬರಲು ಸಿದ್ಧವಾಗಿದೆ.

ಇದನ್ನೂ ಓದಿ: ಸೆಟ್ಟೇರಿತು ನಂದ ಕಿಶೋರ್ ​- ಮೋಹನ್​ಲಾಲ್​ 'ವೃಷಭ' ಸಿನಿಮಾ.. 2024ರ ಬಿಗ್​ ಬಜೆಟ್​ ಚಿತ್ರವಿದು..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.