ETV Bharat / entertainment

ಮರಿ ಟೈಗರ್ ನೋಡಿ 'ಐ ವಾನ್ನ ಫಾಲೋ ಯು' ಅಂತಿದ್ದಾರೆ ನಟಿ ಲೇಖಾಚಂದ್ರ - Fighter Film I Wanna follow you song release

ಕವಿರಾಜ್​ ಸಾಹಿತ್ಯವಿರುವ ಹಾಡಿಗೆ ಗುರುಕಿರಣ್ ಸಂಗೀತ ಸಂಯೋಜಿಸಿದ್ದು, ಚೈತ್ರಾ ಅವರು ಸಖತ್​ ಆಗಿ ಹಾಡಿದ್ದಾರೆ.

Fighter Cinema Team
ಫೈಟರ್​ ಸಿನಿಮಾ ತಂಡ
author img

By ETV Bharat Karnataka Team

Published : Sep 16, 2023, 9:08 AM IST

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಚಿತ್ರಗಳಿಂದ ಮರಿ ಟೈಗರ್ ಆಗಿ ತನ್ನದೇ ಸ್ಟಾರ್ ಡಮ್ ಹೊಂದಿರುವ ನಟ ವಿನೋದ್ ಪ್ರಭಾಕರ್. ಸದ್ಯ ಫೈಟರ್ ಸಿನಿಮಾ ರಿಲೀಸ್ ಖುಷಿಯಲ್ಲಿರೋ ಮರಿ ಟೈಗರ್ ರೊಮ್ಯಾಂಟಿಕ್ ಮೂಡ್​ನಲ್ಲಿದ್ದಾರೆ‌. ನಿರ್ದೇಶಕ ಉಮೇಶ್ ಆಕ್ಷನ್​ ಕಟ್​ ಹೇಳಿರುವ ಫೈಟರ್ ಚಿತ್ರಕ್ಕಾಗಿ ಸಾಹಿತಿ ಕವಿರಾಜ್ ಅವರು ಬರೆದಿರುವ "ಐ ವಾನ್ನ ಫಾಲೋ ಯು" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಗುರುಕಿರಣ್ ಸಂಗೀತ ನೀಡಿರುವ ಈ ಹಾಡನ್ನು ಚೈತ್ರ ಹೆಚ್ ಜಿ ಹಾಡಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಸೌತ್ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುರುರಂಜನ್ ಶೆಟ್ಟಿ ಈ ಚಿತ್ರದ ಹಾಡನ್ನು ಬಿಡುಗಡೆ ಮಾಡಿ ಈ ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣಲಿ ಎಂದು ಹಾರೈಯಿಸಿದರು.

Fighter Cinema Team
ಫೈಟರ್​ ಸಿನಿಮಾ ತಂಡ

ಚಿತ್ರದ ಮುಹೂರ್ತಕ್ಕೆ ಬಂದು ಹಾರೈಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನೆನಪಿಸಿಕೊಂಡು ಮಾತು ಆರಂಭಿಸಿದ ನಾಯಕ ವಿನೋದ್ ಪ್ರಭಾಕರ್, ಅನ್ಯಾಯದ ವಿರುದ್ಧ ಹಾಗೂ ರೈತರ ಪರವಾಗಿ ಹೋರಾಡುವ "ಫೈಟರ್" ಈ ಸಿನಿಮಾ. ನಿರ್ಮಾಪಕ ಸೋಮಶೇಖರ್ ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕರು ಅಷ್ಟೇ ಚೆನ್ನಾಗಿ ಕಥೆ, ಚಿತ್ರಕಥೆ ಬರೆದಿದ್ದಾರೆ. ಇಂದು ಬಿಡುಗಡೆಯಾದ ಹಾಡಿನ ಚಿತ್ರೀಕರಣ ಮಾರ್ಚ್​ನಲ್ಲಿ ಪಾಂಡಿಚೇರಿಯಲ್ಲಿ ಆಗಿದ್ದು, ಅಲ್ಲಿನ ಬಿಸಿಲು ತಡೆಯುವುದೇ ಕಷ್ಟ. ಆದರೆ, ಎಲ್ಲರ ಶ್ರಮದಿಂದ ಈ ಹಾಡು ಚೆನ್ನಾಗಿ ಬಂದಿದೆ. ನಿರ್ಮಾಪಕ ಸೋಮಶೇಖರ್ ಅವರಿಗೆ ಈ ಚಿತ್ರ ದೊಡ್ಡ ಯಶಸ್ಸು ತಂದು ಕೊಡಲಿ. ಅವರಿಂದ ಸಾಕಷ್ಟು ಚಿತ್ರಗಳು ನಿರ್ಮಾಣವಾಗಲಿ ಎಂದು ಹಾರೈಸಿದರು.

Fighter Cinema Team
ಫೈಟರ್​ ಸಿನಿಮಾ ತಂಡ

ಇನ್ನು ಸಂಗೀತ ನಿರ್ದೇಶಕ ಗುರುಕಿರಣ್ ಮಾತನಾಡಿ, ಈ ಹಾಡಿನ ಮೊದಲ ಪದ "ಐ ವಾನ್ನ ಫಾಲೋ" ಎಂಬುದನ್ನು ನಿರ್ದೇಶಕರು ಹೇಳಿದಾಗ "ಫಾಲೋ" ಎಂಬ ಪದದಿಂದಲೇ ಈ ಹಾಡು ಆರಂಭವಾಯಿತು. ವಿಶೇಷವೆಂದರೆ, ಈ ಹಾಡಿನಲ್ಲಿ ಬರುವ ಪದಗಳಿಗೆ ಎರಡು ಅರ್ಥಗಳಿದೆ. ಕವಿರಾಜ್ ಅದ್ಭುತವಾಗಿ ಹಾಡು ಬರೆದಿದ್ದಾರೆ. ಚೈತ್ರ ಸೊಗಸಾಗಿ ಹಾಡಿದ್ದಾರೆ ಎಂದು ಗುರುಕಿರಣ್ ಮೆಚ್ಚುಗೆ ವ್ಯಕ್ತಪಡಿಸಿದರು.

Fighter Cinema Team
ಫೈಟರ್​ ಸಿನಿಮಾ ತಂಡ

ಇನ್ನು ಫೈಟರ್ ಚಿತ್ರದ ನಿರ್ದೇಶಕ ನೂತನ್ ಉಮೇಶ್ ಮಾತನಾಡಿ, ಈ ಹಾಡನ್ನು ಪಾಂಡಿಚೇರಿಯಲ್ಲಿ ಚಿತ್ರಿಸಲಾಗಿದೆ. ಗುರುಕಿರಣ್ ಅವರ ಸಂಗೀತ, ಕವಿರಾಜ್ ಅವರ ಸಾಹಿತ್ಯ, ಮೋಹನ್ ನೃತ್ಯ ನಿರ್ದೇಶನ ಹಾಗೂ ವಿನೋದ್ ಪ್ರಭಾಕರ್, ಲೇಖಾ ಚಂದ್ರ ಅವರ ಅಭಿನಯ ಎಲ್ಲವೂ ಸೇರಿ ಈ "ಐ ವಾನ್ನ ಫಾಲೋ ಯು" ಹಾಡು ಅದ್ಭುತವಾಗಿ ಹಾಗೂ ಅದ್ಧೂರಿಯಾಗಿ ಮೂಡಿ ಬಂದಿದೆ ಸದ್ಯದಲ್ಲೇ ಟ್ರೇಲರ್ ಬರಲಿದೆ‌ ಎಂದರು‌.

ಫೈಟರ್ ಚಿತ್ರದ ನಿರ್ಮಾಪಕ ಸೋಮಶೇಖರ್ ಕಟ್ಟಿಗೇನಹಳ್ಳಿ ಮಾತನಾಡಿ, ಇಡೀ ಚಿತ್ರತಂಡದ ಶ್ರಮದಿಂದ "ಫೈಟರ್" ಚಿತ್ರ ಉತ್ತಮವಾಗಿ ಮೂಡಿ ಬಂದಿದೆ ಎಂದರು. ಈ ಸಂದರ್ಭದಲ್ಲಿ ಗೀತ ರಚನೆಕಾರ ಕವಿರಾಜ್, ಗಾಯಕಿ ಚೈತ್ರ ಹಾಗೂ ನಾಯಕಿ ಲೇಖಾ ಚಂದ್ರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬಹುತೇಕ ಚಿತ್ರೀಕರಣ ಮುಗಿಸಿರುವ ಫೈಟರ್ ಸಿನಿಮಾವನ್ನು ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ. ಸದ್ಯ ಫೈಟರ್ ಆಗಿ ವಿನೋದ್ ಪ್ರಭಾಕರ್ ಸಿನಿಮಾ ಪ್ರೇಕ್ಷಕರನ್ನು ಎಷ್ಟರ ಮಟ್ಟಿಗೆ ರಂಜಿಸುತ್ತಾರೆ ಎನ್ನುವುದು ಮುಂದಿನ ತಿಂಗಳು ಗೊತ್ತಾಗಲಿದೆ.

ಇದನ್ನೂ ಓದಿ: ಬ್ಲಾಕ್​ಬಸ್ಟರ್​ 'ಕೌಸಲ್ಯಾ ಸುಪ್ರಜಾ ರಾಮ' ನೋಡಿಲ್ವಾ? ಹಾಗಿದ್ರೆ ಈ OTTಯಲ್ಲಿ ವೀಕ್ಷಿಸಿ​

https://youtu.be/eT4Q4c__zUM?si=Aij6-rrgUFmU7qbx

ETV Bharat Logo

Copyright © 2025 Ushodaya Enterprises Pvt. Ltd., All Rights Reserved.