ETV Bharat / entertainment

ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್​​ ಹೆಸರು ಇಡುವಂತೆ ಫಿಲ್ಮ್ ಚೇಂಬರ್​ನಿಂದ ಬಿಬಿಎಂಪಿಗೆ ಮನವಿ - ಈಟಿವಿ ಭಾರತ್ ಕನ್ನಡ ಸುದ್ದಿ

ಕನ್ನಡ ಚಿತ್ರರಂಗದಲ್ಲಿ ಅಪಾರ ಕೊಡುಗೆ ಸಲ್ಲಿಸಿರುವ ರೆಬೆಲ್ ಸ್ಟಾರ್ ಡಾ ಅಂಬರೀಶ್ ಅವರಿಗೆ, ರಾಂ ನಾರಾಯಣ ಚಲರಾಮ್ ಕಾಲೇಜ್‌ನಿಂದ ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದ ರಸ್ತೆವರೆಗೆ ನಾಮಕರಣ ಮಾಡಬೇಕು ಎಂದು ಚಿತ್ರೋದ್ಯಮದವರೆಲ್ಲರ ಒತ್ತಾಸೆ.

ರೆಬೆಲ್ ಸ್ಟಾರ್ ಡಾ ಅಂಬರೀಶ್
ರೆಬೆಲ್ ಸ್ಟಾರ್ ಡಾ ಅಂಬರೀಶ್
author img

By

Published : Jan 12, 2023, 5:18 PM IST

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಒರಟು ಮಾತಿನಿಂದಲೇ ಅಭಿಮಾನಿಗಳಿಗೆ ಇಷ್ಟ ಆಗುತ್ತಿದ್ದ ನಟ ಅಂದರೆ ಅದು ರೆಬಲ್ ಸ್ಟಾರ್ ಅಂಬರೀಶ್​. ಚಿತ್ರರಂಗದ ಹಿರಿಯಣ್ಣನಾಗಿ ಕನ್ನಡ ಚಿತ್ರರಂಗದ ಯಜಮಾನನಾಗಿದ್ದ ಅಂಬರೀಶ್​ ಇಂದು ನಮ್ಮೊಂದಿಗೆ ಇಲ್ಲ. ಆದರೆ, ಅಂಬರೀಶ್​ ಮಾಡಿರೋ ಆ ಒಳ್ಳೆ ಕೆಲಸಗಳು ಹಾಗೂ ಸಿನಿಮಾಗಳ ಮೂಲಕ ನೆನಪಾಗುತ್ತಾರೆ. ಇದೀಗ ಅಂಬರೀಶ್ ಅವರ ಹೆಸರನ್ನು ರೇಸ್ ಕೋರ್ಸ್ ರಸ್ತೆಗೆ ನಾಮಕರಣ ಮಾಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಮನವಿ ಮಾಡಿದೆ.

ರೇಸ್ ಕೋರ್ಸ್ ರಸ್ತೆಗೆ ಅಂಬರೀಷ್ ಹೆಸರು ಇಡುವಂತೆ ಫಿಲ್ಮ್ ಚೇಂಬರ್​ನಿಂದ ಬಿಬಿಎಂಪಿಗೆ ಮನವಿ
ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್​ ಹೆಸರು ಇಡುವಂತೆ ಫಿಲ್ಮ್ ಚೇಂಬರ್​ನಿಂದ ಬಿಬಿಎಂಪಿಗೆ ಮನವಿ

ಈ ಕುರಿತು ಬಿಬಿಎಂಪಿ ಆಯುಕ್ತ ತುಷಾರ್​ ಗಿರಿನಾಥ್ ಅವರನ್ನು ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ. ಮಾ ಹರೀಶ್ ಹಾಗೂ ಫಿಲ್ಮ್ ಚೇಂಬರ್ ಪದಾಧಿಕಾರಿಗಳು ಇಂದು ಭೇಟಿ ಮಾಡಿ ಮನವಿ ಪತ್ರವನ್ನು ನೀಡಿದರು. ಕನ್ನಡ ಚಿತ್ರರಂಗದಲ್ಲಿ ಅಪಾರ ಕೊಡುಗೆ ನೀಡಿರುವ ರೆಬೆಲ್ ಸ್ಟಾರ್ ಡಾ. ಅಂಬರೀಶ್ ಅವರಿಗೆ, ರಾಂ ನಾರಾಯಣ ಚಲರಾಮ್ ಕಾಲೇಜ್‌ನಿಂದ ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದ ರಸ್ತೆವರೆಗೆ ನಾಮಕರಣ ಮಾಡಬೇಕುಬ ಎಂಬುದು ಚಿತ್ರೋದ್ಯಮದವರೆಲ್ಲರ ಒತ್ತಾಸೆಯಾಗಿದೆ.

ಬಿಬಿಎಂಪಿ ಆಯುಕ್ತರಿಗೆ ಭಾ ಮಾ ಹರೀಶ್​ ಮನವಿ.. ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ಅಪಾರ ಕೊಡುಗೆ ನೀಡಿರುವ ಸಾಧಕರುಗಳಾದ ಪದ್ಮಭೂಷಣ ಡಾ. ರಾಜ್‌ಕುಮಾರ್, ಶ್ರೀಮತಿ ಪಾರ್ವತಮ್ಮ ರಾಜ್‌ ಕುಮಾರ್, ಸಾಹಸಸಿಂಹ ಡಾ. ವಿಷ್ಣುವರ್ಧನ್ ಮತ್ತು ಪವರ್ ಸ್ಟಾರ್ ಶ್ರೀ. ಪುನೀತ್ ರಾಜ್‌ಕುಮಾರ್, ಇವರುಗಳ ಜ್ಞಾಪಕಾರ್ಥವಾಗಿ ಬಿಬಿಎಂಪಿ ವ್ಯಾಪ್ತಿಯ ಪ್ರಮುಖ ರಸ್ತೆಗಳಿಗೆ ಅವರ ಹೆಸರನ್ನು ಘನ ಸರ್ಕಾರವು ಈಗಾಗಲೇ ನಾಮಕರಣ ಮಾಡಿರುವುದು ಇಡೀ ಚಿತ್ರೋದ್ಯಮಕ್ಕೆ ಹೆಮ್ಮೆಯ ವಿಚಾರವಾಗಿದೆ. ಈಗ ಅಂಬರೀಶ್​ ಹೆಸರು ಇಡುವಂತೆ ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ ಮಾ ಹರೀಶ್ ಬಿಬಿಎಂಪಿ ಆಯುಕ್ತರಿಗೆ ಮನವಿ ಮಾಡಿದ್ದಾರೆ.

ಇನ್ನು ರೆಬಲ್ ಸ್ಟಾರ್ ಅಂಬರೀಶ್ ಚಲನಚಿತ್ರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅಂಬರೀಶ್‌ ಹೆಸರನ್ನು ಪರಿಗಣಿಸಿ, ರಾಂ ನಾರಾಯಣ ಚಲರಾಮ್ ಕಾಲೇಜ್‌ನಿಂದ ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದ ರಸ್ತೆವರೆಗೆ ನಾಮಕರಣ ಮಾಡಬೇಕು ಎಂಬುದು ಚಲನಚಿತ್ರೋದ್ಯಮದವರೆಲ್ಲರ ಮಹದಾಸೆಯಾಗಿದೆ. ಆದ್ದರಿಂದ ತಾವು ದಯಮಾಡಿ ಚಿತ್ರೋದ್ಯಮದೊಂದಿಗೆ ಕೈಜೋಡಿಸುವ ಮೂಲಕ ಸಹಕರಿಸಬೇಕಾಗಿ ತಮ್ಮಲ್ಲಿ ನಮ್ಮ ಸವಿನಯ ಪ್ರಾರ್ಥನೆ ಮಾಡಲಾಗಿದೆ.

ಮುಖ್ಯಮಂತ್ರಿಗಳಿಗೂ ಮನವಿ ಪತ್ರ.. ಈಗಾಗಲೇ ಸನ್ಮಾನ್ಯ ಮುಖ್ಯಮಂತ್ರಿಗಳಿಗೂ ಮನವಿ ಪತ್ರ ಸಲ್ಲಿಸಲಾಗಿದೆ ಎಂಬ ವಿಷಯವನ್ನು ಫಿಲ್ಮ್ ಚೇಂಬರ್ ಅಧ್ಯಕ್ಷರಾದ ಭಾ ಮಾ ಹರೀಶ್ ಆಯುಕ್ತರ ಬಳಿ ತಿಳಿಸಿದ್ದಾರೆ. ಸದ್ಯ ಕನ್ನಡ ಫಿಲ್ಮ್ ಚೇಂಬರ್ ಕೊಟ್ಟಿರುವ ಮನವಿ ಪತ್ರಕ್ಕೆ ಸ್ಪಂದಿಸಿದ್ದು, ಸದ್ಯದಲ್ಲೇ ರೇಸ್ ಕೋರ್ಸ್ ರಸ್ತೆಗೆ ಅಂಬರೀಷ್ ಹೆಸರು ಇಡುವ ಬಗ್ಗೆ ಭರವಸೆ ನೀಡಿದ್ದಾರೆ.

ವೈರಂ ಸಿನಿಮಾ‌ದಲ್ಲಿ ಪ್ರಣಾಮ್ ದೇವರಾಜ್: ಕುಮಾರಿ 21 ಸಿನಿಮಾ ಮೂಲಕ ಬೆಳ್ಳಿತೆರೆಯಲ್ಲಿ ಮಿಂಚಿರುವ ಪ್ರಣಾಮ್ ದೇವರಾಜ್ ವೈರಂ ಸಿನಿಮಾ‌ ಮೂಲಕ ಮತ್ತೆ ಬೆಳ್ಳಿ ತೆರೆಯತ್ತ ದಾಪುಗಾಲಿಟ್ಟಿದ್ದಾರೆ. ಪ್ರಣಾಮ್ ದೇವರಾಜ್ ಕನ್ನಡದ ಹಿರಿಯ ನಟ ದೇವರಾಜ್ ಅವರ ಕಿರಿಯ ಮಗ. ಅಪ್ಪ ಮತ್ತು ಅಣ್ಣನಂತೆ ಸಿನಿಮಾ ರಂಗದಲ್ಲಿ ಗುರುತಿಸಿಕೊಳ್ಳಬೇಕು ಎಂದು ಪಣ ತೊಟ್ಟು ನಿಂತಿದ್ದಾರೆ. ಈಗಾಗಲೇ ಕುಮಾರಿ 21 ಸಿನಿಮಾ ಮೂಲಕ ಬೆಳ್ಳಿ ತೆರೆಯಲ್ಲಿ ಮಿಂಚಿರುವ ಪ್ರಣಾಮ್ ದೇವರಾಜ್ ನಾಲ್ಕು ವರ್ಷಗಳ ಬಳಿಕ ಮತ್ತೆ ಸಿಲ್ವರ್ ಸ್ಕ್ರೀನ್​ನಲ್ಲಿ ಮಿಂಚಲು ರೆಡಿಯಾಗಿದ್ದಾರೆ.

ಓದಿ: 'ವೈರಂ' ಸಿನಿಮಾ‌ ಮೂಲಕ ಮತ್ತೆ ಅದೃಷ್ಟ ಪರೀಕ್ಷೆಗಿಳಿದ ಪ್ರಣಾಮ್ ದೇವರಾಜ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.