ETV Bharat / entertainment

ನ್ಯಾಯಾಂಗ ನಿಂದನೆ ಪ್ರಕರಣ: ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಕ್ಷಮೆಯಾಚನೆ

author img

By

Published : Dec 6, 2022, 4:31 PM IST

ಭೀಮಾ ಕೊರೆಂಗಾವ್‌ ಹಿಂಸಾಚಾರ ಪ್ರಕರಣದಲ್ಲಿ, ಸಾಮಾಜಿಕ ಹೋರಾಟಗಾರ ಗೌತಮ್‌ ನವಲಖ ಅವರಿಗೆ ಜಾಮೀನು ನೀಡಿದ್ದ ಅಂದಿನ ನ್ಯಾಯಮೂರ್ತಿ ಎಸ್‌. ಮುರಳೀಧರ್‌ ಅವರನ್ನು ಟೀಕಿಸಿದ್ದ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಇಂದು ದೆಹಲಿ ಹೈಕೋರ್ಟ್‌ನಲ್ಲಿ ಕ್ಷಮೆಯಾಚಿಸಿದ್ದಾರೆ.

Filmmaker Vivek Agnihotri apologizes to Delhi HC
ನ್ಯಾಯಾಂಗ ನಿಂದನೆ ಪ್ರಕರಣ: ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಕ್ಷಮೆಯಾಚನೆ

ನವದೆಹಲಿ: ನ್ಯಾಯಮೂರ್ತಿ ಅವರನ್ನು ನಿಂದಿಸಿದ ಪ್ರಕರಣದಲ್ಲಿ ಚಲನಚಿತ್ರ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಮಂಗಳವಾರ ದೆಹಲಿ ಹೈಕೋರ್ಟ್‌ನಲ್ಲಿ ಕ್ಷಮೆಯಾಚಿಸಿದ್ದಾರೆ.

ಭೀಮಾ ಕೊರೆಂಗಾವ್‌ ಹಿಂಸಾಚಾರ ಪ್ರಕರಣದಲ್ಲಿ, ಸಾಮಾಜಿಕ ಹೋರಾಟಗಾರ ಗೌತಮ್‌ ನವಲಖ ಅವರಿಗೆ ಜಾಮೀನು ನೀಡಿದ್ದ ಅಂದಿನ ನ್ಯಾಯಮೂರ್ತಿ ಎಸ್‌. ಮುರಳೀಧರ್‌ ಅವರ ನಿರ್ಧಾರ ಪಕ್ಷಪಾತದಿಂದ ಕೂಡಿದೆ ಎಂದು ಅಗ್ನಿಹೋತ್ರಿ ಟ್ವೀಟ್ ಮಾಡಿದ್ದರು.

ಭೀಮಾ ಕೊರೆಂಗಾವ್‌ ಹಿಂಸಾಚಾರ ಪ್ರಕರಣದಲ್ಲಿ, ಸಾಮಾಜಿಕ ಹೋರಾಟಗಾರ ಗೌತಮ್‌ ನವಲಖ ಅವರಿಗೆ ಜಾಮೀನು ನೀಡಿದ ಅಂದಿನ ನ್ಯಾಯಮೂರ್ತಿಗಳಾದ ಎಸ್‌ . ಮುರಳೀಧರ್‌ ಅವರ ನಿರ್ಧಾರ ಪಕ್ಷಪಾತದಿಂದ ಕೂಡಿದೆ ಎಂದು ಅಗ್ನಿಹೋತ್ರಿ ಟ್ವೀಟ್ ಮಾಡಿದ್ದರು. ನ್ಯಾಯಮೂರ್ತಿ ಎಸ್ ಮುರಳೀಧರ್ ಅವರ ಬಗ್ಗೆ 2018ರಲ್ಲಿ ಪೋಸ್ಟ್ ಮಾಡಿದ ಟ್ವೀಟ್‌ಗಳಿಗೆ ಈಗ ಬೇಷರತ್ ಕ್ಷಮೆಯಾಚಿಸಿದ್ದಾರೆ.

ಇಂದು ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮೃದುಲ್ ಮತ್ತು ತಲ್ವಂತ್ ಸಿಂಗ್ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಕ್ಷಮೆಯಾಚನೆ ಸಲ್ಲಿಸಲಾಯಿತು. ಮಾರ್ಚ್ 16, 2023 ರಂದು ನಡೆಯುವ ಮುಂದಿನ ವಿಚಾರಣೆಯಲ್ಲಿ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಪೀಠವು ಅಗ್ನಿಹೋತ್ರಿಯವರಿಗೆ ಆದೇಶ ನೀಡಿದೆ.

ಇದನ್ನೂ ಓದಿ: 'ಪಠಾಣ್' ಪೋಸ್ಟರ್ ರಿಲೀಸ್.. ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.