ETV Bharat / entertainment

ರಾಜಾಹುಲಿ ಸಿನಿಮಾ ಖ್ಯಾತಿಯ ಮೇಘನಾ ರಾಜ್​​​​​ಗೆ ಪ್ರತಿಷ್ಠಿತ FOG HERO ಪ್ರಶಸ್ತಿ! - FOG HERO ಅವಾರ್ಡ್

ಆಶಾ ಪರೇಕ್, ಅಮಿತಾಬ್ ಬಚ್ಚನ್, ದೇವಾನಂದ್, ವಿನೋದ್ ಖನ್ನಾ, ಧರ್ಮೇಂದ್ರ ಮುಂತಾದ ಸಿನಿರಂಗದ ಗಣ್ಯರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

FOG HERO Award for Meghana Raj
ರಾಜಾಹುಲಿ ಸಿನಿಮಾ ಖ್ಯಾತಿಯ ಮೇಘನಾ ರಾಜ್ ಗೆ ಪ್ರತಿಷ್ಠಿತ FOG HERO ಪ್ರಶಸ್ತಿ!
author img

By

Published : Aug 1, 2022, 10:30 AM IST

ಕನ್ನಡ, ತೆಲುಗು, ತಮಿಳು ಹಾಗು ಮಲೆಯಾಳಂ ಚಿತ್ರಗಳ ಮೂಲಕ ತಮ್ಮದೇ ಬೇಡಿಕೆ ಹೊಂದಿರುವ ನಟಿ, ರಾಜಾಹುಲಿ ಖ್ಯಾತಿಯ ಮೇಘನಾ ರಾಜ್ ಅವರಿಗೆ ಈ ಬಾರಿಯ ಪ್ರತಿಷ್ಠಿತ FOG HERO ಅವಾರ್ಡ್ ದೊರಕಿದೆ.

ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ "ಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾರ್ತೆನ್ ಕ್ಯಾಲಿಫೋರ್ನಿಯಾ" ಇವರು ಆಯೋಜಿಸುವ "ಫೆಸ್ಟಿವಲ್ ಆಫ್ ಗ್ಲೋಬ್"(FOG) ಸಮಾರಂಭ ಕಳೆದ ನಲವತ್ತು ವರ್ಷಗಳಿಂದ ಅದ್ದೂರಿಯಾಗಿ ನಡೆದುಕೊಂಡು ಬರುತ್ತಿದೆ. ಈ ಬಾರಿ ಆಗಸ್ಟ್‌ 19, 20 ಹಾಗೂ 21 ರಂದು ಈ ಸಮಾರಂಭ ನಡೆಯಲಿದೆ.

ಮೂರು ದಿನಗಳ ಕಾಲ ನಡೆಯುವ ಈ ಸಮಾರಂಭಕ್ಕೆ ಅಲ್ಲಿ ನೆಲೆಸಿರುವ ಭಾರತೀಯರು, ಸ್ಥಳೀಯರು ಸೇರಿದಂತೆ ಲಕ್ಷಕ್ಕೂ ಅಧಿಕ ಜನ‌ರು ಬರುವ ನಿರೀಕ್ಷೆಯಿದೆ. ಅಲ್ಲಿನ ರಾಜಕೀಯ ಪ್ರಮುಖರು, ಗಣ್ಯರು ಸಹ ಸಮಾರಂಭಕ್ಕೆ ಆಗಮಿಸುತ್ತಾರೆ. ಪ್ರತಿವರ್ಷ ಭಾರತದ ಸ್ವಾತಂತ್ರ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸುವ ಸಲುವಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಆಗಸ್ಟ್ 15ರ ಆಸುಪಾಸಿನ ದಿನಗಳಲ್ಲಿ ಈ ಹಬ್ಬ ಸಡಗರದಿಂದ ನಡೆಯಲಿದೆ.

ಪ್ರತಿವರ್ಷ ಈ ಸಂದರ್ಭದಲ್ಲಿ ಭಾರತದಲ್ಲಿ ಸಾಧನೆ ಮಾಡಿರುವ ಗಣ್ಯರೊಬ್ಬರಿಗೆ "FOG HERO" ಅವಾರ್ಡ್" ನೀಡಲಾಗುತ್ತದೆ. ಹೆಚ್ಚಾಗಿ ಚಿತ್ರರಂಗದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಆಶಾ ಪರೇಕ್, ಅಮಿತಾಬ್ ಬಚ್ಚನ್, ದೇವಾನಂದ್, ವಿನೋದ್ ಖನ್ನಾ, ಧರ್ಮೇಂದ್ರ ಮುಂತಾದ ಸಿನಿರಂಗದ ಗಣ್ಯರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಈ ಬಾರಿ ದಕ್ಷಿಣ ಭಾರತದ ಖ್ಯಾತ ನಟಿ ಮೇಘನರಾಜ್ "F0G HERO" ಅವಾರ್ಡ್​ಗೆ ಭಾಜನರಾಗಿದ್ದಾರೆ ಎಂದು ಕಾರ್ಯಕ್ರಮದ ಬಗ್ಗೆ ಹಾಗೂ ಪ್ರಶಸ್ತಿ ಪ್ರದಾನದ ಕುರಿತು ಸಂಸ್ಥೆಯ ಕ್ರಿಸ್ ಮೂರ್ತಿ ಮಾಹಿತಿ ನೀಡಿದರು. ಬಳಿಕ ಮಾತನಾಡಿದ ನಟಿ ಮೇಘನಾ ರಾಜ್, ಅಮಿತಾಭ್‌ ಬಚ್ಚನ್‌, ಧರ್ಮೇಂದ್ರ ಮುಂತಾದ ಗಣ್ಯರು ಪಡೆದಿರುವ ಈ ಪ್ರತಿಷ್ಠಿತ ಪ್ರಶಸ್ತಿಗೆ ನಾನು ಭಾಜನಳಾಗಿರುವುದಕ್ಕೆ ತುಂಬಾ ಸಂತೋಷವಾಗಿದೆ. ಅಂತಹ ಮಹಾನ್ ನಟರಿಗೆ ಸಂದಿರುವ ಪ್ರಶಸ್ತಿಗೆ ಈ ಬಾರಿ ನಾನು ಆಯ್ಕೆಯಾಗಿರುವುದು ನನ್ನ ಪುಣ್ಯ. ನನ್ನ ತಂದೆಯ ಮೂಲಕ ಈ ವಿಷಯ ನನಗೆ ತಿಳಿಯಿತು.

ಆಗಸ್ಟ್ 21ರಂದು ನಡೆಯುವ ಅದ್ದೂರಿ ಸಮಾರಂಭದಲ್ಲಿ ಈ ಪ್ರಶಸ್ತಿ ಸ್ವೀಕರಿಸಲಿದ್ದೇನೆ. ಕನ್ನಡ ಚಿತ್ರರಂಗ ಈಗ ಇಡೀ ವಿಶ್ವದಾದ್ಯಂತ ಜನಪ್ರಿಯ. ಕನ್ನಡಿಗಳಾಗಿ ಈ ಪ್ರಶಸ್ತಿ ಸ್ವೀಕರಿಸುತ್ತಿರುವುದು ನನಗೆ ಖುಷಿಯಿದೆ ಎಂದರು. ಕಳೆದ ಎರಡು ವರ್ಷಗಳಿಂದ ಕೊರೊನಾ ಇದ್ದ ಕಾರಣ ಈ ಕಾರ್ಯಕ್ರಮ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಈ ಬಾರಿ ಅದ್ದೂರಿಯಾಗಿ ಈ ಪ್ರಶಸ್ತಿ ಹಬ್ಬವನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ: 'ನಿಕಿತಾ ರಾಯ್ ದಿ ಬುಕ್ ಆಫ್ ಡಾರ್ಕ್​ನೆಸ್' ಚಿತ್ರೀಕರಣ ಶೀಘ್ರದಲ್ಲೇ ಪ್ರಾರಂಭ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.