ETV Bharat / entertainment

'ಗರುಡ ಪುರಾಣ' ಚಿತ್ರದ ಟೀಸರ್ ಅನಾವರಣಗೊಳಿಸಿದ ಅಶ್ವಿನಿ ಪುನೀತ್ ರಾಜ್​​​ಕುಮಾರ್ - Garuda Purana movie

Garuda Purana Teaser: 'ಗರುಡ ಪುರಾಣ' ಚಿತ್ರದ ಟೀಸರ್​ ಅನಾವರಣಗೊಂಡಿದೆ.

Garuda Purana Teaser Unveiled
ಗರುಡ ಪುರಾಣ ಟೀಸರ್ ಅನಾವರಣ
author img

By ETV Bharat Karnataka Team

Published : Sep 26, 2023, 4:12 PM IST

ಒಂದೊಳ್ಳೆ ಕಂಟೆಂಟ್ ಜೊತೆಗೆ ಟ್ಯಾಲೆಂಟ್ ಇರುವ ನಿರ್ದೇಶಕರು, ಯುವ ನಟರು ಸ್ಯಾಂಡಲ್​ವುಡ್​​ಗೆ ಎಂಟ್ರಿ ಕೊಡ್ತಾನೆ ಇದ್ದಾರೆ. ಇದೀಗ ಕಾಂತಾರ ಸಿನಿಮಾದಲ್ಲಿ ಆನ್ ಲೈನ್ ಎಡಿಟರ್ ಆಗಿ ಕೆಲಸ ಮಾಡಿದ್ದ ಮಂಜುನಾಥ್ ಬಿ ನಾಗಬಾ ಅವರು ಗರುಡ ಪುರಾಣ ಎಂಬ ಸಿನಿಮಾವನ್ನು ನಿರ್ದೇಶಿಸುವುದರ ಜೊತೆಗೆ ನಟನೆಯನ್ನೂ ಮಾಡಿದ್ದಾರೆ. ಮಂಜುನಾಥ್ ಬಿ ನಾಗಬಾ ಕಥೆ, ಚಿತ್ರಕಥೆ ಬರೆದು, ನಿರ್ದೇಶಿಸಿಸಿ, ನಟಿಸಿರುಚವುದರ ಜೊತೆಗೆ ಸಂಕಲನ ಜವಾಬ್ದಾರಿಯನ್ನೂ ಅಚ್ಚುಕಟ್ಟಾಗಿ ನಿರ್ವಹಿಸಿರುವ 'ಗರುಡ ಪುರಾಣ' ಚಿತ್ರದ ಟೀಸರ್ ಅನ್ನು ಅಶ್ವಿನಿ ಪುನೀತ್ ರಾಜ್​​​ಕುಮಾರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.

ಮೊದಲು ಮಾತನಾಡಿದ ನಿರ್ದೇಶಕ ಮಂಜುನಾಥ್ ಬಿ ನಾಗಬಾ, ನಾನು ಕಾಂತಾರ ಸೇರಿದಂತೆ 18 ಚಿತ್ರಗಳಿಗೆ ಆನ್ ಲೈನ್ ಎಡಿಟರ್ ಆಗಿ ಕಾರ್ಯ ನಿರ್ವಹಿಸಿದ್ದೇನೆ. ಕಾಂತಾರ ನನಗೆ ಹೆಸರು ತಂದುಕೊಟ್ಟ ಸಿನಿಮಾ. ಅವಕಾಶ ನೀಡಿದ ನಟ ರಿಷಬ್ ಶೆಟ್ಟಿ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಗರುಡ ಪುರಾಣ ಚಿತ್ರದ ಕುರಿತು ಹೇಳಬೇಕಾದರೆ, ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎಂಬ ಅಂಶ ನಮ್ಮ ಸಿನಿಮಾದಲ್ಲಿರುವುದರಿಂದ ಗರುಡ ಪುರಾಣ ಎಂದು ಹೆಸರಿಟ್ಟಿದ್ದೇವೆ‌. ಮೂರು ಆಯಾಮಗಳಲ್ಲಿ ಚಿತ್ರದ ಕಥೆ ಸಾಗುತ್ತದೆ. ಚಿತ್ರೀಕರಣ ಮುಕ್ತಾಯವಾಗಿದ್ದು, ತೆರೆಗೆ ಬರಲು ಸಿದ್ಧವಾಗಿದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಅಶ್ವಿನಿ ಪುನೀತ್ ರಾಜ್​​ಕುಮಾರ್ ಅವರಿಗೆ ಹಾಗೂ ನಮಗೆ ಮೊದಲಿನಿಂದಲೂ ಪ್ರೋತ್ಸಾಹ ನೀಡುತ್ತಿರುವ ರಾಜು ಗೌಡ ಹಾಗೂ ತಿಪ್ಪರಾಜು ಅವರಿಗೆ ಧನ್ಯವಾದ ಎಂದು ತಿಳಿಸಿದರು.

  • " class="align-text-top noRightClick twitterSection" data="">

ಮಂಜುನಾಥ್ ಜೋಡಿಯಾಗಿ ದಿಶಾ ಶೆಟ್ಟಿ ಅಭಿನಯಿಸಿದ್ದಾರೆ. ಜೊತೆಗೆ ಭಜರಂಗಿ ಖ್ಯಾತಿಯ ಚೆಲುವರಾಜು, ಸಂತೋಷ್ ಕರ್ಕಿ, ಕೆಂಚಣ್ಣ, ರಾಜಕುಮಾರ್, ಮಹೇಂದ್ರ ಗೌಡ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾಗೆ ರಾಕೇಶ್ ಆಚಾರ್ಯ ಸಂಗೀತ ನಿರ್ದೇಶನ ಮಾಡಿದ್ದು, ಸುನೀಲ್ ನರಸಿಂಹಮೂರ್ತಿ ಅವರ ಛಾಯಾಗ್ರಹಣವಿದೆ. 27 ಫ್ರೇಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಶೀಘ್ರದಲ್ಲೇ ಪ್ರೇಕ್ಷಕರ ಮುಂದೆ ಸಿನಿಮಾ ಬರಲಿದೆ.

ಇದನ್ನೂ ಓದಿ: ಕನ್ನಡದ ನೆಲ, ಜಲ, ಭಾಷೆಯ ಎಲ್ಲಾ ಹೋರಾಟಗಳಲ್ಲೂ ಸದಾ ನಿಮ್ಮೊಂದಿಗೆ: ಕಿಚ್ಚ ಸುದೀಪ್

ಈ ಸಮಯದಲ್ಲಿ ಮಾಜಿ ಶಾಸಕರಾದ ರಾಜು ಗೌಡ, ತಿಪ್ಪರಾಜು, ಡಿ.ಎಸ್ ಮ್ಯಾಕ್ಸ್​ನ ದಯಾನಂದ್, ನಿವೃತ್ತ ಪೊಲೀಸ್ ಅಧಿಕಾರಿ ಶ್ರೀನಿವಾಸ್ ಕೂಚ್ಚಣ್ಣ, ನಟ ಮಣಿಕಂಠ ಸೇರಿದಂತೆ ಮೊದಲಾದವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು..

ಇದನ್ನೂ ಓದಿ: ರಕ್ಷ್ ರಾಮ್ ನಟನೆಯ 'ಬರ್ಮ' ಚಿತ್ರಕ್ಕೆ ರಾಜ್​​ಕುಮಾರ್​​ ಕುಟುಂಬ, ಧ್ರುವ ಸರ್ಜಾ ಸಾಥ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.