ETV Bharat / entertainment

'ಗೌರಿ' ತಂಡದೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಯುವ ನಟ ಸಮರ್ಜಿತ್ ಲಂಕೇಶ್ - ಈಟಿವಿ ಭಾರತ ಕನ್ನಡ

Samarjit Lankesh celebrated his birthday: 'ಗೌರಿ' ನಾಯಕ ನಟ ಸಮರ್ಜಿತ್ ಲಂಕೇಶ್​ ತಮ್ಮ ಹುಟ್ಟುಹಬ್ಬವನ್ನು ಅನೇಕ ಸಾಮಾಜಿಕ ಕಾರ್ಯಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಿಕೊಂಡರು.

Gauri movie hero Samarjit Lankesh celebrated his birthday
'ಗೌರಿ' ನಾಯಕ ನಟ ಸಮರ್ಜಿತ್ ಲಂಕೇಶ್​ ಹುಟ್ಟುಹಬ್ಬ
author img

By ETV Bharat Karnataka Team

Published : Nov 1, 2023, 5:59 PM IST

'ಗೌರಿ' ನಾಯಕ ನಟ ಸಮರ್ಜಿತ್ ಲಂಕೇಶ್​ ಹುಟ್ಟುಹಬ್ಬ

ಕನ್ನಡದ ಖ್ಯಾತ ಸಾಹಿತಿ ಪಿ.ಲಂಕೇಶ್ ಅವರ ಮೊಮ್ಮಗ ಹಾಗೂ ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಲಂಕೇಶ್ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ. 'ಗೌರಿ' ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇದೀಗ ಚಿತ್ರತಂಡ ಸಮರ್ಜಿತ್ ಲಂಕೇಶ್ ಅವರ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಈ ವೇಳೆ ಸಮರ್ಜಿತ್ ಅವರ ಅಜ್ಜಿ, ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್, ತಾಯಿ ಅರ್ಪಿತಾ ಲಂಕೇಶ್, ಇಂದ್ರಜಿತ್ ಲಂಕೇಶ್, ನಾಯಕಿ ಸಾನ್ಯ ಅಯ್ಯರ್, ನಟಿಯರಾದ ಮಾನಸಿ ಸುಧೀರ್, ಎಸ್ತರ ನರೋನ, ಹಿರಿಯ ಛಾಯಾಗ್ರಾಹಕ ಕೆ.ಕೆ ಉಪಸ್ಥಿತರಿದ್ದರು.

Gauri movie hero Samarjit Lankesh celebrated his birthday
'ಗೌರಿ' ನಾಯಕ ನಟ ಸಮರ್ಜಿತ್ ಲಂಕೇಶ್

ಈ ವೇಳೆ ಮೊದಲು ಮಾತು ಶುರು ಮಾಡಿದ ನಿರ್ದೇಶಕ ಇಂದ್ರಜಿತ್​ ಲಂಕೇಶ್​, "ಗೌರಿ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಈಗಾಗಲೇ ಚಿಕ್ಕಮಗಳೂರಿನ ರಮಣೀಯ ಸ್ಥಳಗಳಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ರವಿವರ್ಮ ಅವರ ಸಾಹಸ ನಿರ್ದೇಶನದಲ್ಲಿ ಸಾಹಸ ದೃಶ್ಯಗಳು ಅದ್ಭುತವಾಗಿ ಮೂಡಿಬಂದಿವೆ. ಸಮರ್ಜಿತ್ ನಾನು ಅಂದುಕೊಂಡದ್ದಕ್ಕಿಂತ ಚೆನ್ನಾಗಿ ಅಭಿನಯಿಸುತ್ತಿದ್ದಾರೆ. ಸಾನ್ಯ ಅವರು ಕೂಡ. ಮುಖ್ಯಮಂತ್ರಿ ಚಂದ್ರು, ಸಿಹಿಕಹಿ ಚಂದ್ರು, ಮಾನಸಿ ಸುಧೀರ್, ಎಸ್ತರ್ ನರೋನ ಮುಂತಾದವರು ನಮ್ಮ ಚಿತ್ರದಲ್ಲಿ ನಟಿಸುತ್ತಿದ್ದಾರೆ‌. ಹಿರಿಯ ಛಾಯಾಗ್ರಾಹಕ ಕೆ.ಕೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಇದು ಅವರ ನೂರನೇ ಚಿತ್ರ" ಎಂದು ತಿಳಿಸಿದರು.

ಇದನ್ನೂ ಓದಿ: ಇಂದ್ರಜಿತ್ ಲಂಕೇಶ್ ಪುತ್ರನ ಚಿತ್ರಕ್ಕೆ ಅದ್ಧೂರಿ ಮುಹೂರ್ತ: ಸ್ಯಾಂಡಲ್‌ವುಡ್‌ಗೆ ಮತ್ತೋರ್ವ ಆರಡಿ ಹೀರೋ ಎಂಟ್ರಿ

ಬಳಿಕ ಸಮರ್ಜಿತ್ ಲಂಕೇಶ್ ಮಾತನಾಡಿ, "ನಾನು ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವುದಿಲ್ಲ. ಇಂದು ಚಿತ್ರತಂಡದವರು ನನ್ನ ಹುಟ್ಟುಹಬ್ಬ ಆಚರಿಸಿದ್ದು ಖುಷಿಯಾಗಿದೆ. ಎಲ್ಲರಿಗೂ ಧನ್ಯವಾದ. ಸಾಕಷ್ಟು ತಯಾರಿ ಮಾಡಿಕೊಂಡು ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ" ಎಂದರು.

ಇನ್ನು ಛಾಯಾಗ್ರಾಹಕ ಕೆ.ಕೆ ಮಾತನಾಡಿ, "ಇದು ನನ್ನ ನೂರನೇ ಚಿತ್ರ. ನನ್ನ ಮಗ ನಾಣಿ ಕೂಡ ಈ ಚಿತ್ರದಲ್ಲಿ ನನ್ನ ಜೊತೆ ಕೆಲಸ ಮಾಡುತ್ತಿದ್ದಾರೆ. ಸಮರ್ಜಿತ್ ನಟನೆ ನೋಡಿದಾಗ ಮೊದಲ ಚಿತ್ರ ಅನಿಸುವುದಿಲ್ಲ. ಅಷ್ಟು ಚೆನ್ನಾಗಿ ನಟಿಸುತ್ತಿದ್ದಾರೆ" ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಮರ್ಜಿತ್ ಅಜ್ಜಿ ಇಂದಿರಾ ಲಂಕೇಶ್ ಅವರು ಮೊಮ್ಮಗನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

ಸಮರ್ಜಿತ್ ಲಂಕೇಶ್​ ತಮ್ಮ ಹುಟ್ಟುಹಬ್ಬವನ್ನು ಅನೇಕ ಸಾಮಾಜಿಕ ಕಾರ್ಯಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಿಕೊಂಡರು. ಜೊತೆಗೆ ಸಿದ್ದಗಂಗಾ ಮಠಕ್ಕೆ ತೆರಳಿ ಶಿವಕುಮಾರ ಸ್ವಾಮಿಗಳ ಗದ್ದುಗೆ ದರ್ಶನ ಪಡೆದು, ಆಶೀರ್ವಾದ ಪಡೆದುಕೊಂಡರು. ಆನಂತರ ಕಂಠೀರವ ಸ್ಟುಡಿಯೋಗೆ ಆಗಮಿಸಿ ಪುನೀತ್ ರಾಜ್​ಕುಮಾರ್ ಸಮಾಧಿಗೆ ಪೂಜೆ ಸಲ್ಲಿಸಿದರು.

ಇದನ್ನೂ ಓದಿ: 'ಪುಟ್ಟಗೌರಿ'ಯ ಮಾಡರ್ನ್​​ ಫೋಟೋಶೂಟ್​.. ಸಾನ್ಯಾ ಅಂದಕ್ಕೆ ಮನಸೋತ ಫ್ಯಾನ್ಸ್​..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.