ETV Bharat / entertainment

ಕಿರುತೆರೆಯಿಂದ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ಗೀತಾ ಭಾರತಿ ಭಟ್ - ಕಿರುತೆರೆಯಿಂದ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ನಟಿಯರು

ಬ್ರಹ್ಮಗಂಟು ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದ ಗೀತಾ ಭಾರತಿ ಭಟ್ ಹೊಸ ಸಿನಿಮಾದಲ್ಲಿ ನಟಿಯಾಗಿ ಕಾಣಸಿಕೊಳ್ಳಲಿದ್ದಾರೆ.

Geeta Bharti Bhatt Entered The Big Screen
ಗೀತಾ ಭಾರತಿ ಭಟ್
author img

By

Published : Sep 7, 2022, 7:21 PM IST

ಕಿರುತೆರೆ ಕಲಾವಿದರು ಸಿನಿಮಾ ಮೂಲಕ ಬಿಗ್ ಸ್ಕ್ರೀನ್​​ಗೆ ಪದಾರ್ಪಣೆ ಮಾಡುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಬ್ರಹ್ಮಗಂಟು ಸೀರಿಯಲ್​​ನಿಂದ ಕನ್ನಡಿಗರ ಮನಗೆದ್ದಿದ್ದ ಗೀತಾ ಭಾರತಿ ಭಟ್ ಹೆಸರಿಡದ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಎಂಟ್ರಿ ಕೊಡುತ್ತಿದ್ದಾರೆ. ಈ ಹಿಂದೆ ಹೋಮ್ ಸ್ಟೇ ಚಿತ್ರವನ್ನ ನಿರ್ದೇಶನ ಮಾಡಿದ್ದ ಸಂತೋಷ್ ಕೊಡಂಕೇರಿ ಈ ಚಿತ್ರವನ್ನ ನಿರ್ದೇಶನ ಮಾಡುತ್ತಿದ್ದಾರೆ. ಇನ್ನೂ ಹೆಸರಿಡದ ಪ್ರೊಡಕ್ಷನ್ ನಂ 02 ನೂತನ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಸುಳ್ಯದ ಶ್ರೀ ಚನ್ನಕೇಶವ ದೇವಸ್ಥಾನದಲ್ಲಿ ಜರುಗಿತು.

Geeta Bharti Bhatt Entered The Big Screen
ಚಿತ್ರದ ಮುಹೂರ್ತ

ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಕ್ಲ್ಯಾಪ್ ಮಾಡುವ ಮೂಲಕ ಚಾಲನೆ ನೀಡಿದರು. ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪ್ರಶಸ್ತಿ ಪುರುಸ್ಕೃತ ಗಿರೀಶ್ ಭಾರಧ್ವಾಜ್ ಅವರು ಕ್ಯಾಮೆರಾ ಸ್ವಿಚ್ ಆನ್ ಮಾಡಿದರು.

Geeta Bharti Bhatt Entered The Big Screen
ಗೀತಾ ಭಾರತಿ ಭಟ್

ಲಯನ್ಸ್ ಕ್ಲಬ್ ಜಿಲ್ಲಾ ಮಾಜಿ ಗವರ್ನರ್ ಹಾಗೂ ಜೆಡಿಎಸ್ ರಾಜ್ಯ ಸಂಚಾಲಕ ಎಂ.ಬಿ. ಸದಾಶಿವ, ಚನ್ನಕೇಶವ ದೇವಳದ ಆಡಳಿತ ಮೊಕೇಸ್ತರ ಡಾ. ಹರಪ್ರಸಾದ್ ತುದಿಯಡ್ಕ, ನ.ಪಂ. ಮಾಜಿ ಅಧ್ಯಕ್ಷ ಎಂ. ವೆಂಕಪ್ಪಗೌಡ ಹಾಗೂ ಸ್ಥಳೀಯ ಮುಖಂಡರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಗೀತಾ ಭಾರತಿ ಭಟ್ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರದಲ್ಲಿ ಪದ್ಮಜಾ ರಾವ್, ಕೃಷ್ಣಮೂರ್ತಿ ಕವತಾರ್, ಸಂಪತ್ ಮೈತ್ರೇಯ, ರಘು ಪಾಂಡೇಶ್ವರ್, ಖುಷಿ ಆಚಾರ್, ಮೀನಾ ಹಾಗೂ ದರ್ಶಿನಿ ಮುಂತಾದವರು ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರ ತಂಡ

ಪಾವನಾ ಸಂತೋಷ್ ಕಥೆ ಮತ್ತು ಸಂಭಾಷಣೆ ಬರೆದಿದ್ದು, ಸಂತೋಷ್ ಕೊಡಂಕೇರಿ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಮುರಳೀಧರ್ .ಎಂ. ಛಾಯಾಗ್ರಹಣ, ವಿನಯ್ ಶರ್ಮಾ ಸಂಗೀತ ನಿರ್ದೇಶನ, ರಘು ಎಸ್. ಸಂಕಲನ, ಕಿರಣ್ ಕಾವೇರಪ್ಪ ಗೀತರಚನೆ ಹಾಗೂ ಪ್ರಸನ್ನ - ಕಲ್ಯಾಣ್ ರೆಡ್ಡಿ ಅವರ ಸಹ ನಿರ್ದೇಶನ ಈ ಚಿತ್ರಕ್ಕಿದೆ.

ದಕ್ಷಿಣ ಕನ್ನಡದ ಜಿಲ್ಲೆಯ ಸೊಗಡು, ಭಾಷೆ, ಸಂಸ್ಕೃತಿ ಹೊಂದಿದ್ದು, ಸುಳ್ಯ, ಸಂಪಾಜೆ, ತೋಡಿಕಾನ ಆಸುಪಾಸಿನಲ್ಲಿ 30 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ‌ ಎಂದು ನಿರ್ದೇಶಕರು ತಿಳಿಸಿದ್ದಾರೆ. ದೃಷ್ಟಿ ಮಿಡಿಯಾ ಮತ್ತು ಪ್ರೊಡಕ್ಷನ್ಸ್ ಸಂಸ್ಥೆಯ ಅಡಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಇದನ್ನೂ ಓದಿ: ಪೊನ್ನಿಯಿನ್ ಸೆಲ್ವನ್​ ಟ್ರೈಲರ್ ಸಮಾರಂಭದಲ್ಲಿ ರಜನಿಕಾಂತ್ ಆಶೀರ್ವಾದ ಪಡೆದ ಐಶ್ವರ್ಯ ರೈ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.