ಕರುನಾಡ ಚಕ್ರವರ್ತಿಯ 125ನೇ ಸಿನಿಮಾ ಅಂದ ಮೇಲೆ ನಿರೀಕ್ಷೆ ಕೊಂಚ ಹೆಚ್ಚೇ ಅಲ್ವಾ?. ಹೌದು, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಹೊಸ ಲುಕ್ನಲ್ಲಿ ಕಾಣಿಸಿಕೊಳ್ಳುತ್ತಿರುವ ಘೋಸ್ಟ್ ಚಿತ್ರದ ಮೊದಲ ಹಂತದ ಚಿತ್ರೀಕರಣ ಇದೀಗ ಮುಕ್ತಾಯವಾಗಿದೆ.
ಬೆಂಗಳೂರಿನ ಮಿನರ್ವ ಮಿಲ್ನಲ್ಲಿ ಅಪಾರ ವೆಚ್ಚದಲ್ಲಿ ಅದ್ಧೂರಿಯಾಗಿ ನಿರ್ಮಿಸಲಾಗಿರುವ 15ಕ್ಕೂ ಅಧಿಕ ಸೆಟ್ಗಳಲ್ಲಿ 28 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ಮಾಡಲಾಗಿದೆ. ಶಿವರಾಜ್ಕುಮಾರ್, ತೆಲುಗು ನಟ ಜಯರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್ ಸೇರಿ ಮುಂತಾದ ಕಲಾವಿದರು ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಕಲಾ ನಿರ್ದೇಶಕ ಮೋಹನ್ ಬಿ ಕೆರೆ ಮಾರ್ಗದರ್ಶನದಲ್ಲಿ ಸೆಟ್ಗಳು ನಿರ್ಮಾಣಗೊಂಡಿವೆ.
ನಿರ್ದೇಶಕ ಶ್ರೀನಿ ಅವರೇ ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಸಂಭಾಷಣೆ ಜವಾಬ್ದಾರಿ ಮಾಸ್ತಿ ಹಾಗೂ ಪ್ರಸನ್ನ ಅವರದ್ದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ ಈ ಚಿತ್ರಕ್ಕಿದೆ. ಐದು ಸಾಹಸ ಸನ್ನಿವೇಶಗಳು ಇರಲಿವೆ. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ಎನ್ ಸಿನಿಮಾ ನಿರ್ಮಿಸುತ್ತಿದ್ದಾರೆ.
ಇದನ್ನೂ ಓದಿ: ಕರುನಾಡ ಚಕ್ರವರ್ತಿಯ 'ಘೋಸ್ಟ್' ಮೇಕಿಂಗ್ ವಿಡಿಯೋ ರಿಲೀಸ್
ಮೊದಲ ಶೆಡ್ಯೂಲ್ ಮುಗಿಸಿರೋುವ ಚಿತ್ರತಂಡ, ದ್ವಿತೀಯ ಹಂತದ ಚಿತ್ರೀಕರಣವನ್ನು ಡಿಸೆಂಬರ್ನಲ್ಲಿ ಮೈಸೂರಿನಲ್ಲಿ ಪ್ರಾರಂಭಿಸಲಿದೆ. ಸದ್ಯ ಅನಾವರಣವಗಿರುವ ಘೋಸ್ಟ್ ಚಿತ್ರದ ಮೇಕಿಂಗ್ ವಿಡಿಯೋ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.