ETV Bharat / entertainment

ಬಿಡುಗಡೆಗೂ ಮುನ್ನವೇ 'ಘೋಸ್ಟ್' ಕೋಟಿ ಕೋಟಿ ವ್ಯವಹಾರ: ಹ್ಯಾಟ್ರಿಕ್ ಹೀರೋ‌ ಸಿನಿಮಾ ಬಗ್ಗೆ ಭಾರಿ ಕುತೂಹಲ! - Shiva Rajkumar

Ghost movie: ಬಹುನಿರೀಕ್ಷಿತ ಘೋಸ್ಟ್ ಚಿತ್ರದ ಪ್ರೀ ಬ್ಯುಸಿನೆಸ್ ಜೋರಾಗಿದೆ ಎಂಬ ಮಾಹಿತಿ ಇದೆ.

Ghost movie
ಘೋಸ್ಟ್ ಸಿನಿಮಾ
author img

By ETV Bharat Karnataka Team

Published : Sep 21, 2023, 1:30 PM IST

ಶೀರ್ಷಿಕೆಯಿಂದಲೇ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಸಖತ್​ ಟಾಕ್​ ಆಗುತ್ತಿರುವ ಸಿನಿಮಾ 'ಘೋಸ್ಟ್'. ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ದೊಡ್ಡ ಗೆಲುವಿಗೆ ರೆಡಿಯಾಗಿರೋ ಚಿತ್ರವೂ ಹೌದು. ಇದು ಹ್ಯಾಟ್ರಿಕ್ ಹೀರೋ ಶಿವ ರಾಜ್​​ಕುಮಾರ್ ಗ್ಯಾಂಗ್​ಸ್ಟರ್ ಆಗಿ ಕಾಣಿಸಿಕೊಂಡಿರುವ ಪ್ಯಾನ್ ಇಂಡಿಯಾ ಸಿನಿಮಾ. ಪಾಸಿಟಿವ್ ವೈಬ್ಸ್ ಕ್ರಿಯೇಟ್ ಮಾಡಿರೋ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಗಳಿವೆ.

ಟೀಸರ್​ನಿಂದಲೇ ಹೊಸ ಬಗೆಯ​ ಕ್ರೇಜ್ ಕ್ರಿಯೇಟ್​ ಮಾಡಿರುವ ಘೋಸ್ಟ್ ಬಿಡುಗಡೆಗೂ ಮುನ್ನವೇ ಕೋಟಿ ಕೋಟಿ ರೂಪಾಯಿ ವ್ಯವಹಾರ ನಡೆಸಿದೆ. ಕರುನಾಡ ಚಕ್ರವರ್ತಿ ಶಿವಣ್ಣ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ, ನಿರ್ದೇಶಕ ಶ್ರೀನಿ ಆ್ಯಕ್ಷನ್ ಕಟ್ ಹೇಳಿರುವ ಚಿತ್ರದ ರಿಲೀಸ್​ ಡೇಟ್ ಕೂಡ ಅನೌನ್ಸ್​ ಆಗಿದ್ದು, ಪ್ರೀ ಬ್ಯುಸಿನೆಸ್ ಜೋರಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಘೋಸ್ಟ್ ಚಿತ್ರದ ಥಿಯೇಟ್ರಿಕಲ್, ಸ್ಯಾಟಲೈಟ್ ಹಾಗೂ ಡಿಜಿಟಲ್ ರೈಟ್ಸ್ ಭಾರಿ ಮೊತ್ತಕ್ಕೆ ಮಾರಾಟವಾಗಿದೆ. ಆರ್​ಆರ್​ಆರ್, ಜವಾನ್ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ವಿತರಣೆ ಮಾಡಿರುವ ಪೆನ್ ಸ್ಟುಡಿಯೋ ಸಂಸ್ಥೆ ಇದೀಗ 'ಘೋಸ್ಟ್' ಚಿತ್ರದ ವಿತರಣಾ ಹಕ್ಕನ್ನೂ ಪಡೆದುಕೊಂಡಿದೆ. ಕನ್ನಡ, ತಮಿಳು ಹಾಗೂ ಮಲಯಾಳಂ ಭಾಷೆಗಳನ್ನು ಹೊರತುಪಡಿಸಿ ಮಿಕ್ಕ ಭಾಷೆಗಳಲ್ಲಿ 'ಘೋಸ್ಟ್' ಚಿತ್ರವನ್ನು ಪೆನ್ ಸ್ಟುಡಿಯೋ ಸಂಸ್ಥೆ ಬಿಡುಗಡೆ ಮಾಡುತ್ತಿರುವುದಾಗಿ ನಿರ್ಮಾಪಕ ಸಂದೇಶ್ ತಿಳಿಸಿದ್ದಾರೆ. ಇತ್ತೀಚೆಗೆ ಪೆನ್ ಸ್ಟುಡಿಯೋ ಸಂಸ್ಥೆ ಮುಖ್ಯಸ್ಥರಾದ ಜಯಂತಿ ಲಾಲ್ ಗಡ ಹಾಗೂ ನಿರ್ಮಾಪಕ ಸಂದೇಶ್ ಈ ಕುರಿತು ಮಾತನಾಡಿದ್ದರು.

ನಿರ್ಮಾಪಕ ಸಂದೇಶ್ ಆಪ್ತರು ಹೇಳುವಂತೆ ಹಿಂದಿ ಸ್ಯಾಟಲೈಟ್, ಡಿಜಿಟಲ್ ಹಾಗೂ ಡಬ್ಬಿಂಗ್ ರೈಟ್ಸ್ ಸೇರಿ ಒಟ್ಟು 15 ಕೋಟಿ ರೂ.ಗೆ ಬ್ಯುಸಿನೆಸ್ ಆಗಿದೆಯಂತೆ. ಅಕ್ಟೋಬರ್ ಮೊದಲ ವಾರ 'ಘೋಸ್ಟ್' ಪ್ರಚಾರಕ್ಕಾಗಿ ಶಿವಣ್ಣ ಮುಂಬೈ, ದೆಹಲಿ ಸೇರಿದಂತೆ ಮುಂತಾದ ಕಡೆ ತೆರಳುತ್ತಿದ್ದಾರೆ ಎಂದು ನಿರ್ಮಾಪಕರು ಮಾಹಿತಿ ನೀಡಿದ್ದಾರೆ‌.

ಇದನ್ನೂ ಓದಿ: ಕಾವೇರಿ ಹೋರಾಟಕ್ಕೆ ಸ್ಯಾಂಡಲ್​ವುಡ್​ ಬೆಂಬಲ: ಸುದೀಪ್, ದರ್ಶನ್, ಶಿವಣ್ಣ ಹೇಳಿದ್ದೇನು?

ನಿರ್ದೇಶಕ ಶ್ರೀನಿ ಅವರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದ್ದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ 'ಘೋಸ್ಟ್‌' ಚಿತ್ರಕ್ಕಿದೆ. ಐದು ಸಾಹಸ ಸನ್ನಿವೇಶಗಳಿವೆ.

ಇದನ್ನೂ ಓದಿ: 'ಜವಾನ್​​'ನಲ್ಲಿ ದೀಪಿಕಾ ಪಡುಕೋಣೆ ಪಾತ್ರಕ್ಕೆ ಹೆಚ್ಚು ಒತ್ತು; ಬಾಲಿವುಡ್‌ನಿಂದ ಮುನಿಸಿಕೊಂಡರೇ ನಯನತಾರಾ?

ಬಾಲಿವುಡ್ ನಟ ಅನುಪಮ್ ಖೇರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ನಟಿಸಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಸಂದೇಶ್ ನಾಗರಾಜ್ ಅರ್ಪಿಸುತ್ತಿರುವ ಸಿನಿಮಾಗೆ ಸಂದೇಶ್ ಎನ್ ದೊಡ್ಡ ಮಟ್ಟದಲ್ಲಿ ಬಂಡವಾಳ ಹೂಡಿದ್ದಾರೆ. ಅಕ್ಟೋಬರ್ 19ರಂದು ಸಿನಿಮಾ ವಿಶ್ವಾದ್ಯಂತ ತೆರೆಕಾಣಲಿದೆ. ಟೀಸರ್​ನಿಂದಲೇ ಕ್ರೇಜ್ ಹುಟ್ಟಿಸಿರೋ‌ ಘೋಸ್ಟ್‌ನಲ್ಲಿ ಹ್ಯಾಟ್ರಿಕ್ ಹೀರೋನ ಆರ್ಭಟ ನೋಡಲು ಅಭಿಮಾನಿಗಳು ಕೂಡ ಕಾತುರದಿಂದ ಕಾಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.