ಪಣಜಿ (ಗೋವಾ): ಎರಡು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಮಾಡೆಲ್ ಪೂನಂ ಪಾಂಡೆ ವಿರುದ್ಧ ಗೋವಾ ಪೊಲೀಸರು ಚಾರ್ಜ್ಶೀಟ್ ದಾಖಲಿಸಿದ್ದಾರೆ. 2020ರ ನವೆಂಬರ್ನಲ್ಲಿ ಇಲ್ಲಿನ ಕೆನಕೋನಾ ಬಳಿಯ ಚಾಪೋಲಿ ಡ್ಯಾಂನಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿದ್ದ ಕುರಿತಾಗಿ ಪೂನಂ ವಿರುದ್ಧ ಕೇಸ್ ದಾಖಲಾಗಿತ್ತು.
ಪೂನಂ ಪಾಂಡೆ ವಿರುದ್ಧ ಕಳೆದ ವಾರ ನಾವು ಚಾರ್ಜ್ಶೀಟ್ ದಾಖಲಿಸಿದ್ದೇವೆ. ಇದು ಅಂಗೀಕಾರವಾದ ಬಳಿಕ ಕೋರ್ಟ್, ನಟಿಗೆ ಸಮನ್ಸ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಅಸಭ್ಯ ವಿಡಿಯೋ ಚಿತ್ರೀಕರಣಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದ ಕಾರಣ ಗೃಹ ಇಲಾಖೆ ಒಬ್ಬ ಪೊಲೀಸ್ ಇನ್ಸ್ಪೆಕ್ಟರ್ನನ್ನು ಅಮಾನತು ಮಾಡಿತ್ತು.
ಇದನ್ನೂ ಓದಿ: ಕರೀನಾ ಕಪೂರ್ ಹೃದಯದಲ್ಲಿ ವಿಶೇಷ ಸ್ಥಾನ ಪಡೆದ 'ಲಾಲ್ ಸಿಂಗ್ ಚಡ್ಡಾ'