ETV Bharat / entertainment

ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿ ಹೈದರಾಬಾದ್​ಗೆ ಮರಳಿದ ಅಲ್ಲು ಅರ್ಜುನ್​ಗೆ ಅದ್ಧೂರಿ ಸ್ವಾಗತ - ವಿಡಿಯೋ! - national film award

'ಅತ್ಯುತ್ತಮ ನಟ- ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ' ಪಡೆದ ಅಲ್ಲು ಅರ್ಜುನ್ ಅವರಿಗೆ ಹೈದರಾಬಾದ್​ನಲ್ಲಿ ಭವ್ಯ ಸ್ವಾಗತ ಕೋರಲಾಗಿದೆ.

Grand welcome to allu arjun after getting national film award
ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿ ಹೈದರಾಬಾದ್​ಗೆ ಮರಳಿದ ಅಲ್ಲು ಅರ್ಜುನ್​ಗೆ ಅದ್ಧೂರಿ ಸ್ವಾಗತ
author img

By ETV Bharat Karnataka Team

Published : Oct 19, 2023, 7:41 AM IST

ಸೌತ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರು 'ಅತ್ಯುತ್ತಮ ನಟ- ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ' ಪಡೆದ ಮೊದಲ ಟಾಲಿವುಡ್​ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ತೆಲುಗು ಇಂಡಸ್ಟ್ರಿ ಸೇರಿದಂತೆ ಅವರ ಅಸಂಖ್ಯಾತ ಅಭಿಮಾನಿಗಳು ನಟನ ಸಾಧನೆಯನ್ನು ಮೆಚ್ಚಿ ಕೊಂಡಾಡುತ್ತಿದ್ದಾರೆ. 'ಪುಷ್ಪ: ದಿ ರೈಸ್' ಚಿತ್ರದಲ್ಲಿನ ಅತ್ಯುತ್ತಮ ನಟನೆಗಾಗಿ ಪ್ರತಿಷ್ಠಿತ ರಾಷ್ಟ್ರ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಹೈದರಾಬಾದ್‌ನಲ್ಲಿರುವ ತಮ್ಮ ಮನೆಗೆ ಹಿಂದಿರುಗುವ ವೇಳೆ ಅಭಿಮಾನಿಗಳು ತಮ್ಮ ಮೆಚ್ಚಿನ ನಟನನ್ನು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಗ್ರ್ಯಾಂಡ್​ ವೆಲ್​ಕಮ್​​ನ ವಿಡಿಯೋ - ಫೋಟೋಗಳು ಸೋಷಿಯಲ್​ ಮೀಡಿಯಾದಲ್ಲಿ ಸಖತ್​​ ಸದ್ದು ಮಾಡುತ್ತಿವೆ.

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅಕ್ಟೋಬರ್ 17 ರಂದು ಅಂದರೆ ಸೋಮವಾರದಂದು ನವದೆಹಲಿಯ ವಿಜ್ಞಾನ ಭವನದಲ್ಲಿ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಜೇತರಿಗೆ ಈ ಪ್ರತಿಷ್ಠಿತ ಪ್ರಶಸ್ತಿಗಳನ್ನು ಹಸ್ತಾಂತರಿಸಿದರು. ಅಲ್ಲು ಅರ್ಜುನ್ ತಮ್ಮ ಬ್ಲಾಕ್​ ಬಸ್ಟರ್ ಹಿಟ್ ಸಿನಿಮಾ 'ಪುಷ್ಪ: ದಿ ರೈಸ್'ಗಾಗಿ ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ್ದಾರೆ. ಮತ್ತೊಂದೆಡೆ, ಆಲಿಯಾ ಭಟ್ ಹಾಗೂ ಕೃತಿ ಸನೋನ್​​ ಅತ್ಯುತ್ತಮ ನಟಿ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

ಅತ್ಯುತ್ತಮ ನಟನ ಮೇಲೆ ಹೂಮಳೆ: ಮಂಗಳವಾರ ನವದೆಹಲಿಯಲ್ಲಿ ನಡೆದ ಬಹುನಿರೀಕ್ಷಿತ ಕಾರ್ಯಕ್ರಮದಲ್ಲಿ ಭಾಗಿ ಆಗಿ ಅಲ್ಲು ಅರ್ಜುನ್ ಹೈದರಾಬಾದ್‌ಗೆ ಹಿಂತಿರುಗಿದರು. ಅಭಿಮಾನಿಗಳು ತಮ್ಮ ಮೆಚ್ಚಿನ ನಟನ ಸಾಧನೆಯನ್ನು ಸಂಭ್ರಮಿಸಿದರು. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಫೋಟೋ - ವಿಡಿಯೋದಲ್ಲಿ ಅಲ್ಲು ಅರ್ಜುನ್ ಬ್ಲ್ಯಾಕ್ ಕುರ್ತಾ ಹಾಗೂ ವೈಟ್ ಪೈಜಾಮದಲ್ಲಿ ಕಾಣಿಸಿಕೊಂಡಿದ್ದಾರೆ. ಅಭಿಮಾನಿಗಳು ನಟನ ಮೇಲೆ ಹೂವಿನ ಮಲೆ ಸುರಿಸಿದ್ದಾರೆ. ಅಲ್ಲದೇ ಪೋಸ್ಟರ್​ಗಳ ಮೂಲಕ ಭವ್ಯ ಸ್ವಾಗತವನ್ನೂ ಕೋರಿದ್ದಾರೆ.

ಇದನ್ನೂ ಓದಿ: 'UT 69' ಟ್ರೇಲರ್​​​ ಲಾಂಚ್​ ಈವೆಂಟ್​ನಲ್ಲಿ ಕಣ್ಣೀರಿಟ್ಟ ಶಿಲ್ಪಾ ಶೆಟ್ಟಿ ಪತಿ - ಮೊದಲ ಬಾರಿ ಫೇಸ್ ಮಾಸ್ಕ್ ತೆಗೆದ ರಾಜ್ ಕುಂದ್ರಾ

ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ತೆಲುಗು ನಟ: ತೆಲುಗು ಚಿತ್ರರಂಗದ ಇತಿಹಾಸದಲ್ಲೇ ಅತ್ಯುತ್ತಮ ನಟ ಪ್ರಶಸ್ತಿ ಪಡೆದ ಮೊದಲ ನಟ ಎಂಬ ಹೆಗ್ಗಳಿಕೆಗೆ ಅಲ್ಲು ಅರ್ಜುನ್ ಪಾತ್ರರಾಗಿದ್ದಾರೆ. ಗೌರವಾನ್ವಿತ ರಾಷ್ಟ್ರ ಪ್ರಶಸ್ತಿಯನ್ನು ಗೆಲ್ಲುವ ಮುಖೇನ ಇತಿಹಾಸ ನಿರ್ಮಿಸಿದ್ದಾರೆ. ಅಲ್ಲು ಅರ್ಜುನ್ ಕೂಡ ತಮ್ಮ ಅಧಿಕೃತ ಇನ್​​ಸ್ಟಾಗ್ರಾಮ್​ ಖಾತೆಯಲ್ಲಿ ಸಮಾರಂಭದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ, 'ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದು ಅತ್ಯಂತ ಗೌರವದ ಕ್ಷಣ' ಎಂದು ಬರೆದುಕೊಂಡಿದ್ದಾರೆ. ಅಲ್ಲು ಅರ್ಜುನ್ ಪ್ರಸ್ತುತ ತಮ್ಮ ಬಹು ನಿರೀಕ್ಷಿತ ಸಿನಿಮಾ 'ಪುಷ್ಪ: ದಿ ರೂಲ್'ನ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ಸಿನಿಮಾ ಮುಂದಿನ ವರ್ಷ ಇದು ಆಗಸ್ಟ್ 15 ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದ ಕ್ಷಣಗಳು: Photos

ETV Bharat Logo

Copyright © 2025 Ushodaya Enterprises Pvt. Ltd., All Rights Reserved.