ಗುಳ್ಟು ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ತನ್ನದೇ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡಿರುವವರು ನಟ ನವೀನ್ ಶಂಕರ್. ಇತ್ತೀಚೆಗೆ ಹೊಯ್ಸಳ ಸಿನಿಮಾದಲ್ಲಿ ಧನಂಜಯ್ ಎದುರು ಖಡಕ್ ವಿಲನ್ ಆಗಿ ಅಬ್ಬರಿಸಿ ಗಮನ ಸೆಳೆದಿರೋ ನವೀನ್ ಶಂಕರ್ಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ತಮ್ಮ ಅಭಿಮಾನಿಗಳ ಜೊತೆ ನವೀನ್ ಶಂಕರ್ ಕೇಕ್ ಕಟ್ ಮಾಡುವ ಮೂಲಕ ತಮ್ಮ ಬರ್ತಡೇ ಆಚರಿಸಿಕೊಂಡಿದ್ದಾರೆ.
ಈ ಮಧ್ಯೆ ಕ್ಷೇತ್ರಪತಿ ಚಿತ್ರತಂಡ ನವೀನ್ ಶಂಕರ್ಗೆ ಹೊಸ ಮೋಷನ್ ಪೋಸ್ಟರ್ ಅನ್ನ ಬಿಡುಗಡೆ ಮಾಡುವ ಮೂಲಕ ಹುಟ್ಟು ಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ಆಗಿ ನೀಡಿದೆ. ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ.
ಪೊಲಿಟಿಕಲ್ ಡ್ರಾಮ ಕಥಾಹಂದರ: ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಶ್ರೀಕಾಂತ್ ಕಟಗಿ ನಿರ್ದೇಶಿಸಿದ್ದಾರೆ. "ಕ್ಷೇತ್ರಪತಿ" ಸೋಷಿಯಲ್ ಪೊಲಿಟಿಕಲ್ ಡ್ರಾಮ ಕಥಾಹಂದರ ಹೊಂದಿದೆ ಎನ್ನುತ್ತಾರೆ ನಿರ್ದೇಶಕರು. ಶ್ರೀಕಾಂತ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.
ಇದನ್ನೂ ಓದಿ: ಕೊರಗಜ್ಜ ಚಿತ್ರಕ್ಕೆ ಸ್ವತಃ ಕನ್ನಡದಲ್ಲಿಯೇ ಡಬ್ಬಿಂಗ್ ಮಾಡಿದ ಹಾಲಿವುಡ್ ಮತ್ತು ಬಾಲಿವುಡ್ ನಟ
ಉತ್ತರ ಕರ್ನಾಟಕದಲ್ಲೇ ನಡೆದಿರುವ ಚಿತ್ರೀಕರಣ: ಇದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯಾಗಿದ್ದು, ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆದಿದೆ. ಕೆಜಿಎಫ್ ಖ್ಯಾತಿಯ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ವೈ ವಿ ಬಿ ಶಿವಸಾಗರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಜೀವನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಇದನ್ನೂ ಓದಿ: ವಾಮಾಚಾರದ ಸುತ್ತ 'ಗದಾಯುದ್ಧ' ಮಾಡಲು ರೆಡಿಯಾದ ಯುವ ನಟ ಸುಮಿತ್
ಇತ್ತೀಚೆಗೆ ಬಿಡುಗಡೆಯಾಗಿ ಜನಪ್ರಿಯವಾದ ಹೊಂದಿಸಿ ಬರೆಯಿರಿ ಚಿತ್ರದಲ್ಲಿ ನಾಯಕ - ನಾಯಕಿಯಾಗಿ ನಟಿಸಿದ್ದ ನವೀನ್ ಶಂಕರ್ ಹಾಗೂ ಅರ್ಚನಾ ಜೋಯಿಸ್ "ಕ್ಷೇತ್ರಪತಿ" ಚಿತ್ರದಲ್ಲೂ ನಾಯಕ - ನಾಯಕಿಯಾಗಿ ನಟಿಸಿದ್ದಾರೆ. ಅಚ್ಯುತ್ ಕುಮಾರ್, ರಾಹುಲ್ ಐನಾಪುರ, ಕೃಷ್ಣ ಹೆಬ್ಬಾಳೆ, ಶೈಲಶ್ರೀ ಅರಸ್, ನಾಟ್ಯ ರಂಗ, ಹರ್ಷ ಅರ್ಜುನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಇದನ್ನೂ ಓದಿ: 'ಮಿಸ್ಟರ್ ಆ್ಯಂಡ್ ಮಿಸಸ್ ರಾಜಾಹುಲಿ' ಚಿತ್ರದ ಮೂಲಕ ನಾಯಕ ನಟರಾದ ಹೊನ್ನರಾಜ್
ಪೋಸ್ಟ್ ಪ್ರೊಡಕ್ಷನ್ ಅಂತಿಮ ಹಂತದಲ್ಲಿದೆ: ಕ್ಷೇತ್ರಪತಿ ಸಿನಿಮಾದಲ್ಲಿ ನವೀನ್ ಶಂಕರ್ ಅವರು ಇಂಜಿನಿಯರ್, ರೈತನ ಮಗ. ಇವರಿಬ್ಬರ ಹೋರಾಟದ ಕಥೆಯೇ ‘ಕ್ಷೇತ್ರಪತಿ’ ಸಿನಿಮಾವಾಗಿದೆ. ರೈತನ ಸಮಸ್ಯೆ ಕುರಿತಾದ ಸಿನಿಮಾ. ಹೀಗಾಗಿ ಸ್ಯಾಂಡಲ್‌ವುಡ್‌ನಲ್ಲಿ ರೈತರ ಸಮಸ್ಯೆಯ ಕುರಿತಾದ ಕಮರ್ಷಿಯಲ್ ಸಿನಿಮಾ. ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಅಂತಿಮ ಹಂತದಲ್ಲಿದೆ. ಜುಲೈನಲ್ಲಿ ಚಿತ್ರ ತೆರೆಗೆ ಬರಲಿದೆ. KRG ಸ್ಟುಡಿಯೋಸ್ ಮೂಲಕ ಬಿಡುಗಡೆಯಾಗುತ್ತಿದೆ.
ಇದನ್ನೂ ಓದಿ: ಭಾವನೆಗಳ ಸುತ್ತ ಸುಂದರ ಪ್ರೀತಿಯ ಪಯಣ: ಇದು ಮೆಲೋಡಿ ಡ್ರಾಮಾ..