ನೈಜ ಘಟನೆಯಾಧಾರಿತ ತನುಜಾ ಸಿನಿಮಾದ ಕಥೆಗೆ ಮನಸೋತು, ಕೆಲವು ದಿನಗಳ ಹಿಂದೆಯಷ್ಟೇ ಮಾಜಿ ಸಿಎಂ ಯಡಿಯೂರಪ್ಪ ನಟಿಸಿದ್ದರು. ಇದೀಗ ಸಚಿವ ಡಾ.ಕೆ.ಸುಧಾಕರ್ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ತನುಜಾ ಎನ್ನುವ ಹೆಣ್ಣುಮಗಳು ಕೋವಿಡ್ ಸಂದರ್ಭದಲ್ಲಿ ಪರೀಕ್ಷೆ ಬರೆಯಲಾಗದೇ ಸಹಾಯ ಕೋರಿದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಡಾ.ಕೆ.ಸುಧಾಕರ್, ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ್ ಈಶ್ವರ್ ಇನ್ನಿತರರ ಸಹಾಯದಿಂದ ಪರೀಕ್ಷೆ ಬರೆದು ವೈದ್ಯಕೀಯ ಸೀಟು ಪಡೆದಿದ್ದರು.
ಈ ಚಿತ್ರಕ್ಕೆ ರಾಜ್ಯಪ್ರಶಸ್ತಿ ವಿಜೇತ ಹರೀಶ್ ಎಂ.ಡಿ ಹಳ್ಳಿ ನಿರ್ದೇಶನವಿದ್ದು, Beyond Visions Cinemas ಬಂಡವಾಳ ಹೂಡಿದೆ. ಚಿತ್ರವು ಶಿವಮೊಗ್ಗ ಸುತ್ತಮತ್ತ ಹಾಗೂ ಬೆಂಗಳೂರಿನ ಹಲವೆಡೆ ಚಿತ್ರೀಕರಣಗೊಂಡಿದೆ. ತಾರಾಗಣದಲ್ಲಿ ರಾಜೇಶ್ ನಟರಂಗ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಕಾಸರಗೋಡು ಖ್ಯಾತಿಯ ಸಪ್ತಾ ಪಾವೂರ್, ಬಿ.ಎಸ್.ಯಡಿಯೂರಪ್ಪ, ಸಚಿವ ಡಾ.ಕೆ.ಸುಧಾಕರ್, ಪತ್ರಕರ್ತ ವಿಶ್ವೇಶ್ವರ ಭಟ್, ಸಂಧ್ಯಾ ಅರಕೆರೆ, ಕೈಲಾಶ್, ಬಾಲ ನಟಿ ಬೇಬಿ ಶ್ರೀ ಇದ್ದಾರೆ.
ಇದನ್ನೂ ಓದಿ: ಪುನೀತ್ ಅಣ್ಣನ ಮಗ ಯುವರಾಜ್ ಕುಮಾರ್ ಚಿತ್ರಕ್ಕೆ ಸಂತೋಷ್ ಆ್ಯಕ್ಷನ್ ಕಟ್ ಹೇಳೋದು ಪಕ್ಕಾ!