ETV Bharat / entertainment

ತಮಿಳು ನಿರ್ದೇಶಕಿ ಸುಧಾ ಕೊಂಗರ ಜೊತೆ ಹೊಂಬಾಳೆ ಸಂಸ್ಥೆಯ ಹೊಸ ಚಿತ್ರ

author img

By

Published : Apr 21, 2022, 4:48 PM IST

ನಿರ್ದೇಶಕಿ ಸುಧಾ ಕೊಂಗರ ಅವರ ಜೊತೆ ನಮ್ಮ ಹೊಸ ಸಿನಿಮಾ ಘೋಷಣೆ ಮಾಡಲು ಹೆಮ್ಮೆ ಆಗುತ್ತಿದೆ ಎಂದು ಹೊಂಬಾಳೆ ಸಂಸ್ಥೆ ಪೋಸ್ಟ್ ಮಾಡಿದೆ.

hombale films collaboration with sudha kongara
ಸುಧಾ ಕೊಂಗರ ಜೊತೆ ಹೊಂಬಾಳೆ ಸಂಸ್ಥೆಯ ಹೊಸ ಚಿತ್ರ

ಕನ್ನಡ ಚಿತ್ರರಂಗದ ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯ ನಿರ್ಮಾಣದ ಕೆಜಿಎಫ್ ಚಾಪ್ಟರ್ 2 ವಿಶ್ವದೆಲ್ಲೆಡೆ ಯಶಸ್ಸಿನ ಸದ್ದು ಮಾಡುತ್ತಿದೆ. ನಿರ್ಮಾಪಕ ವಿಜಯ್ ಕಿರಗಂದೂರ್​ಗೆ ಪ್ರೇಕ್ಷಕರು ಬಹುಪರಾಕ್ ಹೇಳುತ್ತಿದ್ದಾರೆ. ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಒಂದು ಮೈಲಿಗಲ್ಲು ನಿರ್ಮಾಣ ಮಾಡಿರುವ ಈ ಸಂಸ್ಥೆಯಿಂದ ಅನೇಕ ಸಿನಿಮಾಗಳು ನಿರ್ಮಾಣ ಆಗುತ್ತಿದ್ದು, ಈಗ ಮತ್ತೊಂದು ಹೊಸ ಚಿತ್ರದ ಬಗ್ಗೆ ಘೋಷಣೆಯಾಗಿದೆ.

ಈ ಬಾರಿ ತಮಿಳು ಚಿತ್ರರಂಗದ ಸುಧಾ ಕೊಂಗರ ಅವರು ಹೊಂಬಾಳೆ ಫಿಲ್ಮ್ಸ್ ನೊಂದಿಗೆ ಸಿನಿಮಾ ಮಾಡುವ ಅವಕಾಶ ಪಡೆದಿದ್ದಾರೆ. ಮೂಲತಃ ಆಂಧ್ರಪ್ರದೇಶದವರಾದ ಸುಧಾ ಕೊಂಗರ ತಮಿಳು ಚಿತ್ರರಂಗದಲ್ಲಿ ಒಂದಕ್ಕಿಂತ ಒಂದು ವಿಭಿನ್ನ ಸಿನಿಮಾ ಮಾಡಿ ಸೈ ಎನಿಸಿಕೊಂಡಿದ್ದಾರೆ. ಖ್ಯಾತ ನಟ ಸೂರ್ಯ ಅಭಿನಯದ ಸೂರರೈ ಪೋಟ್ರು ಚಿತ್ರವನ್ನು ನಿರ್ದೇಶಿಸುವ ಮೂಲಕ ಸುಧಾ ಕೊಂಗರ ಎಲ್ಲರ ಗಮನ ಸೆಳೆದಿದ್ದಾರೆ. ಇದೀಗ ಸುಧಾ ಕೊಂಗರ ಮತ್ತು ಹೊಂಬಾಳೆ ಸಂಸ್ಥೆ ಕೈ ಜೋಡಿಸಿರುವುದು ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿಸಿದೆ.

ಇದನ್ನೂ ಓದಿ: ತಂಬಾಕು ಉತ್ಪನ್ನ ಜಾಹೀರಾತಿನಿಂದ ಹೊರಬಂದ ಅಕ್ಷಯ್​ಕುಮಾರ್; ಅಭಿಮಾನಿಗಳಲ್ಲಿ ಕ್ಷಮೆ

ಕೆಲ ನೈಜ ಘಟನೆಗಳನ್ನು ಆಧರಿಸಿ ಸಿನಿಮಾ ಮಾಡಲು ಹೊಂಬಾಳೆ ಸಂಸ್ಥೆ ಮುಂದಾಗಿದೆ. ಸುಧಾ ಕೊಂಗರ ಅವರ ಜೊತೆ ನಮ್ಮ ಹೊಸ ಸಿನಿಮಾ ಘೋಷಣೆ ಮಾಡಲು ಹೆಮ್ಮೆ ಆಗುತ್ತಿದೆ ಎಂದು ಹೊಂಬಾಳೆ ಸಂಸ್ಥೆ ಪೋಸ್ಟ್ ಮಾಡಿದೆ. ಈ ಚಿತ್ರದ ಶೀರ್ಷಿಕೆ, ತಾರಾಬಳಗ ಹಾಗೂ ತಾಂತ್ರಿಕವರ್ಗದ ಬಗ್ಗೆ ಇನ್ನಷ್ಟೇ ಗೊತ್ತಾಗಬೇಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.