ETV Bharat / entertainment

ಅಭಿನಯ ಚಕ್ರವರ್ತಿ ಸುದೀಪ್​ ಸಾಧನೆಗೆ ಗೌರವ.. ಶೀಘ್ರದಲ್ಲೇ ವಿಶೇಷ ಅಂಚೆ ಲಕೋಟೆ ಬಿಡುಗಡೆ - etv bharata kannada

ಕನ್ನಡ ಸಿನಿಮಾ ಇಂಡಸ್ಟ್ರಿಗೆ ಬಂದು 25 ವರ್ಷಗಳನ್ನು ಪೂರೈಸಿರುವ ನಟ ಸುದೀಪ್​ ಅವರಿಗೆ ಅನೇಕರಿಂದ ಗೌರವ, ಸನ್ಮಾನಗಳು ಸಂದಿವೆ. ಇದೀಗ ಸುದೀಪ್​ ಅವರ ಸಾಧನೆಯನ್ನು ಗೌರವಿಸುವ ಸಲುವಾಗಿ ಭಾರತೀಯ ಅಂಚೆ ಇಲಾಖೆಯಿಂದ ವಿಶೇಷ ಅಂಚೆ ಲಕೋಟೆ ಬಿಡುಗಡೆ ಮಾಡಲಾಗುತ್ತಿದೆ.

Honor to Sudeep achievement :  special post envelope will be released soon
ಅಭಿನಯ ಚಕ್ರವರ್ತಿ ಸುದೀಪ್​ ಸಾಧನೆಗೆ ಗೌರವ - ಶೀಘ್ರದಲ್ಲೇ ವಿಶೇಷ ಅಂಚೆ ಲಕೋಟೆ ಬಿಡುಗಡೆ
author img

By

Published : Aug 31, 2022, 5:10 PM IST

ನಟ ಸುದೀಪ್​ ಕನ್ನಡ ಸೇರಿದಂತೆ ಭಾರತೀಯ ಚಿತ್ರರಂಗದಲ್ಲಿ ಮಾಡಿರುವ ಸಾಧನೆ ಅಪಾರ. ರಾಜ್ಯದಲ್ಲಿ ಮಾತ್ರವಲ್ಲದೇ ದೇಶಾದ್ಯಂತ ಅಪಾರ ಅಭಿಮಾನಿ ಬಳಗವನ್ನು ಕಿಚ್ಚ ಹೊಂದಿದ್ದಾರೆ. ವಿದೇಶಗಳಲ್ಲೂ ಹೆಸರು ಮಾಡಿದ್ದಾರೆ. ಅಭಿನಯದಲ್ಲಿ ಎಂದಿಗೂ ಎತ್ತಿದ ಕೈ. ಕನ್ನಡ ಸಿನಿಮಾ ಇಂಡಸ್ಟ್ರಿಗೆ ಬಂದು 25 ವರ್ಷಗಳನ್ನು ಪೂರೈಸಿರುವ ನಟ ಸುದೀಪ್​ ಅವರಿಗೆ ಈಗಾಗಲೇ ಅನೇಕರಿಂದ ಗೌರವ, ಸನ್ಮಾನಗಳು ಸಂದಿರುವುದು ಗೊತ್ತೇ ಇದೆ.

ಇದೀಗ ಹೆಬ್ಬುಲಿ ಸುದೀಪ್​ ಅವರ ಸಾಧನೆಯನ್ನು ಗೌರವಿಸುವ ಸಲುವಾಗಿ ಭಾರತೀಯ ಅಂಚೆ ಇಲಾಖೆಯಿಂದ ವಿಶೇಷ ಅಂಚೆ ಲಕೋಟೆ ಬಿಡುಗಡೆ ಮಾಡಲಾಗುತ್ತಿದೆ. ಭಾರತ ಸರ್ಕಾರದ ಅಂಚೆ ಇಲಾಖೆಯು, ದೇಶದ ಮಹತ್ತರ ಘಟನೆಗಳನ್ನು, ಪ್ರಶಸ್ತಿಗಳನ್ನು ಅಥವಾ ವ್ಯಕ್ತಿಗಳ ಸಾಧನೆಗಳನ್ನು ನೂರಾರು ವರ್ಷಗಳ ದಾಖಲೆಯಾಗಿ ಉಳಿಸಬೇಕೆಂಬ ಕಾರಣಕ್ಕೆ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡುತ್ತದೆ. ಅದೇ ಪ್ರಕಾರ 25 ವರ್ಷಗಳ ಸಿನಿ ಜರ್ನಿಯನ್ನು ಪೂರ್ಣಗೊಳಿಸಿರುವ ದೇಶದ ತಾರೆ ಸುದೀಪ್ ಅವರ ಸಾಧನೆಯನ್ನು ಸಹ ಭಾರತೀಯ ಅಂಚೆ ಇಲಾಖೆ ದಾಖಲೆ ಮಾಡುತ್ತಿದೆ.

ನಟ ಸುದೀಪ್ ಮನೆಗೆ ಅಂಚೆ ಇಲಾಖೆ ಅಧಿಕಾರಿಗಳು ಭೇಟಿ

ಈ ನಿಟ್ಟಿನಲ್ಲಿ ಇಂದು ಅಂಚೆ ಇಲಾಖೆಯ ಅಧೀಕ್ಷರಾದ ಶ್ರೀ ಮಾದೇಶ್ ಅವರು ಕಿಚ್ಚ ಸುದೀಪ್ ಅವರ ಮನೆಗೆ ಭೇಟಿ ನೀಡಿ ಅವರಿಂದ NOC ಅನ್ನು ಪಡೆದರು. ವಿಶೇಷ ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಿದರು.

ಇದನ್ನೂ ಓದಿ: ಹಬ್ಬದಂದೇ ಫ್ಯಾನ್ಸ್​ಗೆ ಸಿಹಿಸುದ್ದಿ ಕೊಟ್ಟ ನಟಿ ರಮ್ಯಾ..

ಕಿಚ್ಚ ಸುದೀಪ್ ಅವರ ಸಾಧನೆಗಳನ್ನು ಗುರುತಿಸಿ ವಿಶೇಷ ಅಂಚೆ ಲಕೋಟೆ ಮೂಲಕ ಗೌರವ ಸಲ್ಲಿಸುತ್ತಿರುವ ಭಾರತೀಯ ಅಂಚೆ ಇಲಾಖೆಯನ್ನು ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹೃದಯತುಂಬಿ ಶ್ಲಾಘಿಸುತ್ತಿದ್ದಾರೆ. ಈ ವಿಶೇಷ ಅಂಚೆ ಲಕೋಟೆಯ ಬಿಡುಗಡೆ ಸಮಾರಂಭವು ಶೀಘ್ರದಲ್ಲಿಯೇ ನೆರವೇರಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.