ETV Bharat / entertainment

'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಚಿತ್ರಕ್ಕೆ ಸ್ಯಾಂಡಲ್​ವುಡ್ ನಟರ ಸಾಥ್: ಪ್ರೊಟೆಸ್ಟ್ ಸಾಂಗ್ ರಿಲೀಸ್ - protest song

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ - ಪ್ರೊಟೆಸ್ಟ್ ಸಾಂಗ್ ರಿಲೀಸ್ - ಚಿತ್ರಕ್ಕೆ ಸ್ಟಾರ್​ ನಟರ ಸಾಥ್.

hostel hudugaru bekagiddare
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ
author img

By

Published : Jan 5, 2023, 7:57 PM IST

ಕನ್ನಡ ಚಿತ್ರರಂಗದಲ್ಲಿ ಉತ್ತಮ ಸಿನಿಮಾಗಳು ನಿರ್ಮಾಣವಾಗುತ್ತಿದೆ. 2022ರಲ್ಲಿ ಇಡೀ ಭಾರತೀಯ ಚಿತ್ರರಂಗವೇ ಸ್ಯಾಂಡಲ್​ವುಡ್​ನತ್ತ ತಿರುಗಿ ನೋಡುವಂತಹ ಸಿನಿಮಾಗಳು ನಿರ್ಮಾಣವಾಗಿವೆ. ಕಾಂತಾರ, ಕೆಜಿಎಫ್ 1 ಮತ್ತು ಕೆಜಿಎಫ್​​ 2ಗಳಂತಹ ಸಿನಿಮಾಗಳು ದೇಶದೆಲ್ಲೆಡೆ ಅಬ್ಬರಿಸಿದೆ. ಸ್ಯಾಂಡಲ್​ವುಡ್​ ಪ್ರತಿಷ್ಠೆ ಮತ್ತಷ್ಟು ಹೆಚ್ಚಿದೆ. ಹೊಸ ಪ್ರತಿಭೆಗಳ ಆಗಮನವೂ ಆಗುತ್ತಿದೆ. ಕಥೆ ಮಾತ್ರವಲ್ಲದೇ ಮೇಕಿಂಗ್​ ವಿಷಯದಲ್ಲೂ ಕಡಿಮೆ ಇಲ್ಲ ಸ್ಯಾಂಡಲ್​ವುಡ್. ಕನ್ನಡ ಸಿನಿಮಾಗಳ ಮೇಲಿ ನಿರೀಕ್ಷೆ ದುಪ್ಪಟ್ಟಾಗಿದೆ. ವಿಭಿನ್ನ ಕಥಾಹಂದರವುಳ್ಳ ಸಿನಿಮಾಗಳು ಹೆಚ್ಚು ಗಮನ ಸೆಳೆಯುತ್ತಿದೆ.

  • " class="align-text-top noRightClick twitterSection" data="">

'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ': ಸೆಟ್ಟೇರಿದಾಗಿಂದಲೂ ಕನ್ನಡ ಚಿತ್ರರಂದಲ್ಲಿ ಒಂದಲ್ಲ ಒಂದು ವಿಷಯಕ್ಕೆ ಸಖತ್ ಸುದ್ದಿಯಲ್ಲಿರುವ ಚಿತ್ರ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ'. ಕ್ರಿಯೇಟಿವ್ ಕಂಟೆಂಟ್, ಟೈಟಲ್​ ಹಾಗೂ ವಿಭಿನ್ನ ಪ್ರಚಾರದಿಂದಲೇ ಗಮನ ಸೆಳೆಯುತ್ತಿರೋ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ. ಚಿತ್ರಕ್ಕೆ ನಟರಾದ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಧನಂಜಯ, ಧ್ರುವ ಸರ್ಜಾ ಅವರು ಚಿತ್ರದ ಮೊದಲ ಸಾಂಗ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಬಿಡುಗಡೆ ಮಾಡುವ ಮೂಲಕ ಹೊಸ ತಂಡಕ್ಕೆ ಸಾಥ್ ನೀಡಿದ್ದಾರೆ.

ಪ್ರೊಟೆಸ್ಟ್ ಸಾಂಗ್: ಹೌದು, ಹಾಸ್ಟೆಲ್ ಹುಡುಗರು ಸಿನಿಮಾ ಸ್ಯಾಂಡಲ್​ವುಡ್ ಸಿನಿ ಪ್ರಿಯರಲ್ಲಿ ಅಪಾರ ನಿರೀಕ್ಷೆ ಹುಟ್ಟು ಹಾಕಿರೋ ಚಿತ್ರ. ಬಿಡುಗಡೆಗೆ ರೆಡಿಯಾಗಿರುವ ಈ ಚಿತ್ರ ಹಾಡುಗಳ ಮೂಲಕ ಪ್ರೇಕ್ಷಕರ ಮನಗೆಲ್ಲಲು ಹೊರಟಿದೆ. ಸದ್ಯ ಈ ಚಿತ್ರದ ಪ್ರೊಟೆಸ್ಟ್ ಸಾಂಗ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಹಾಸ್ಟೆಲ್​ನಲ್ಲಿರುವ ಹುಡುಗರ ಕಥೆ, ವ್ಯಥೆ ಇರುವ ಈ ಹಾಡನ್ನು ಸಖತ್ ಮಜವಾಗಿ ಕಟ್ಟಿಕೊಡಲಾಗಿದೆ. ಯೋಗರಾಜ್ ಭಟ್ ಸಾಹಿತ್ಯ, ಅಜನೀಶ್ ಲೋಕನಾಥ್ ಮ್ಯೂಸಿಕ್ ಕೇಳುಗರ ಗಮನ ಸೆಳೆಯುತ್ತಿದೆ.

ಚಿತ್ರತಂಡದ ಮಾಹಿತಿ..: ಯೂತ್ ಸಬ್ಜೆಕ್ಟ್ ಒಳಗೊಂಡ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹಲವು ರಂಗಭೂಮಿ ಪ್ರತಿಭೆಗಳು ತಾರಾ ಗಣದಲ್ಲಿದ್ದಾರೆ. ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೂಡ ಇದೆ. ಪುನೀತ್ ರಾಜ್​ಕುಮಾರ್, ಸುದೀಪ್, ರಮ್ಯಾ, ರಕ್ಷಿತ್ ಶೆಟ್ಟಿ ಹೀಗೆ ಸ್ಟಾರ್ ನಟ ನಟಿಯರು ಈ ಸಿನಿಮಾಗೆ ಸಾಥ್ ನೀಡಿದ್ದಾರೆ.

  • ‘Hostel ಹುಡುಗರು ಬೇಕಾಗಿದ್ದಾರೆ’ ಚಿತ್ರದ ಮೊದಲ Protest ವೀಡಿಯೋ ಸಾಂಗ್ ಇದೀಗ ಬಿಡುಗಡೆಯಾಗಿದೆ✨

    This is an absolute madcap. Hostel Hudugaru have turned their life into a song full of vim and vigour. #ProtestSong is now on YouTube, do watch it without a miss ☺️https://t.co/BRlYq6GTsh

    — Rakshit Shetty (@rakshitshetty) January 5, 2023 " class="align-text-top noRightClick twitterSection" data=" ">

ಆದರೆ ಸಿನಿಮಾ ವೀಕ್ಷಿಸಲು ಅಪ್ಪು ನಮ್ಮೊಂದಿಗಿಲ್ಲ ಅನ್ನೋದೇ ಬೇಸರದ ಸಂಗತಿ. ಪ್ರತೀ ಬಾರಿ ಯೂನಿಕ್ ಕಾನ್ಸೆಪ್ಟ್ ಮೂಲಕ ಚಿತ್ರದ ಪ್ರಚಾರ ಮಾಡಿ ಅಪಾರ ನಿರೀಕ್ಷೆ ಹುಟ್ಟು ಹಾಕಿರುವ ಈ ಚಿತ್ರವನ್ನು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮೆಚ್ಚಿಕೊಂಡು ಪರಂವಃ ಪಿಕ್ಚರ್ಸ್ ಮೂಲಕ ಈ ಚಿತ್ರವನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಈಗಾಗಲೇ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಪ್ರಮೋಶನ್​ ವಿಭಿನ್ನವಾಗಿ ನಡೆದಿದ್ದು, ಈಗಲೂ ಮುಂದುವರೆದಿದೆ.

ಇದನ್ನೂ ಓದಿ: ಹಾಸ್ಟೆಲ್ ಹುಡುಗರ ಪ್ರತಿಭಟನೆಗೆ ಮಣಿದ ನಟಿ ರಮ್ಯಾ... ನಟನೆ ಕೊನೆಗೂ ಕಮ್‌ ಬ್ಯಾಕ್​!

ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಇದೆ. ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲಂಸ್ ಬ್ಯಾನರ್ ಅಡಿ ನಿರ್ಮಾಣ ಮಾಡಲಾಗಿದೆ. ಈ ಚಿತ್ರವನ್ನು ಫೆಬ್ರವರಿ ತಿಂಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್​ ಮಾಡಿಕೊಂಡಿದೆ.

ಇದನ್ನೂ ಓದಿ: ದೀಪಿಕಾ ಪಡುಕೋಣೆ ಹುಟ್ಟುಹಬ್ಬಕ್ಕೆ ವಿಶೇಷವಾಗಿ ಶುಭಕೋರಿದ ಶಾರುಖ್ ಖಾನ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.