ETV Bharat / entertainment

ಇಬ್ಬನಿ ತಬ್ಬಿದ ಇಳೆಯಲಿ.. ವಿಹಾನ್ ಗೌಡ ನಟನೆಯ ಚಿತ್ರಕ್ಕೆ ಟೈಟಲ್ ಫಿಕ್ಸ್ - actress ankita amar

ನಟಿ ಅಂಕಿತಾ ಅಮರ್​ ಮತ್ತು ನಟ ವಿಹಾನ್ ಗೌಡ ನಟನೆಯ ಚಿತ್ರಕ್ಕೆ ಇಬ್ಬನಿ ತಬ್ಬಿದ ಇಳೆಯಲಿ ಎಂದು ಟೈಟಲ್ ಫಿಕ್ಸ್ ಮಾಡಲಾಗಿದೆ.

ibbani tabbida ileyali title fix for new movie of actor vihan gowda
ಇಬ್ಬನಿ ತಬ್ಬಿದ ಇಳೆಯಲಿ
author img

By

Published : Aug 20, 2022, 7:53 PM IST

Updated : Aug 20, 2022, 7:59 PM IST

ಪಂಚತಂತ್ರ ಸಿನಿಮಾ ಖ್ಯಾತಿಯ ವಿಹಾನ್‌ ಗೌಡ ಕೆಲ ದಿನಗಳ ಹಿಂದೆ ಹೆಸರಿಡದ ಹೊಸ ಸಿನಿಮಾ ಮೂಲಕ ಮತ್ತೆ ಸ್ಯಾಂಡಲ್​ವುಡ್​ನತ್ತ ಮುಖ ಮಾಡಿದರು. ಇದೀಗ ಈ ಚಿತ್ರಕ್ಕೆ ಇಬ್ಬನಿ ತಬ್ಬಿದ ಇಳೆಯಲಿ ಎಂಬ ಹೆಸರನ್ನು ಇಡಲಾಗಿದೆ. ವಿಹಾನ್ ಗೌಡ ಜೋಡಿಯಾಗಿ ಅಂಕಿತಾ ಅಮರ್​ ಮಿಂಚಲಿದ್ದಾರೆ.

ಪ್ರೀತಿ ಎಂದರೆ ಏನು? ಹಳೆಯ ನೆನಪುಗಳಾ? ನಾಳೆ ಜೊತೆಯಾಗಿರಬೇಕು ಎಂಬ ಕನಸುಗಳಾ? ದೂರವಾದ ನಂತರದ ಚಡಪಡಿಕೆಯಾ? ಇವೆಲ್ಲದರ ಸಂಗಮವೇ 'ಇಬ್ಬನಿ ತಬ್ಬಿದ ಇಳೆಯಲಿ'. ಇದೊಂದು ಕಾವ್ಯಾತ್ಮಕ ಪ್ರೇಮಕಥೆಯಾಗಿದ್ದು, ಬೇಷರತ್ತಾಗಿ ಪ್ರೀತಿಸುವುದನ್ನು ಸಂಭ್ರಮಿಸುವ ಚಿತ್ರ. ನಿನ್ನೆ, ಇಂದು ಮತ್ತು ನಾಳೆಯ ಪ್ರೀತಿಯನ್ನು ತೋರಿಸುವ ಚಿತ್ರ. ಪ್ರೇಕ್ಷಕರು ಚಿತ್ರವನ್ನು ನೋಡುತ್ತ, ಹಾಡುತ್ತ, ನಲಿಯುತ್ತ, ತಮ್ಮನ್ನೇ ತಾವು ಮರೆಯುವಂತಹ ಚಿತ್ರ.

  • " class="align-text-top noRightClick twitterSection" data="">

ಕಾಲೇಜು ದಿನಗಳಲ್ಲಿ ಚಿಗರೊಡೆಯುವ ಪ್ರೇಮಕಥೆಯು ನಂತರದ ದಿನಗಳಲ್ಲಿ ಅಂತ್ಯವಾಗುತ್ತದೆ. ಹೀಗೆ ಒಂದು ದಶಕದ ವಿವಿಧ ಕಾಲಘಟ್ಟವನ್ನು ಈ ಚಿತ್ರವು ಸೂಕ್ಷ್ಮವಾಗಿ ತೋರಿಸಲಿದ್ದು, ಇಲ್ಲಿ ಹಸಿರು ಎಷ್ಟು ಮುಖ್ಯವೋ, ಆಧುನಿಕ ನಗರದೃಶ್ಯಗಳು ಸಹ ಅಷ್ಟೇ ಪ್ರಮುಖ ಪಾತ್ರವಹಿಸುತ್ತದೆ. ಅಷ್ಟೇ ಅಲ್ಲ, ಬೇಸಿಗೆಯ ಘಮ, ಚಳಿಗಾಲದ ಹಿತ ಮತ್ತು ಮಳೆಗಾಲದ ಮಾಧುರ್ಯವೂ ಈ ಚಿತ್ರದಲ್ಲಿರಲಿದೆ.

ಈ ಹಿಂದೆ ರಕ್ಷಿತ್​ ಶೆಟ್ಟಿ ಅವರ ಸವೆನ್​ ಆಡ್ಸ್​ ಚಿತ್ರಕಥಾ ವಿಭಾಗದಲ್ಲಿ, 'ಕಿರಿಕ್​ ಪಾರ್ಟಿ' ಮತ್ತು 'ಅವನೇ ಶ್ರೀಮನ್ನಾರಾಯಣ' ಚಿತ್ರಗಳ ಚಿತ್ರಕಥೆಯಲ್ಲಿ ತೊಡಗಿಸಿಕೊಂಡಿದ್ದ ಮತ್ತು 'ರೇನ್​ಬೋ ಲ್ಯಾಂಡ್​' ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್​ ಬೆಳ್ಳಿಯಪ್ಪ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಪರಂವಃ ಸ್ಟುಡಿಯೋಸ್​ನಡಿ ರಕ್ಷಿತ್​ ಶೆಟ್ಟಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಹೊಸ ಕಲಾವಿದರು ಮತ್ತು ತಂತ್ರಜ್ಞರನ್ನು ಆಯ್ಕೆ ಮಾಡಲಾಗಿದೆ. ಈಗಾಗಲೇ ನಾಯಕ-ನಾಯಕಿಯಾಗಿ ವಿಹಾನ್​ ಮತ್ತು ಅಂಕಿತಾ ಅಮರ್​ ಆಯ್ಕೆಯಾಗಿದ್ದು, ಸದ್ಯದಲ್ಲೇ ಎರಡನೆಯ ನಾಯಕಿಯ ಅಧಿಕೃತ ಘೋಷಣೆಯಾಗಲಿದೆ.

ಇದನ್ನೂ ಓದಿ: ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಅಭಿನಯದ ಎಮರ್ಜೆನ್ಸಿ ಚಿತ್ರಕ್ಕೆ ನಟಿ ಮಹಿಮಾ ಚೌಧರಿ ಎಂಟ್ರಿ

ಗಗನ್​ ಬದೇರಿಯಾ ಸಂಗೀತ ಸಂಯೋಜಿಸುತ್ತಿದ್ದಾರೆ. ನ್ಯೂಯಾರ್ಕ್​ ಫಿಲಂ ಅಕಾಡೆಮಿಯಲ್ಲಿ ಕಲಿತು ಬಂದಿರುವ ಶ್ರೀವತ್ಸನ್​ ಸೆಲ್ವರಾಜನ್​ ಈ ಚಿತ್ರಕ್ಕೆ ಛಾಯಾಗ್ರಾಹಕರಾಗಿ ಆಯ್ಕೆ ಆಗಿದ್ದಾರೆ. ಈ ಹಿಂದೆ 'ಗಿರ್​ಗಿಟ್ಲೆ' ಕಥೆಯನ್ನು ನಿರ್ದೇಶಿದ್ದ ಶಶಿಕುಮಾರ್​ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಇಬ್ಬನಿ ತಬ್ಬಿದ ಇಳೆಯಲಿ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್​ ಮೊದಲ ವಾರದಲ್ಲಿ ಪ್ರಾರಂಭವಾಗಲಿದ್ದು, 2023ರ ಬೇಸಿಗೆಯಲ್ಲಿ ಬಿಡುಗಡೆಯಾಗಲಿದೆ.

Last Updated : Aug 20, 2022, 7:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.