ETV Bharat / entertainment

'ಶಿವಾಜಿ ಬಹದ್ದೂರ್'ನಲ್ಲಿ ರಜನಿಕಾಂತ್ ಆಪ್ತಮಿತ್ರ ರಾಜ್ ಬಹದ್ದೂರ್ ನಟನೆ - etv bharat kannada

Shivaji Bahadur movie: ಆರೋಬ್​ ಕಾರ್ತಿಕ್ ನಿರ್ದೇಶನದ 'ಶಿವಾಜಿ ಬಹದ್ದೂರ್' ಸಿನಿಮಾದಲ್ಲಿ ರಜನಿಕಾಂತ್​ ಸ್ನೇಹಿತ ರಾಜ್ ಬಹದ್ದೂರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

In the movie Shivaji Bahadur Rajinikanths close friend Raj Bahadur acted
'ಶಿವಾಜಿ ಬಹದ್ದೂರ್'
author img

By ETV Bharat Karnataka Team

Published : Nov 10, 2023, 8:48 PM IST

ಸ್ಯಾಂಡಲ್​ವುಡ್​ಗೆ ಹೊಸ ಪ್ರತಿಭೆಗಳ ಎಂಟ್ರಿ ಆಗುತ್ತಲೇ ಇದೆ. ವಿಭಿನ್ನ ಕಥೆಗಳೊಂದಿಗೆ ಪ್ರೇಕ್ಷಕರ ಮುಂದೆ ಬರುತ್ತಾರೆ. ಕನ್ನಡ ಚಿತ್ರರಂಗದಲ್ಲಿ ನಾಲ್ಕೈದು ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಆರೋಬ್​ ಕಾರ್ತಿಕ್​ ಆ್ಯಕ್ಷನ್​ ಕಟ್​ ಹೇಳುವುದರ ಜೊತೆಗೆ ಸಂಗೀತ ನಿರ್ದೇಶನ ಮಾಡುತ್ತಿರುವ ಹೊಸ ಚಿತ್ರ 'ಶಿವಾಜಿ ಬಹದ್ದೂರ್'. ಈ ಚಿತ್ರದಲ್ಲಿ ಕಾಲಿವುಡ್​ ಸೂಪರ್​ಸ್ಟಾರ್ ರಜನಿಕಾಂತ್ ಆಪ್ತಮಿತ್ರ ರಾಜ್ ಬಹದ್ದೂರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

In the movie Shivaji Bahadur Rajinikanths close friend Raj Bahadur acted
'ಶಿವಾಜಿ ಬಹದ್ದೂರ್' ಚಿತ್ರತಂಡ

ಇತ್ತೀಚೆಗೆ ಶಿವಾಜಿ ಬಹದ್ದೂರ್ ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ನಿರ್ದೇಶಕ ಹೆಚ್ ವಾಸು, ಸ್ವಸ್ತಿಕ್ ಶಂಕರ್, ನಟ ಷಣ್ಮುಖ ಗೋವಿಂದರಾಜು, ಗಾಯಕ ಆಲೂರು ನಾಗಪ್ಪ, ಸಿರಿ ಮ್ಯೂಸಿಕ್ ಚಿಕ್ಕಣ್ಣ ಸೇರಿದಂತೆ ಸಾಕಷ್ಟು ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ಈ ಚಿತ್ರದ ಬಗ್ಗೆ ಮಾತು ಶುರುಮಾಡಿದ ನಿರ್ದೇಶಕ ಆರೋನ್ ಕಾರ್ತಿಕ್, "ಶಿವಾಜಿ ಬಹದ್ದೂರ್ ಎಂದರೆ ಎರಡು ಪಾತ್ರಗಳ ಹೆಸರು. ನಮ್ಮ ಚಿತ್ರದಲ್ಲಿ ಶಿವಾಜಿ ಎಂಬುದು ಪ್ರಧಾನ ಮಂತ್ರಿ ಪಾತ್ರದ ಹೆಸರು. ಬಹದ್ದೂರ್ ಎಂದರೆ ಮುಖ್ಯಮಂತ್ರಿ ಪಾತ್ರದ ಹೆಸರು. ಶಿವಾಜಿ ಪಾತ್ರದ ಧ್ವನಿ ಮಾತ್ರ ಸಿನಿಮಾದಲ್ಲಿ ಕೇಳುತ್ತದೆ. ಬಹದ್ದೂರ್ ಅಂದರೆ ಮುಖ್ಯಮಂತ್ರಿ ಪಾತ್ರದಲ್ಲಿ ರಾಜ್ ಬಹದ್ದೂರ್ ನಟಿಸುತ್ತಿದ್ದಾರೆ. ಪ್ರಪಂಚಕ್ಕೆ ಮಾರಕವಾಗಿರುವ ಉಗ್ರವಾದ (ಭಯೋತ್ಪಾದನೆ) ತಡೆಗಟ್ಟಲು ಹೋರಾಡುವ ಉತ್ತಮ ಮುಖ್ಯಮಂತ್ರಿಯಾಗಿ ರಾಜ್ ಬಹದ್ದೂರ್ ಕಾಣಿಸಿಕೊಳ್ಳಲಿದ್ದಾರೆ. ಜೊತೆಗೆ ವಿಲನ್ ಪಾತ್ರದಲ್ಲಿ ಖ್ಯಾತ ನಟ ಅಮೀರ್ ಖಾನ್ ಸಹೋದರ ಫೈಸಲ್ ಖಾನ್ ನಟಿಸಲಿದ್ದಾರೆ" ಎಂದು ತಿಳಿಸಿದರು.

ಇದನ್ನೂ ಓದಿ: 'ಗರಡಿ'ಗೆ ಫುಲ್ ಮಾರ್ಕ್ಸ್ ಕೊಟ್ಟ ಸ್ಯಾಂಡಲ್​ವುಡ್​ ಸ್ಟಾರ್ಸ್

ಬಳಿಕ ರಜನಿಕಾಂತ್ ಸ್ನೇಹಿತ ನಟ ರಾಜ್ ಬಹದ್ದೂರ್ ಮಾತನಾಡಿ, "ರಜನಿಕಾಂತ್ ಅವರಿಗೆ ನಾನು ಈ ಚಿತ್ರದಲ್ಲಿ ನಟಿಸುತ್ತಿರುವ ವಿಷಯ ತಿಳಿಸಿದೆ. ತುಂಬಾ ಖುಷಿಪಟ್ಟರು. ಚಿತ್ರ ಸಿದ್ದವಾದ ಮೇಲೆ ಬಂದು ನೋಡುವುದಾಗಿಯೂ ಹೇಳಿದ್ದಾರೆ. ನಾನು ಈ ಹಿಂದೆ ರಜನಿ ಅವರ ಚಿತ್ರಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದೆ. ಮೈನ್ ಲೀಡ್​ನಲ್ಲಿ ನಟಿಸುತ್ತಿರುವ ಮೊದಲ ಚಿತ್ರವಿದು. ನಾನು ನಟಿಸುತ್ತಿರುವ ವಿಷಯ ತಿಳಿದು ಇಲ್ಲಿನ ರಜನಿಕಾಂತ್ ಅಭಿಮಾನಿಗಳು ತುಂಬಾ ಸಂತೋಷ ಪಟ್ಟಿದ್ದಾರೆ. ಈ ಸಿನಿಮಾ ಬಿಡುಗಡೆಗೆ ಕಾಯುತ್ತಿರುವುದಾಗಿಯೂ ಹೇಳಿದ್ದಾರೆ. ರಜನಿಕಾಂತ್ ಅಭಿಮಾನಿಗಳು ಸಿನಿಮಾ ನೋಡಿದರೆ ಸಿನಿಮಾ ಗೆದ್ದ ಹಾಗೆ" ಎಂದು ಸಂತಸ ವ್ಯಕ್ತಪಡಿಸಿದರು.

ಶಿವಪೂರ್ಣ ಲೋಕೇಶ್ ಹಾಗೂ ಮುತ್ತುರಾಜ್ ಈ ಸಿನಿಮಾವನ್ನು ನಿರ್ಮಾ‌ಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ಇನ್ನು ರಂಗಿನ ರಾಟೆ ಚಿತ್ರದ ಖ್ಯಾತಿಯ ರಾಜೀವ್ ರಾಥೋಡ್, ಪಲ್ಲವಿ ಪ್ರಕಾಶ್, ಸುಶ್ಮಿತ, ಶೋಭ, ಗಣೇಶ್ ರಾವ್ ಮುಂತಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

ಇದನ್ನೂ ಓದಿ: 'ಸತ್ಯಭಾಮ' ಟೀಸರ್​ ಔಟ್​: ಆ್ಯಕ್ಷನ್​ ಮೂಡ್​ನಲ್ಲಿ ಪೊಲೀಸ್​ ಅಧಿಕಾರಿ ಕಾಜಲ್​ ಅಗರ್ವಾಲ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.