ETV Bharat / entertainment

ಪಂಚಭಾಷೆಗಳಲ್ಲಿ ಬಿಡುಗಡೆಯಾಗಲಿದೆ ರಂಜನ್‌ ಛತ್ರಪತಿ ಅಭಿನಯದ 'ಇನಾಮ್ದಾರ್' ಚಿತ್ರ - ಟ್ರೇಲರ್​ ಅನಾವರಣ - Ranjan Chatrapati

ರಂಜನ್ ಛತ್ರಪತಿ ಅಭಿನಯದ ಇನಾಮ್ದಾರ್ ಚಿತ್ರದ ಟ್ರೇಲರ್​ ಅನಾವರಣಗೊಂಡಿದೆ.

Inamdar
ಇನಾಮ್ದಾರ್ ಟ್ರೇಲರ್​ ಅನಾವರಣ
author img

By ETV Bharat Karnataka Team

Published : Oct 7, 2023, 1:26 PM IST

ಉತ್ತರ‌ ಕರ್ನಾಟಕದ ಪ್ರತಿಭೆಗಳು ನಟರಾಗಿ, ನಿರ್ದೇಶಕರು ಹಾಗೂ ನಿರ್ಮಾಪಕರಾಗಿ ಕನ್ನಡ ಚಿತ್ರರಂಗದಲ್ಲಿ ಯಶಸ್ಸು ಕಾಣುತ್ತಿದ್ದಾರೆ. ಈ‌ ಸಾಲಿಗೀಗ ರಂಜನ್ ಛತ್ರಪತಿ ಹೊಸ ಸೇರ್ಪಡೆ. ಇನಾಮ್ದಾರ್ ಎಂಬ‌ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ‌. ಬಹುತೇಕ ಚಿತ್ರೀಕರಣ ಮುಗಿಸಿ ರಿಲೀಸ್​ಗೆ ರೆಡಿಯಾಗುತ್ತಿರುವ ಇನಾಮ್ದಾರ್ ಚಿತ್ರದ ಆಫೀಶಿಯಲ್ ಟ್ರೇಲರ್ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ. ಸಂದೇಶ್ ಶೆಟ್ಟಿ ನಿರ್ದೇಶನದ 'ಇನಾಮ್ದಾರ್' ಚಿತ್ರದ ಟ್ರೇಲರ್​ ಅನ್ನು ನಿರಂಜನ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಉದ್ಯಮಿ ಕರುಣಾಕರ್ ರೆಡ್ಡಿ, ಎಂ.ಕೆ ಮಠ ಸೇರಿದಂತೆ ಮೊದಲಾದ ಗಣ್ಯರು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

  • " class="align-text-top noRightClick twitterSection" data="">

ನಿರ್ದೇಶಕ ಸಂದೇಶ್ ಶೆಟ್ಟಿ ಮಾತನಾಡಿ, ‌ಇದು ಶಿವಾಜಿ ಮಹಾರಾಜರನ್ನು ಆರಾಧಿಸುವ ಉತ್ತರ ಕರ್ನಾಟಕ ಮೂಲದ "ಇನಾಮ್ದಾರ್" ಕುಟುಂಬ ಮತ್ತು ದಕ್ಷಿಣದ ಕರಾವಳಿ ಭಾಗದ ಕಾಡಿನಲ್ಲಿ ವಾಸಿಸುವ ಹಾಗೂ ಶಿವನ ಆರಾಧಕರಾದ ಕಾಡು ಜನರ ನಡುವೆ ನಡೆಯುವ ವರ್ಣ‌ಸಂಘರ್ಷದ ಕಥೆ. ಚಿತ್ರಕ್ಕೆ 'ಕಪ್ಪು ಸುಂದರಿಯ ಸುತ್ತ' ಎಂಬ ಅಡಿಬರಹವಿದೆ. ಬೆಳಗಾವಿ, ಕುಂದಾಪುರ, ಚಾಮರಾಜನಗರ ಸೇರಿದಂತೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.‌ ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್ ಹಾಗೂ ಹಾಡುಗಳು ಜನರ ಮನ ಗೆದ್ದಿವೆ.

Inamdar
ಇನಾಮ್ದಾರ್ ಟ್ರೇಲರ್​ ಅನಾವರಣ

ಇನಾಮ್ದಾರ್ ಚಿತ್ರದ ನಾಯಕ ರಂಜನ್ ಛತ್ರಪತಿ ಮಾತನಾಡಿ, ನಮ್ಮ ಚಿತ್ರ ಆರಂಭವಾದಾಗ ಬೇರೆ ನಿರ್ಮಾಪಕರಿದ್ದರು. ಕಾರಣಾಂತರಗಳಿಂದ ಅವರು ಈ ಚಿತ್ರದಿಂದ ದೂರ ಸರಿದರು. ಆಗ ನಿರಂಜನ್ ಶೆಟ್ಟಿ ತಲ್ಲೂರು ಅವರು ಮುಂದೆ ಬಂದು ಈ ಚಿತ್ರವನ್ನು ಪೂರ್ಣಗೊಳಿಸಿದ್ದಾರೆ. ನಾನು ಈ ಚಿತ್ರದಲ್ಲಿ "ಇನಾಮ್ದಾರ್" ಕುಟುಂಬದ ಮಗನಾಗಿ ಕಾಣಿಸಿಕೊಂಡಿದ್ದೇನೆ. ಈ ಸಿನಿಮಾ ನಿಜಕ್ಕೂ‌ ಪ್ರೇಕ್ಷಕರಿಗೆ ಇಷ್ಟ ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನ್ಯಾಚುರಲ್ ಸ್ಟಾರ್ ನಾನಿಗೆ ಕಿಚ್ಚ ಸುದೀಪ್ ಸಾಥ್: 'ಹಾಯ್ ನಾನ್ನ' ಸಿನಿಮಾ ಸಾಂಗ್​ ರಿಲೀಸ್

ಟ್ರೇಲರ್ ನೋಡಿ ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಿದೆ ಎಂದು ಮಾತು ಆರಂಭಿಸಿದ ನಟ ಪ್ರಮೋದ್ ಶೆಟ್ಟಿ, ಈ ಚಿತ್ರದಲ್ಲಿ ನನ್ನದು ಕಾಳಿಂಗ ಎಂಬ ಕಾಡಿನ ನಾಯಕನ ಪಾತ್ರ. ಸದ್ಯದಲ್ಲೇ "ಇನಾಮ್ದಾರ್" ಚಿತ್ರ ಬಿಡುಗಡೆಯಾಗುತ್ತಿದೆ ನೋಡಿ ಹಾರೈಸಿ ಎಂದು ಕೇಳಿಕೊಂಡರು. ನಿರ್ಮಾಪಕ ನಿರಂಜನ್ ಶೆಟ್ಟಿ ತಲ್ಲೂರು ಮಾತನಾಡಿ, ನಾನು ಉದ್ಯಮಿ. ಸಿನಿಮಾ ರಂಗ ಹೊಸತು. ಇಡೀ ಚಿತ್ರತಂಡದ ಸಹಕಾರದಿಂದ "ಇನಾಮ್ದಾರ್" ಚಿತ್ರ ಚೆನ್ನಾಗಿ ಮೂಡಿ ಬಂದಿದೆ ಎಂದು ತಿಳಿಸಿದರು.

ಇದನ್ನೂ ಓದಿ: ನಟ ನಾಗಭೂಷಣ್ ಕಾರು ಅಪಘಾತ ಪ್ರಕರಣ: ಪೊಲೀಸರ ಕೈಸೇರಿದ ಆರ್​ಟಿಒ ಅಧಿಕಾರಿಗಳ ವರದಿ

ಚಿತ್ರದಲ್ಲಿ ರಂಜನ್ ಛತ್ರಪತಿ ಜೊತೆ ನಾಯಕಿಯಾಗಿ ಚಿರಶ್ರೀ ನಟಿಸಿದ್ದಾರೆ. ಅಂಚನ್, ಎಸ್ತರ್ ನೊರೋನ್ಹಾ, ಸಂದೇಶ್ ಶೆಟ್ಟಿ ಆಜ್ರಿ, ಎಂ.ಕೆ ಮಠ, ಥ್ರಿಲ್ಲರ್‌ಮಂಜು, ಶರತ್ ಲೋಹಿತಾಶ್ವ, ಅವಿನಾಶ್, ರಘು ಪಾಂಡೇಶ್ವರ್, ಕರಣ್ ಕುಂದರ್, ಯಶ್ ಆಚಾರ್ಯ, ನಾಗರಾಜ ಬೈಂದೂರು, ಪ್ರಶಾಂತ್ ಸಿದ್ಧಿ, ಸಂಜು ಬಸಯ್ಯ, ಮಾಹಬಲೇಶ್ವರ ಕ್ಯಾದಿಕೆ, ಲಕ್ಷ್ಮೀ ಪ್ರಿಯ, ಚಿತ್ರಕಲಾ ರಾಜೇಶ್, ರಕ್ಷಿತ್ ರಾಮಚಂದ್ರ ಶೆಟ್ಟಿ ಸೇರಿದಂತೆ ಮತ್ತಿತರರು ನಟಿಸಿದ್ದಾರೆ. ಈ ಚಿತ್ರಕ್ಕೆ ರಾಕಿ ಸೋನು ಹಾಗೂ ನಕುಲ್ ಅಭಯಂಕರ್ ಸಂಗೀತವಿದ್ದು, ಛಾಯಾಗ್ರಾಹಕ ಮುರಳಿ, ಶಿವರಾಜ್ ಮೇಹು ಸಂಕಲನವಿದೆ. ಸದ್ಯ ಟ್ರೇಲರ್​ನಿಂದಲೇ ಕುತೂಹಲ ಹುಟ್ಟಿಸಿರೋ ಇನಾಮ್ದಾರ್ ಚಿತ್ರ ಇದೇ ಅಕ್ಟೋಬರ್ 27 ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.