ETV Bharat / entertainment

ಡಿಸೆಂಬರ್ ಒಳಗೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ: ಸಿಎಂ ಬೊಮ್ಮಾಯಿ - valeemka housewarming

ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

CM Bommai on Inauguration of Vishnuvardhan Memorial
'ವಲ್ಮೀಕ' ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಿಎಂ ಭಾಗಿ
author img

By

Published : Nov 27, 2022, 3:49 PM IST

Updated : Nov 27, 2022, 4:03 PM IST

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ತಿಳಿಸಿದ್ದಾರೆ.

ಹಿಂದೆ ವಿಷ್ಣುವರ್ಧನ್ ಅವರಿದ್ದ ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ ವಲ್ಮೀಕ ಹೆಸರಿನ ಮನೆಯ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಅವರು ಪಾಲ್ಗೊಂಡರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತಿ ವಿಷ್ಣುವರ್ಧನ್ ಅವರು ಖುದ್ದಾಗಿ ಬಂದು ಗೃಹಪ್ರವೇಶಕ್ಕೆ ಆಹ್ವಾನ ನೀಡಿದ್ದರು. ವಿಷ್ಣುವರ್ಧನ್ ಅವರಿದ್ದ ಮನೆಯನ್ನು ಇನ್ನಷ್ಟು ಚೆಂದ ಮಾಡಿದ್ದಾರೆ. ನವೀಕರಣಗೊಂಡಿರುವ ವಿಷ್ಣುವರ್ಧನ್ ಅವರ ಮನೆಯ ಹಿಂದೆ ಭಾರತಿ ವಿಷ್ಣುವರ್ಧನ್ ಅವರ ಪ್ರಯತ್ನ ಹಾಗೂ ಶ್ರಮ ಎದ್ದು ಕಾಣುತ್ತಿದೆ. ವಿಷ್ಣುವರ್ಧನ್ ಅವರ ತ್ಯಾಗವನ್ನು ಅಳವಡಿಸಿದ್ದಾರೆ ಎನ್ನುವುದು ನನ್ನ ಭಾವನೆ. ಅವರಿಗೆ ಶುಭ ಕೋರಲು ಬಂದಿದ್ದೇನೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಮೈಸೂರಿನಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುತ್ತಾ ಬಂದಿದೆ. ಡಿಸೆಂಬರ್ ಒಳಗೆ ಸ್ಮಾರಕದ ಉದ್ಘಾಟನೆಯನ್ನು ಅದ್ಧೂರಿಯಾಗಿ ಮಾಡಲು ತೀರ್ಮಾನಿಸಲಾಗಿದೆ. ಹೆಚ್ಚಿನ ವಿವರಗಳನ್ನು ಅವರ ಕುಟುಂಬದವರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು. ವಿಷ್ಣುವರ್ಧನ್ ಅವರ ಮೇರು ವ್ಯಕ್ತಿತ್ವ ಹಾಗೂ ಘನತೆಗೆ ತಕ್ಕ ಹಾಗೆ ಕಾರ್ಯಕ್ರಮವನ್ನು ವೈಭವಯುತವಾಗಿ ಆಯೋಜಿಸಲಾಗುವುದು ಎಂದು ಸಿಎಂ ಹೇಳಿದರು.

ಚುಕ್ಕಿ ರೋಗ ತಡೆಗೆ ಕ್ರಮ: ಚಿಕ್ಕಮಗಳೂರಿನಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ ಬಂದಿದ್ದು, ವಿಜ್ಞಾನಿಗಳ ಸಂಶೋಧನೆ ಒಂದು ಹಂತಕ್ಕೆ ಬಂದಿದೆ. ಅದಕ್ಕೆ ಪರಿಹಾರ ನೀಡುವ ಹಾಗೂ ರೋಗ ಹರಡದಂತೆ ಕ್ರಮ ಕೈಗೊಳ್ಳಲು ಅನುದಾನ ಬಿಡುಗಡೆಯಾಗಿದೆ. ಮಲೆನಾಡ ಭಾಗದಲ್ಲಿ ಆನೆ ಹಾವಳಿ ಹೆಚ್ಚಿದ್ದು, ನಾಲ್ಕು ಜಿಲ್ಲೆಗಳಲ್ಲಿ ಅರಣ್ಯ ಪಡೆಗಳನ್ನು ರಚಿಸಿ, ವಾಹನ ಸಲಕರಣೆಗೆ ಅನುದಾನ ಬಿಡುಗಡೆ ಆಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಭಾರತಿ ವಿಷ್ಣುವರ್ಧನ್ 'ವಲ್ಮೀಕ' ಗೃಹ ಪ್ರವೇಶ ಸಮಾರಂಭ: ಸಿಎಂ ಬೊಮ್ಮಾಯಿ ಭಾಗಿ

ಶೃಂಗೇರಿಯಲ್ಲಿ ಆಸ್ಪತ್ರೆ: ಶೃಂಗೇರಿಯಲ್ಲಿ ಆಸ್ಪತ್ರೆ ನಿರ್ಮಿಸಲು ತೀರ್ಮಾನವಾಗಿದೆ. ಸ್ಥಳದ ಸಮಸ್ಯೆ ಇದ್ದು, ಅದನ್ನು ಬಗೆಹರಿಸಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದರು.

Last Updated : Nov 27, 2022, 4:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.