ಬೆಂಗಳೂರು: ರಾಜ್ಯ ಸರ್ಕಾರ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ಈ ಸಂಬಂಧ ನಾಳೆ ಸಂಜೆ 4 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿರುವ ಸಮಾರಂಭಕ್ಕೆ ಸರ್ಕಾರವು ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಹಾಗೂ ಸಹೋದರ ರಾಘವೇಂದ್ರ ರಾಜ್‌ಕುಮಾರ್ ಸೇರಿದಂತೆ ಇಡೀ ಕುಟುಂಬಕ್ಕೆ ಆಹ್ವಾನ ನೀಡಿದೆ.
ಸಚಿವರಾದ ಆರ್.ಅಶೋಕ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಪುನೀತ್ ಮನೆಗೆ ಆಗಮಿಸಿ, ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ಅವರನ್ನು ಗೌರವಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಸಮಾರಂಭಕ್ಕೆ ಅತಿಥಿಗಳಾಗಿ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ತೆಲುಗಿನ ಸ್ಟಾರ್ ನಟ ಜ್ಯೂನಿಯರ್ ಎನ್.ಟಿ.ಆರ್ ಹಾಗೂ ಸುಧಾಮೂರ್ತಿ ಆಗಮಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರಿಂದ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ.
ಇದನ್ನೂ ಓದಿ : ನೂರಾರು ವಿದ್ಯಾರ್ಥಿಗಳ ಚಿತ್ರಕಲೆಯಲ್ಲಿ ಅರಳಿದ ಅಪ್ಪು