ETV Bharat / entertainment

ಕಿಂಗ್​​ ಖಾನ್​​ 'ಜವಾನ್​' ಸಿನಿಮಾದಲ್ಲಿ ಅಲ್ಲು ಅರ್ಜುನ್​; ಅಭಿಮಾನಿಗಳಲ್ಲಿ ಗರಿಗೆದರಿದ ನಿರೀಕ್ಷೆ - ಈಟಿವಿ ಭಾರತ ಕನ್ನಡ

ಬಾಲಿವುಡ್​ ನಟ ಶಾರುಖ್​ ಖಾನ್​ ನಟನೆಯ ಜವಾನ್​ ಸಿನಿಮಾದಲ್ಲಿ ಟಾಲಿವುಡ್​ ಸ್ಟಾರ್​ ಅಲ್ಲು ಅರ್ಜುನ್​ ಮಿಂಚಲಿದ್ದಾರೆ.

jawan
ಜವಾನ್
author img

By

Published : Apr 22, 2023, 4:47 PM IST

ಟಾಲಿವುಡ್​ ಸ್ಟೈಲಿಶ್​ ಸ್ಟಾರ್​ ಅಲ್ಲು ಅರ್ಜುನ್​ ಸದ್ಯದಲ್ಲೇ ಬಾಲಿವುಡ್​ ಪ್ರವೇಶಿಸಲಿದ್ದಾರೆ ಮತ್ತು ಸೂಪರ್​ ಸ್ಟಾರ್​ ಸಿನಿಮಾದಲ್ಲಿ ಅವರು ನಟಿಸಲಿದ್ದಾರೆ ಎಂಬ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್​ ಆಗಿದ್ದವು. ಅದಾಗ್ಯೂ ಅವುಗಳನ್ನು ಸುಳ್ಳು ಎಂದು ತಳ್ಳಿಹಾಕಲಾಯಿತು. ಆದರೆ ಇತ್ತೀಚೆಗಿನ ಕೆಲವು ಮಾಹಿತಿಗಳ ಪ್ರಕಾರ, ಈ ವಿಷಯಗಳು ನಿಜವೆನಿಸುತ್ತಿವೆ. ಬಾಲಿವುಡ್​ ಬಾದ್​ ಶಾ ಶಾರುಖ್​ ಖಾನ್​ ಅಭಿನಯದ ಜವಾನ್​ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಪಾತ್ರವಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಪುಷ್ಪ ನಟ ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಮಿಂಚಲಿದ್ದಾರಂತೆ.

ಜೊತೆಗೆ ಈ ಸಿನಿಮಾಗೆ ಅಲ್ಲು ಶೆಡ್ಯೂಲ್​ ಕೂಡ ಕಂಪ್ಲೀಟ್​ ಆಗಿದೆ ಎನ್ನಲಾಗುತ್ತಿದೆ. ಈ ಸುದ್ದಿ ಕೇಳಿದ ಅಭಿಮಾನಿಗಳು ಫುಲ್​ ಖುಷಿಯಾಗಿದ್ದಾರೆ. ಬಾಲಿವುಡ್​ ಸ್ಟಾರ್​ ನಟನ ಸಿನಿಮಾದಲ್ಲಿ ಅಲ್ಲು ಅರ್ಜುನ್​ ನೋಡಲು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಈ ಬಗ್ಗೆ ಚಿತ್ರತಂಡ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಈ ಸಿನಿಮಾದಲ್ಲಿ ಸ್ಟೈಲಿಶ್​ ಸ್ಟಾರ್​ ಎಂಟ್ರಿ ಕೊಡುವುದನ್ನು ಅಭಿಮಾನಿಗಳಿಗೆ ಸರ್​ಪ್ರೈಸ್​ ಆಗಿಯೇ ಇಡಲು ನಿರ್ದೇಶಕರು ಪ್ಲಾನ್​ ಮಾಡಿದ್ದಾರೆ ಎಂಬುದು ನೆಟ್ಟಿಗರ ಅಭಿಪ್ರಾಯ.

'ಜವಾನ್​' ಚಿತ್ರದ ಮೂಲಕ ಈಗಾಗಲೇ ದಕ್ಷಿಣ ಭಾರತದ ಹಲವು ತಾರೆಯರು ಸದ್ದು ಮಾಡಲು ಸಿದ್ಧರಾಗಿದ್ದಾರೆ. ಚಿತ್ರದ ನಿರ್ದೇಶಕ ಕೂಡ ದಕ್ಷಿಣದವರೇ. ಇದಲ್ಲದೇ ಸೌತ್​ ಬ್ಯೂಟಿ ನಯನತಾರಾ ಕೂಡ ಇದ್ದಾರೆ. ಜೊತೆಗೆ ವಿಜಯ್​ ಸೇತುಪತಿ ಮತ್ತು ಪ್ರಿಯಾಮಣಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಇವರ ಹೊರತಾಗಿ ಬಾಲಿವುಡ್​ ಬ್ಯೂಟಿ ದೀಪಿಕಾ ಪಡುಕೋಣೆ ನಟಿಸಲಿದ್ದಾರೆ.

ಶಾರುಖ್​ ಅವರ ನಿರ್ಮಾಣ ಸಂಸ್ಥೆ ರೆಡ್​ ಚಿಲ್ಲೀಸ್​ ಎಂಟರ್​ಟೈನ್​ಮೆಂಟ್​ ಈ ಚಿತ್ರವನ್ನು ನಿರ್ಮಿಸುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್​ ಸಿನಿ ಪ್ರೇಕ್ಷಕರ ಮೆಚ್ಚುಗೆಯನ್ನು ಪಡೆದಿದೆ. ಶರವೇಗದಲ್ಲಿ ಚಿತ್ರೀಕರಗೊಳ್ಳುತ್ತಿರುವ ಚಿತ್ರ ಜೂನ್​ 2ರಂದು ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: 'ಸೂತ್ರಧಾರಿ' ಜಪ ಮಾಡುತ್ತಿರುವ ಚಂದನ್ ಶೆಟ್ಟಿ: ಶೀಘ್ರದಲ್ಲೇ ಟ್ರೇಲರ್ ಬಿಡುಗಡೆ

ಇನ್ನು ಅಲ್ಲು ಅರ್ಜುನ್​ ಸಿನಿಮಾ ಬಗ್ಗೆ ಹೇಳುವುದಾದರೆ, ಸದ್ಯ ಪುಷ್ಪ 2 ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶರವೇಗದಲ್ಲಿ ಚಿತ್ರೀಕರಣಗೊಳ್ಳುತ್ತಿರುವ ಈ ಸಿನಿಮಾ ಈಗಾಗಲೇ ಟೀಸರ್​ನಿಂದ ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಮೂಡಿಸಿದೆ. ಸುಕುಮಾರನ್​ ನಿರ್ದೇಶನದ ಈ ಚಿತ್ರದಲ್ಲಿ ಅಲ್ಲು ಅರ್ಜುನ್​ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಮಲಯಾಳಂ ಸ್ಟಾರ್​ ಫಹಾದ್​ ಫಾಜಿಲ್​ ಜೊತೆಗೆ ಅನುಸೂಯಾ ಮತ್ತು ಸುನೀಲ್​ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ವರ್ಷದ ಕೊನೆಯಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆಯಿದೆ.

ಇದಲ್ಲದೇ ತೆಲುಗಿನ ಖ್ಯಾತ ನಿರ್ದೇಶಕ ಅರ್ಜುನ್​ ರೆಡ್ಡಿ ಖ್ಯಾತಿಯ ಸಂದೀಪ್​ ರೆಡ್ಡಿ ವಾಂಗ ಜೊತೆ ಅಲ್ಲು ಅರ್ಜುನ್​ ಮುಂದಿನ ಸಿನಿಮಾ ಮಾಡಲಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರವನ್ನು ಭೂಷಣ್​ ಕುಮಾರ್​ ಅವರ ಫಿಲ್ಮ್​ ಸ್ಟುಡಿಯೋ ಮತ್ತು ಟಿ ಸೀರಿಸ್​ ಹಾಗೂ ಸಂದೀಪ್​ ರೆಡ್ಡಿ ಅವರ ಭದ್ರಕಾಳಿ ಪಿಕ್ಚರ್ಸ್​ ನಿರ್ಮಾಣ ಮಾಡುತ್ತಿದೆ. ಅಲ್ಲು ಅರ್ಜುನ್​ ಹೊಸ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲೇ ರಿಲೀಸ್​ ಆಗಲಿದೆ. ದೊಡ್ಡ ಮಟ್ಟದಲ್ಲಿ ಸಿನಿಮಾ ಪ್ಲ್ಯಾನ್​ ಮಾಡಿರುವ ಚಿತ್ರತಂಡ ಸದ್ಯ ಪ್ರಿ ಪ್ರೊಡಕ್ಷನ್​ ಕೆಲಸದಲ್ಲಿ ತೊಡಗಿದೆ. ​

ಇದನ್ನೂ ಓದಿ: ಟೀಕೆ, ಟ್ರೋಲ್​ಗಳನ್ನು ಎದುರಿಸಿ ಮಾದರಿ ದಂಪತಿಯಾದ ಪ್ರಿಯಾಂಕಾ ಚೋಪ್ರಾ-ನಿಕ್​ ಜೋನಾಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.