ETV Bharat / entertainment

ಪ್ರಮೋದ್ ಶೆಟ್ಟಿ ಮುಖ್ಯಭೂಮಿಕೆಯ 'ಜಲಪಾತ' ಬಿಡುಗಡೆಗೆ ಸಿದ್ಧ

ನಟ ಪ್ರಮೋದ್ ಶೆಟ್ಟಿ ಮುಖ್ಯಭೂಮಿಕೆಯಲ್ಲಿರುವ 'ಜಲಪಾತ' ಸಿನಿಮಾ ಅಕ್ಟೋಬರ್ 13ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ.

Jalapata movie release on october 13
ಪ್ರಮೋದ್ ಶೆಟ್ಟಿ ಮುಖ್ಯಭೂಮಿಕೆಯಲ್ಲಿರುವ 'ಜಲಪಾತ' ಸಿನಿಮಾ ಬಿಡುಗಡೆಗೆ ಸಿದ್ಧ
author img

By ETV Bharat Karnataka Team

Published : Oct 6, 2023, 10:37 PM IST

Updated : Oct 6, 2023, 10:51 PM IST

ಖಳನಟ ಹಾಗೂ ಪೋಷಕ ಪಾತ್ರಗಳಲ್ಲಿ ಸ್ಯಾಂಡಲ್​​ವುಡ್​ನಲ್ಲಿ ತನ್ನದೇ ಬೇಡಿಕೆ ಹೊಂದಿರುವ ನಟ‌ ಪ್ರಮೋದ್ ಶೆಟ್ಟಿ. ಇವರು ವಿಭಿನ್ನ ಪಾತ್ರದಲ್ಲಿ ಅಭಿನಯಿಸಿರುವ 'ಜಲಪಾತ' ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯಗೊಂಡಿದ್ದು, ಬಿಡುಗಡೆಗೆ ರೆಡಿಯಾಗಿದೆ.

'ಪದವಿಪೂರ್ವ' ಖ್ಯಾತಿಯ ರಜನೀಶ್ ಪೂರ್ಣ ಪ್ರಮಾಣದ ನಾಯಕನಾಗಿ ನಟಿಸಿದ್ದು, 'ವೈಶಂಪಾಯನ ತೀರ'ದಿಂದ ಗಮನ ಸೆಳೆದ ಮಲೆನಾಡು ಚೆಲುವೆ ನಾಗಶ್ರೀ ಬೇಗಾರ್​ ಈ ಚಿತ್ರದ ನಾಯಕಿಯಾಗಿದ್ದಾರೆ. ರಮೇಶ್ ಬೇಗಾರ್ ಶೃಂಗೇರಿ ರಚಿಸಿ ನಿರ್ದೇಶಿಸಿರುವ 'ಜಲಪಾತ' ಚಿತ್ರಕ್ಕೆ ಸೆನ್ಸಾರ್ ಮಂಡಳಿ 'ಯು' ಸರ್ಟಿಫಿಕೇಟ್ ನೀಡಿದ್ದು, ಯಾವುದೇ ಕಟ್ಸ್ ಮತ್ತು ಮ್ಯೂಟ್ಸ್ ಇಲ್ಲದೇ ಚಿತ್ರ ತೇರ್ಗಡೆ ಹೊಂದಿದೆ.

ಮಲೆನಾಡು ಭಾಷೆ, ಸಂಸ್ಕೃತಿ ಮತ್ತು ಪ್ರಕೃತಿಯನ್ನು ಆಧರಿಸಿದ ವಿಶಿಷ್ಟ ಸಿನಿಮಾ 'ಜಲಪಾತ'ದಲ್ಲಿ ರವಿಕುಮಾರ್, ನಟರಾಜ್, ವಿಶ್ವನಾಥ್, ರೇಖಾ ಪ್ರೇಮ್ ಕುಮಾರ್ ದತ್ತಾತ್ರಿ, ಚಂದ್ರಶೇಖರ್, ಎಂ.ಆರ್.ಸುರೇಶ್ ಮೊದಲಾದವರು ಬಣ್ಣ ಹಚ್ಚಿದ್ದಾರೆ.

Jalapata movie release on october 13
ಪ್ರಮೋದ್ ಶೆಟ್ಟಿ ಮುಖ್ಯಭೂಮಿಕೆಯಲ್ಲಿರುವ 'ಜಲಪಾತ' ಸಿನಿಮಾ ಬಿಡುಗಡೆಗೆ ಸಿದ್ಧ

ಪರಿಸರ ಕಾಳಜಿ ಮತ್ತು ಅರಿವನ್ನು ಮೂಡಿಸುವ ಫ್ಯಾಮಿಲಿ ಡ್ರಾಮ ಶೈಲಿ ಹೊಂದಿರುವ 'ಜಲಪಾತ' ಮಲೆನಾಡ ಸಿಗ್ನೇಚರ್ ಅನ್ನು ಹಿರಿತೆರೆಗೆ ತರುವ ಸಾಂಸ್ಕೃತಿಕ ಪ್ರಯತ್ನವಾಗಿದೆ ಎಂದು ನಿರ್ದೇಶಕ ರಮೇಶ್ ಬೇಗಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಮೋದ್​ ಶೆಟ್ಟಿ ನಟನೆಯ 'ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ' ಚಿತ್ರದ ಫಸ್ಟ್​ ಲುಕ್​ ರಿಲೀಸ್​

ಈ ಸಿನಿಮಾದಲ್ಲಿ ಸಾದ್ವಿನಿ ಕೊಪ್ಪ ಸಂಗೀತವಿರುವ 3 ಹಾಡುಗಳು ಈಗಾಗಲೇ ಜನಪ್ರಿಯವಾಗಿದ್ದು, ಹೆಸರಾಂತ ಗಾಯಕ ವಿಜಯ ಪ್ರಕಾಶ್ ಥೀಮ್ ಸಾಂಗ್​ಗೆ ಧ್ವನಿಯಾಗಿದ್ದಾರೆ. ವಿನು ಮನಸು ಹಿನ್ನೆಲೆ ಸಂಗೀತ, ಶಶೀರ ಛಾಯಾಗ್ರಹಣ ಮತ್ತು ಅವಿನಾಶ್ ಸಂಕಲನ ಜಲಪಾತ ಚಿತ್ರಕ್ಕಿದೆ. ಇಂಡಸ್ ಹರ್ಬ್ಸ್​ನ ಟಿ.ಸಿ.ರವೀಂದ್ರ ತುಂಬರಮನೆ ಈ ಸಿನಿಮಾವನ್ನು ನಿರ್ಮಿಸಿದ್ದು, ಇದೇ ಅಕ್ಟೋಬರ್ 13ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ.

ಬೆಳ್ಳಿತೆರೆಯಲ್ಲಿ ಮಿಂಚಲು ರೆಡಿಯಾದ ನಾಗಶ್ರೀ: ಮಲೆನಾಡ ಪರಿಸರದ ಕಥೆ ಹೊಂದಿರುವ "ಜಲಪಾತ" ಸಿನಿಮಾದ ಲೀಡ್ ರೋಲ್​ನಲ್ಲಿ ನಾಗಶ್ರೀ ಬೇಗಾರ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಪೂರ್ವಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲ್ಯದಿಂದಲೂ ಮಲೆನಾಡು ಭಾಗದಲ್ಲಿ ಯಕ್ಷಗಾನ, ನಾಟಕ, ನೃತ್ಯ ಸೇರಿದಂತೆ ಕಿರುತೆರೆಯಲ್ಲಿಯೂ ಹೆಸರು ಮಾಡಿದ್ದಾರೆ. ಅಲ್ಲದೇ ಹುಚ್ಚಿಕ್ಕಿ ಎಂಬ ಕಿರುಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ.

ವೈಶಂಪಾಯನ ತೀರ ಸಿನಿಮಾದಲ್ಲಿ ಅತ್ಯಂತ ವಿಭಿನ್ನ ಪಾತ್ರ ನಿರ್ವಹಿಸಿ ಪ್ರೇಕ್ಷಕರ ಮತ್ತು ವಿಮರ್ಶಕರ ಮೆಚ್ಚುಗೆಗೆ ಪಾತ್ರರಾದರು. ಹಲವು ಪ್ರತಿಷ್ಠಿತ ನಾಟಕೋತ್ಸವ, ಯುವ ಜನೋತ್ಸವದಲ್ಲಿ ಶ್ರೇಷ್ಠ ನಟಿ ಪ್ರಶಸ್ತಿಗಳನ್ನು ಬಾಚಿಕೊಂಡ ರಂಗಭೂಮಿ ಪ್ರತಿಭೆ ನಾಗಶ್ರೀ. ಜಲಪಾತ ಚಿತ್ರದಲ್ಲಿ 3 ಶೇಡ್ ಇರುವ ಸಂಕೀರ್ಣ ಪಾತ್ರವೊಂದನ್ನು ನಿರ್ವಹಿಸಿದ್ದಾರೆ. ಮಲೆನಾಡ ಪ್ರಾದೇಶಿಕ ಭಾಷೆಯನ್ನು ನಾಗಶ್ರೀ ಸಮರ್ಪಕವಾಗಿ ಬಳಸಿಕೊಂಡಿದ್ದು, ಈ ಪ್ರತಿಭೆಗೆ ಉಜ್ವಲ ಅವಕಾಶಗಳು ಸಿಗಲಿ ಎಂಬುದು ಸಿನಿಮಾ ಅಭಿಮಾನಿಗಳ ಆಶಯ.

ಇದನ್ನೂ ಓದಿ: ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ ಮೂಡಿಬಂತು ಜಲಪಾತ ಸಿನಿಮಾ ಸಾಂಗ್​

Last Updated : Oct 6, 2023, 10:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.